ಐದೂ ಗ್ಯಾರಂಟಿ ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ: ಸಿಎಂ ಸಿದ್ದರಾಮಯ್ಯ

Date:

Advertisements

“ಕಳೆದ ಚುನಾವಣೆಯ ವೇಳೆ ನಾವು ನೀಡಿದ್ದ ಗ್ಯಾರಂಟಿ ಯೋಜನೆಗಳಿಂದಾಗಿ ಬರಗಾಲದಲ್ಲೂ ಕೂಡ ರಾಜ್ಯದ ಬಡವರು ಸಂಕಷ್ಟದಿಂದ ಪಾರಾಗಿದ್ದಾರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಿಂಧನೂರಿನಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ತಿಮ್ಮಾಪೂರ ಏತ ನೀರಾವರಿ ಯೋಜನೆ ಲೋಕಾರ್ಪಣೆ ಮಾಡಿ, ಜಲ ಜೀವನ್ ಮಿಷನ್ ಯೋಜನೆಯ ಶಂಕುಸ್ಥಾಪನೆ ನೆರವೇರಿಸುವ ಜತೆಗೆ ಸಿಂಧನೂರು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸಿ ಅವರು ಮಾತನಾಡಿದರು.

“ನಾವು ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ. ಮೋದಿ ಅವರು ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಭಾಷಣ ಮಾಡಿದ್ದರು. ಆದರೆ ಅವರ ಮಾತು ಮತ್ತೊಮ್ಮೆ ಸುಳ್ಳಾಗಿದೆ” ಎಂದು ಟೀಕಿಸಿದರು.

Advertisements

“120 ಕೋಟಿ ಮಹಿಳೆಯರು ಉಚಿತವಾಗಿ ಬಸ್‌ನಲ್ಲಿ ಪ್ರಯಾಣ ಮಾಡಿದ್ದಾರೆ. 1.16 ಕೋಟಿ ಮಹಿಳೆಯರ ಖಾತೆಗೆ ತಿಂಗಳಿಗೆ 2 ಸಾವಿರ ಕೊಡಲಾಗುತ್ತಿದೆ. ಹೀಗೆ ಪ್ರತಿ ಕುಟುಂಬಕ್ಕೆ ತಿಂಗಳಿಗೆ 5-6 ಸಾವಿರ ರೂಪಾಯಿ ಉಳಿತಾಯ ಆಗುತ್ತಿದೆ. ನಾವು ಕನ್ನಡಿಗರು ಪ್ರತೀ ವರ್ಷ ಕೇಂದ್ರಕ್ಕೆ 4 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಹಣ ಕೊಡುತ್ತಿದ್ದೇವೆ. ಆದರೆ ಕೇಂದ್ರ ನಮಗೆ ವಾಪಸ್ ಕೊಡುವುದು ಕೇವಲ 52 ಸಾವಿರ ಕೋಟಿ ಮಾತ್ರ. ಬರಗಾಲ ಬಂದಿದ್ದರೂ ಕೇಂದ್ರದಿಂದ ನಯಾಪೈಸೆ ಬಂದಿಲ್ಲ. ಇದನ್ನು ರಾಜ್ಯದ ಜನತೆ ಬಿಜೆಪಿ ಸಂಸದರಿಗೆ ಪ್ರಶ್ನಿಸಬೇಕು” ಎಂದು ಕರೆ ನೀಡಿದರು.

“ಕೇಂದ್ರ ಸರ್ಕಾರ ರಾಜ್ಯದ ಜನರ ನೆರವಿಗೆ ಬರದಿದ್ದರೂ ನಾವು ರಾಜ್ಯದ ಜನರ ಕೈ ಬಿಡುವುದಿಲ್ಲ. ಹಿಂದಿನ ಬಿಜೆಪಿ ಸರ್ಕಾರ ನೀರಾವರಿ ಹೆಸರಲ್ಲಿ ಹಣ ತಿಂದು ತೇಗಿ ಹೋಗಿದೆ. ಆದರೂ ನಾವು ರಾಜ್ಯದ ಜನರಿಗೆ ಅಗತ್ಯ ನೀರಾವರಿ ಸವಲತ್ತು ಒದಗಿಸುತ್ತೇವೆ” ಎಂದು ಭರವಸೆ ನೀಡಿದರು.

ಇದನ್ನು ಓದಿದ್ದೀರಾ? ನಿಗಮ ಮಂಡಳಿ ನೇಮಕ | ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ: ಡಿ.ಕೆ. ಶಿವಕುಮಾರ್

“ಸಿಂಧನೂರಿಗೆ ಇದುವರೆಗೂ ಶೇ.80ರಷ್ಟು ನೀರಾವರಿ ಸವಲತ್ತು ಸಿಕ್ಕಿದೆ. ಶಾಸಕರು ನೂರಕ್ಕೆ ನೂರರಷ್ಟು ನೀರಾವರಿ ಮಾಡಲು ಬದ್ಧರಾಗಿದ್ದಾರೆ. ನಮ್ಮ ಸರ್ಕಾರ ಇದಕ್ಕೆ ಸಂಪೂರ್ಣ ಸಹಕಾರ ನೀಡಿ ರೈತರ ಬದುಕನ್ನು ಉನ್ನತೀಕರಿಸಲು ನಾವು ಬದ್ದರಾಗಿದ್ದೇವೆ. ನವಿಲೆ ಬ್ಯಾಲೆನ್ಸಿಂಗ್ ಅಣೆಕಟ್ಟು ನಿರ್ಮಿಸಲು ನಮ್ಮ ಸರ್ಕಾರ ಸಿದ್ಧವಿದೆ” ಎಂದು ಭರವಸೆ ನೀಡಿದರು.

ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಜಿಲ್ಲೆಯ ಶಾಸಕರುಗಳಾದ ಹಂಪಯ್ಯ ನಾಯಕ್, ಮಾನಪ್ಪ ಡಿ.ವಜ್ಜಲ್, ಬಸವನಗೌಡ ದದ್ದಲ್, ಡಾ.ಎಸ್.ಶಿವರಾಜ್ ಪಾಟೀಲ್, ಆರ್. ಬಸವನಗೌಡ ತುರ್ವಿಹಾಳ, ಶರಣಗೌಡ ಪಾಟೀಲ್ ಬಯ್ಯಾಪುರ ಸೇರಿ ಹಲವು ಮುಖಂಡರು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X