ಹೇಡಿಯ ಕೊನೆಯ ಅಸ್ತ್ರವೇ ಅಪಪ್ರಚಾರ, ವೈಯಕ್ತಿಕ ನಿಂದನೆ: ಛಲವಾದಿ ನಾರಾಯಣಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ತಿರುಗೇಟು

Date:

ರಾಜಕೀಯವಾಗಿ, ಸೈದ್ದಂತಿಕವಾಗಿ ನನ್ನನ್ನು ಟಾರ್ಗೆಟ್ ಮಾಡಲಾಗದೆ ಅಸಹಾಯಕ ಸ್ಥಿತಿಯಲ್ಲಿರುವ ಬಿಜೆಪಿಯವರು ನನ್ನ ವಿರುದ್ಧದ ವೈಯಕ್ತಿಕ ದಾಳಿಯಲ್ಲಿ ತೃಪ್ತಿ ಕಾಣುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

- Advertisement -

ಕಲಬುರಗಿ ಪ್ರವಾಸದಲ್ಲಿರುವ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆಡಿದ ಅವಹೇಳನಕಾರಿ ಮಾತಿಗೆ ಎಕ್ಸ್‌ ತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, “ಬಿಜೆಪಿಯವರ ದ್ವೇಷದ ಹೇಳಿಕೆಗಳು ನನಗೆ ಹೊಸದಲ್ಲ, ನಾನು ಇವರ ಹಗರಣಗಳನ್ನು ಬಯಲಿಗಿಟ್ಟಿದ್ದೇ ಈ ವೈಯಕ್ತಿಕ ನಿಂದನೆಗಳಿಗೆ ಕಾರಣ ಎನ್ನುವುದೂ ನನಗೆ ತಿಳಿದಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

“ಗಂಗಾ ಕಲ್ಯಾಣ ಹಗರಣ, ಬಿಟ್ ಕಾಯಿನ್ ಹಗರಣ, KKRDB ಹಗರಣ, ಕೋವಿಡ್ ಹಗರಣ ಹಾಗೂ PSI ಹಗರಣಗಳನ್ನು ಜನರ ಮುಂದಿಟ್ಟಿದ್ದನ್ನು ಬಿಜೆಪಿಗರಿಗೆ ಸಹಿಸಲಾಗುತ್ತಿಲ್ಲ. RSS ನವರನ್ನು ಸೈದ್ದಂತಿಕ ನೆಲೆಗಟ್ಟಿನಲ್ಲಿ ಬೆತ್ತಲುಗೊಳಿಸುತ್ತಿರುವುದೂ ಸಹ ಬಿಜೆಪಿಗರ ಈ ಅಸಹನೆಗೆ ಪ್ರಮುಖ ಕಾರಣ” ಎಂದು ತಿರುಗೇಟು ನೀಡಿದ್ದಾರೆ.

“ಈ ಹಿಂದೆ ಕಾನ್ವೆಂಟ್ ದಲಿತ ಎಂದಿದ್ದರು, ಪ್ರಿಯಾಂಕ್ ಎನ್ನುವ ಹೆಸರು ಹೆಣ್ಣೋ ಗಂಡೋ ಗೊತ್ತಿಲ್ಲ ಎಂದಿದ್ದರು, ದೇಹ ಬೆಳದಿದೆ, ಬುದ್ದಿ ಬೆಳೆದಿಲ್ಲ ಎಂದಿದ್ದರು, ಬಿಜೆಪಿಯ ಅಭ್ಯರ್ಥಿ ನನ್ನ ಕುಟುಂಬವನ್ನು ಮುಗಿಸುತ್ತೇನೆ ಎಂದು ಸಂಚು ರೂಪಿಸಿದ್ದರು, ಬಿಜೆಪಿಯವರನ್ನು ಪ್ರಶ್ನಿಸುವ ಕಾರಣಕ್ಕೆ ಪೈಲ್ಸ್ ಬಂದಿದೆ ಎಂದಿದ್ದರು, ಹಾಲು ಜಾಸ್ತಿ ಕುಡಿದಿದ್ದೇನೆ ಎಂದಿದ್ದರು, ಈಗ ಹೊಸದಾಗಿ ನಾಯಿ ಎಂಬ ಪದವನ್ನೂ ಬಳಸಿದ್ದಾರೆ” ಎಂದು ಹೇಳಿದ್ದಾರೆ.

“ಬಿಜೆಪಿಯವರ ಈ ಎಲ್ಲ ನಿಂದನೆಗಳು ನನ್ನ ವಿರುದ್ಧ ಅವರಿಗಿರುವ ಅಪರಿಮಿತ ಅಸಹನೆಯನ್ನು ತೋರಿಸುತ್ತದೆ. ಹೇಡಿಯ ಕೊನೆಯ ಅಸ್ತ್ರವೇ ಅಪಪ್ರಚಾರ ಮತ್ತು ವೈಯಕ್ತಿಕ ನಿಂದನೆ ಎನ್ನುವ ನಾಣ್ಣುಡಿಗೆ ಬಿಜೆಪಿಯವರೇ ಉದಾಹರಣೆಯಾಗಿದ್ದಾರೆ” ಎಂದು ಕಿಡಿಕಾರಿದ್ದಾರೆ.

“ನಾನು ಮೋದಿಯವರ ಬಗ್ಗೆ ಮಾತಾಡಬಾರದು, ರಾಷ್ಟೀಯ ವಿಷಯಗಳನ್ನು ಪ್ರಸ್ತಾಪಿಸಬಾರದು ಎನ್ನುವ ಬಿಜೆಪಿಗರು ತಮ್ಮ ಪಕ್ಷದ ಸಣ್ಣ ಪುಟ್ಟ ನಾಯಕರು, ಬಾಡಿಗೆ ಭಾಷಣಕಾರರು, ವಕ್ತಾರರು ದೇಶ ಕಂಡಂತಹ ಮಹಾನ್ ನಾಯಕರಾದ ಬಾಬಾಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿ, ನೆಹರುಯವರ, ಬಗ್ಗೆ ಮಾತಾಡಬಹುದು, ದೇಶದ ಆರ್ಥಿಕತೆ, ರಕ್ಷಣೆ, ಅಂತರರಾಷ್ಟ್ರೀಯ ಸಂಬಂಧಗಳ ಬಗ್ಗೆ ಮಾತಾಡಬಹುದು, ದೊಡ್ಡ ವಿಷಯಗಳ ಬಗ್ಗೆ, ದೊಡ್ಡವರ ಬಗ್ಗೆ ಅವರು ಮಾತನಾಡಿದರೆ ಮೇಧಾವಿಗಳು, ನಾನು ಮಾತಾಡಿದರೆ “ನಾಯಿ”! ಮಾಜಿ ಮುಖ್ಯಮಂತ್ರಿಯ ಮಗ ಬಿಜೆಪಿಯ ರಾಜ್ಯಾಧ್ಯಕ್ಷರಾದರೆ ಅರ್ಹತೆ, ನಾನು ಮೂರು ಚುನಾವಣೆ ಎದುರಿಸಿ ಜನರಿಂದ ಆಯ್ಕೆಯಾಗಿ ಸ್ಥಾನ ಪಡೆದರೆ ಕುಟುಂಬದ ಪ್ರಭಾವ! ಬಿಜೆಪಿಯವರ ಲಾಜಿಕ್ ಚೆನ್ನಾಗಿದೆ!” ಎಂದು ವ್ಯಂಗ್ಯವಾಡಿದ್ದಾರೆ.

“ಇದೇ ಮೆಲ್ಮನೆ ವಿಪಕ್ಷ ನಾಯಕರು ಒಂದು ಸವಾಲು ಎಸೆದಿದ್ದರು, ಆ ಸವಾಲಿಗೆ ನಾನು ಪುರಾವೆ ಒದಗಿಸಿದ್ದೆ, ಅವರು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶಿಸುವ ಬದಲು ವೈಯಕ್ತಿಕ ದಾಳಿಯ ಮೊರೆ ಹೋಗಿದ್ದಾರೆ. ಅಂಬೇಡ್ಕರ್ ಅವರ ಸಂವಿಧಾನದ ಅಡಿಯಲ್ಲಿ ನಡೆಯುತ್ತಿರುವ ಈ ದೇಶದಲ್ಲಿ ಯಾರೂ ಪ್ರಶ್ನಾತೀತರಲ್ಲ, ಪ್ರಶ್ನಿಸುವುದು, ಹಕ್ಕನ್ನು ಪ್ರತಿಪಾಧಿಸುವುದು ಪ್ರಜಾಪ್ರಭುತ್ವದ ಮೂಲ ಲಕ್ಷಣ. ಇಲ್ಲಿ ಎಲ್ಲರೂ ಸಮಾನರು ಎಂಬ ಅಂಬೇಡ್ಕರ್ ಅವರ ಆಶಯವನ್ನು ಸಂಘ ಪರಿವಾರಕ್ಕೆ ತಮ್ಮನ್ನು ತಾವು ಅಡ ಇಟ್ಟುಕೊಂಡಿರುವ “ಮನುವಾದಿ ನಾರಾಯಣಸ್ವಾಮಿ”ಯವರು ಮಣ್ಣು ಪಾಲು ಮಾಡಿದ್ದಾರೆ” ಎಂದು ಹರಿಹಾಯ್ದಿದ್ದಾರೆ.

“ಮೇಲಿನವನು, ಕೆಳಗಿನವನು, ಪ್ರಶ್ನೆ ಮಾಡಬಾರದವನು, ಪ್ರಶ್ನಾತೀತನು ಎಂಬುದು ಮನುವಾದದ ಮೂಲ ಲಕ್ಷಣ, ಇದನ್ನು ಯಥಾವತ್ ಆಗಿ ಪಾಲಿಸುತ್ತಿದ್ದಾರೆ ಮೇಲ್ಮನೆಯ ವಿಪಕ್ಷ ನಾಯಕರು. ಒಂದೇ ಒಂದು ಚುನಾವಣೆ ಎದುರಿಸದ ಬಿಜೆಪಿಯ ಮೇಲ್ಮನೆ ವಿಪಕ್ಷ ನಾಯಕರಿಗೆ 3 ಬಾರಿ ಜನರ ವಿಶ್ವಾಸ ಪಡೆದು ಗೆದ್ದಿರುವ ನನ್ನ ಬಗ್ಗೆ ಮಾತಾಡುವ ಯೋಗ್ಯತೆಯೂ ಇಲ್ಲ, ಅರ್ಹತೆಯೂ ಇಲ್ಲ.
ಮೊದಲು ಒಂದೇ ಒಂದಾದರೂ ಚುನಾವಣೆ ಎದುರಿಸಲಿ, ಜನಮತ ಪಡೆದು ತಮ್ಮ ಅರ್ಹತೆಯನ್ನು ಸಾಬೀತುಪಡಿಸಲಿ, ನಂತರ ನನ್ನ ಬಗ್ಗೆ ಮಾತಾಡಲಿ” ಎಂದು ಎದುರೇಟು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...