ಹುಲಿ ಉಗುರು ವಿವಾದ | ಕಾನೂನು ಎಲ್ಲರಿಗೂ ಒಂದೇ, ಯಾರೇ ತಪ್ಪು ಮಾಡಿದ್ದರು ಕ್ರಮ: ಅರಣ್ಯ ಸಚಿವ ಈಶ್ವರ್ ಖಂಡ್ರೆ

Date:

ಕೊರಳಲ್ಲಿ ಹುಲಿ ಉಗುರು ಧರಿಸಿದ್ದ ಕಾರಣಕ್ಕೆ ಬಿಗ್ ಬಾಸ್‌ನ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಬಂಧನದ ಬಳಿಕ ರಾಜ್ಯದಲ್ಲಿ ಹುಲಿ ಉಗುರು ಪ್ರಕರಣ ದೊಡ್ಡ ವಿವಾದವಾಗಿ ಪರಿಣಮಿಸಿದೆ.

- Advertisement -

ಉಗುರು, ಚರ್ಮ ಧರಿಸಿದ್ದವರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಚರ್ಚೆ, ಆಗ್ರಹಗಳು ಕೇಳಿ ಬಂದಿರುವ ನಡುವೆಯೇ ನಟ ದರ್ಶನ್, ನಿರ್ದೇಶಕ ರಾಕ್‌ಲೈನ್ ವೆಂಕಟೇಶ್, ಸಂಸದ ಜಗ್ಗೇಶ್, ವಿನಯ್ ಗುರೂಜಿ, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಸ್ಯಾಂಡಲ್‌ವುಡ್ ನಟರು ಹಾಗೂ ರಾಜಕಾರಣಿಗಳ ಹುಲಿ ಉಗುರು ಧರಿಸಿರುವ ಫೋಟೋಗಳು ವೈರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಹಿನ್ನೆಲೆಯಲ್ಲಿ ಈ ವಿವಾದಕ್ಕೆ ಸಂಬಂಧಿಸಿ ಕಲಬುರಗಿಯಲ್ಲಿ ಇಂದು(ಬುಧವಾರ) ಪ್ರತಿಕ್ರಿಯೆ ನೀಡಿರುವ ಅರಣ್ಯ ಹಾಗೂ ವನ್ಯಜೀವಿ ಸಚಿವ ಈಶ್ವರ್ ಖಂಡ್ರೆ, ಈ ನೆಲದ ಕಾನೂನು ಎಲ್ಲರಿಗೂ ಒಂದೇ. ಎಷ್ಟೇ ಪ್ರಭಾವಿಯಾಗಿದ್ದರೂ, ಯಾರೇ ತಪ್ಪು ಮಾಡಿದ್ದರೂ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ನಮ್ಮ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

1972ರಲ್ಲಿ ವನ್ಯಜೀವಿ ಸಂರಕ್ಷಣೆ ಕಾಯ್ದೆ ಜಾರಿಗೆ ಬಂದಿದೆ. ಆ ಬಳಿಕ ಹಲವಾರು ತಿದ್ದುಪಡಿಗಳು ಕೂಡ ಆಗಿದೆ. ವನ್ಯಜೀವಿಗಳನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ಪ್ರತ್ಯಕ್ಷವಾಗಿ ಇಲ್ಲವೇ ಪರೋಕ್ಷವಾಗಿ ವನ್ಯಜೀವಿಗಳಿಗೆ ತೊಂದರೆ, ಹಾನಿ ಆಗದಂತೆ ನೋಡಿಕೊಳ್ಳಬೇಕು. ಇಲ್ಲವಾದರೆ ಅದು ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘಿಸಿದಂತಾಗುತ್ತದೆ ಎಂದು ತಿಳಿಸಿದರು.

ವನ್ಯಜೀವಿ ಚರ್ಮ, ಉಗುರು ಇನ್ನಿತರ ದೇಹದ ಭಾಗಗಳ ಬಳಕೆ, ಸಾಗಾಣೆ, ಸಂಗ್ರಹಿಸಿ ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ನೆಲದಲ್ಲಿ ಕಾನೂನು ಎಲ್ಲರಿಗೂ ಸಮಾನವಾಗಿದೆ. ಹುಲಿ ಉಗುರು ಬಗ್ಗೆ ನೈಜತೆ ಲಭ್ಯವಾದಲ್ಲಿ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ದೊಡ್ಡವರ ಹೆಸರು ಕೇಳಿ ಬಂದಿದೆ, ಅವರ ವಿರುದ್ಧ ಕ್ರಮ ಆಗುತ್ತಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ‘ಇಲ್ಲಿ ಕಾನೂನು ಎಲ್ಲರಿಗೂ ಒಂದೇ’ ಎಂದು ತಿಳಿಸಿದರು.

‘ಕೃತಕವಾದದ್ದು’ ಎಂದು ಸ್ಪಷ್ಟೀಕರಣ ನೀಡಿದ ನಿಖಿಲ್ ಕುಮಾರ್ ಸ್ವಾಮಿ
ನಟ, ಯುವರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ ಅವರು ಕೂಡ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದಾರೆ ಎನ್ನಲಾದ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್ ಮಾಡಿದ್ದರು. ಸೆಲೆಬ್ರಿಟಿಗಳ ಮೇಲೆ ದೂರು ನೀಡಲು ಕೆಲವರು ಮುಂದಾಗಿದ್ದಾರೆ. ಮಾಧ್ಯಮಗಳಲ್ಲಿ ಈ ಕುರಿತು ಸಾಕಷ್ಟು ಸದ್ದು ಆಗುತ್ತಿದ್ದಂತೆಯೇ ನಿಖಿಲ್ ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿದ್ದಾರೆ.

‘ನನ್ನ ಮದುವೆ ಸಮಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ. ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೊರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ’ ಎಂದು ಟ್ವೀಟ್ ಮಾಡಿ, ಬರೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು...