ಮೋದಿ ಮೇಲೆ ದ್ವೇಷ ಕಾರುವುದಷ್ಟೇ ಪ್ರತಿಪಕ್ಷಗಳ ಸಭೆಯ ಪ್ರಮುಖ ಅಜೆಂಡಾ: ಬಿಜೆಪಿ ವಾಗ್ದಾಳಿ

Date:

Advertisements

ಬೆಂಗಳೂರಿನ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ನಡೆಯುತ್ತಿರುವ ಯುಪಿಎ ಮಿತ್ರಪಕ್ಷಗಳ ಸಭೆ ಕುರಿತು ಬಿಜೆಪಿ ಟೀಕಿಸಿದ್ದು, ತಿಂಡಿ ತಿನ್ನುವ ವೇಳೆ ಇರುವ ಇವರ ಸ್ನೇಹ, ಊಟದ ವೇಳೆಗೆ ಮಾಯವಾದರೂ ಅಚ್ಚರಿ ಇಲ್ಲ ಎಂದಿದೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, “ದೇಶದ ಹಿತ ಬಯಸದ, ಸದಾ ವೈಯುಕ್ತಿಕ ಹಿತಾಸಕ್ತಿಗಳ ಮೇಲಾಟದಲ್ಲಿ ತೊಡಗುವ, ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಅವಕಾಶವಾದಿಗಳ ಸಭೆ ಇಂದು ಬೆಂಗಳೂರಿನಲ್ಲಿ ನಡೆಯುತ್ತಿದೆ. ಜಗಮೆಚ್ಚಿದ ನಾಯಕ ನರೇಂದ್ರ ಮೋದಿ ಅವರ ಮೇಲೆ ದ್ವೇಷ ಕಾರುವುದಷ್ಟೇ ಇವರ ಪ್ರಮುಖ ಅಜೆಂಡಾ” ಎಂದು ಆರೋಪಿಸಿದೆ.

“ಸದಾ ಅಧಿಕಾರಕ್ಕಾಗಿ ಕಚ್ಚಾಡುವ ಇವರು ರಾಜಕಾರಣದಲ್ಲಿ ಇದುವರೆಗೂ ಬದ್ಧತೆ ಎಂಬುದನ್ನು ಒಮ್ಮೆಯೂ ಪ್ರದರ್ಶಿಸಿಲ್ಲ. ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತಗಳು ಇವರ ಮುಖ್ಯ ಸಿದ್ದಾಂತವಾಗಿದ್ದು, ಅದನ್ನು ಸಾಧಿಸಲು ಈಗ ಒಂದಾಗುವ ನಾಟಕವಾಡುತ್ತಿದ್ದಾರೆ” ಎಂದು ಬಿಜೆಪಿ ವ್ಯಂಗ್ಯವಾಡಿದೆ.

Advertisements

“ಈ ಸಭೆಯ ಆಯೋಜಕರು ಯಾರು? ಈ ಸಭೆಯ ಅಧ್ಯಕ್ಷರು ಯಾರು? ಈ ಸಭೆಯ ಸಂಯೋಜನೆ ಯಾವ ಪಕ್ಷದ್ದು? ಇದ್ಯಾವುದರ ಬಗ್ಗೆ ಸ್ವಲ್ಪವೂ ಸ್ಪಷ್ಟತೆ ಇಲ್ಲ. “ಯುನೈಟೆಡ್ ವಿ ಸ್ಟಾಂಡ್” ಎಂಬ ಈ ಕಿಟ್ಟಿ ಪಾರ್ಟಿಯ ಹೆಸರೇ ಇವರ ಮಧ್ಯೆ ಒಗ್ಗಟ್ಟು ದೂರದ ಬೆಟ್ಟ ಎಂಬುದನ್ನು ನಿರೂಪಿಸುತ್ತದೆ” ಎಂದು ಟೀಕಿಸಿದೆ.

“ದಶಕಗಳಿಂದ ಪಶ್ಚಿಮ ಬಂಗಾಳದಲ್ಲಿ ಪರಸ್ಪರ ಕಚ್ಚಾಡುತ್ತಿರುವ ಮಮತಾ ಬ್ಯಾನರ್ಜಿಯ ಟಿಎಂಸಿ ಹಾಗೂ ಕಮ್ಯುನಿಸ್ಟರು ಇಂದು ಒಂದೇ ಟೇಬಲ್‌ನಲ್ಲಿ ಕುಳಿತು ಒಗ್ಗಟ್ಟು ಪ್ರದರ್ಶಿಸುತ್ತಾರಂತೆ. ಕೇರಳದಲ್ಲಿ ಅಧಿಕಾರಕ್ಕಾಗಿ ಹೊಡೆದಾಡುವ ಕಾಂಗ್ರೆಸ್ ಮತ್ತು ಕಮ್ಯುನಿಸ್ಟರು ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಕಾಮ್ರೇಡ್‌ಗಳಂತೆ. ಪಂಜಾಬ್‌ನಲ್ಲಿ ಬಾಯಿಗೆ ಬಂದಂತೆ ಪರಸ್ಪರ ಬೈದಾಡಿಕೊಳ್ಳುವ ಆಮ್ ಆದ್ಮಿ ಪಕ್ಷದವರು ಹಾಗೂ ಕಾಂಗ್ರೆಸ್‌ನವರು, ಇಲ್ಲಿ ಮಾತ್ರ ಬಾಂಧವರಂತೆ” ಎಂದು ವ್ಯಂಗ್ಯವಾಡಿದೆ.

“ಕನ್ನಡಿಗರ ಕುಡಿಯುವ ನೀರಿಗೆ, ಕಾವೇರಿ ಹಾಗೂ ಮೇಕೆದಾಟು ಯೋಜನೆಗಳಿಗೆ ಸದಾ ಇನ್ನಿಲ್ಲದಂತೆ ತೊಂದರೆ ಕೊಡುವ ತಮಿಳುನಾಡಿನ ಸಿಎಂ ಸ್ಟಾಲಿನ್‌ಗೆ, ಕರ್ನಾಟಕದ ಕಾಂಗ್ರೆಸ್ ಪಕ್ಷ ಚಿನ್ನತಂಬಿಯಂತೆ. ಕನ್ನಡಿಗರಿಗೆ ಮಹಾದಾಯಿ ನದಿಯ ಒಂದು ತೊಟ್ಟು ನೀರು ಬಿಡುವುದಿಲ್ಲವೆಂದು ಗೋವಾದಲ್ಲಿ ಘೋಷಿಸಿದ್ದ ಸೋನಿಯಾ ಗಾಂಧಿಗೆ ಇಲ್ಲಿ ದೊಡ್ಡ ಕುರ್ಚಿಯಂತೆ. ಸೋನಿಯಾ ಗಾಂಧಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಬಾರದೆಂದು, ಕಾಂಗ್ರೆಸ್ ಪಕ್ಷವನ್ನೇ ತುಂಡರಿಸಿ ಹೊರ ಬಂದ ಎನ್.ಸಿ.ಪಿ ಸಹ ಇಲ್ಲಿ ಅತಿಥಿಯಂತೆ” ಎಂದು ಕುಟುಕಿದೆ.

ಈ ಸುದ್ದಿ ಓದಿದ್ದೀರಾ? ಇಂದಿನ ಎನ್‌ಡಿಎ ಸಭೆಯ ನಿರ್ಧಾರ ನೋಡಿಕೊಂಡು ಮೈತ್ರಿ ಬಗ್ಗೆ ಮಾತುಕತೆಗೆ ಜೆಡಿಎಸ್ ಚಿಂತನೆ

“ಒಬ್ಬರಿಗೊಬ್ಬರು ಹೊಡೆದಾಡಿಕೊಂಡು ಬಿಹಾರವನ್ನು ‘ಬಿಮಾರು’ಗೊಳಿಸಿದ್ದ ನಿತೀಶ್ ಕುಮಾರ್ ಮತ್ತು ಲಾಲೂ ಪ್ರಸಾದ್ ಯಾದವ್, ಇಲ್ಲಿ ಭಾಯಿ-ಭಾಯಿಗಳಂತೆ. ಭಾರತವನ್ನು ತುಂಡರಿಸುವಂತಹ ಹೇಳಿಕೆಗಳನ್ನು ನೀಡುವ, ಪಾಕಿಸ್ಥಾನ ಪ್ರೇಮಿ ಫಾರೂಕ್ ಅಬ್ದುಲ್ಲಾಗೂ ಸಹ ಇಲ್ಲಿಗೆ ಆಹ್ವಾನವಿದೆಯಂತೆ” ಎಂದು ಆರೋಪಿಸಿದೆ.

“ಹಿಂದೂ ಧರ್ಮವನ್ನು ಸದಾ ಅವಹೇಳನ ಮಾಡುವ, ಹಿಂದೂಗಳನ್ನು ಅತ್ಯಂತ ಕೆಟ್ಟದಾಗಿ ನಿಂದಿಸುವ, ದ್ವೇಷಿಸುವ ತಮಿಳುನಾಡಿನ ತೋಳ್ ತಿರುಮಾವಳವನ್, ಮುಸ್ಲಿಂ ಲೀಗ್‌ಗೆ ಇಲ್ಲಿ ಪಾಲಿದೆಯಂತೆ. ಇಂತಹವರಿಂದ ಸದೃಢ ಭಾರತ ಹಾಗೂ ಸಶಕ್ತ ಭಾರತವನ್ನು ನಿರ್ಮಿಸಲು ಸಾಧ್ಯವೇ? ತಿಂಡಿ ತಿನ್ನುವ ವೇಳೆ ಇರುವ ಇವರುಗಳ ಸ್ನೇಹ, ಊಟದ ವೇಳೆಗೆ ಮಾಯವಾದರೂ ಅಚ್ಚರಿ ಇಲ್ಲ” ಎಂದು ಬಿಜೆಪಿ ಅಭಿಪ್ರಾಯಪಟ್ಟಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X