ಮೈಕ್ರೋ ಫೈನಾನ್ಸ್‌ ಹಾವಳಿ | ಮಸೂದೆ ಜಾರಿ ಕುರಿತು ಸಭೆ, ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು?

Date:

Advertisements

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲದ ಹಣ ವಸೂಲಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ದೌರ್ಜನ್ಯ ಎಸಗುವುದು, ಕಿರುಕುಳ ನೀಡುವುದನ್ನು ನಿಷೇಧಿಸುವ “ಕರ್ನಾಟಕ ಮೈಕ್ರೋ ಫೈನಾನ್ಸ್ ಪ್ರಿವೆನ್ಷನ್ ಆಫ್ ಕೋಯೆರ್ಸಿವ್ ಆ್ಯಂಡ್ ಇನ್‌ಹ್ಯೂಮನ್ ಆ್ಯಕ್ಷನ್ 2025” ಮಸೂದೆ ಕುರಿತು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಮತ್ತು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಕಂದಾಯ ಮತ್ತು ಆರ್ಥಿಕ ಇಲಾಖೆಗಳ ಅಧಿಕಾರಿಗಳೊಂದಿಗೆ‌ ಬುಧವಾರ ಸಭೆ ನಡೆಸಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್‌, “ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದನ್ನು ತಡೆಗಟ್ಟಲು ತ್ವರಿತವಾಗಿ ಕಾನೂನು ತರಬೇಕು ಎಂದು ಮುಖ್ಯಂಮತ್ರಿಯವರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಲವು ವಿಚಾರಗಳ ಕುರಿತು ಸುದೀರ್ಘವಾಗಿ ಚರ್ಚಿಸಿ ನಿರ್ಣಯಗಳನ್ನು ಕೈಗೊಳ್ಳಲಾಗಿದೆ” ಎಂದು ತಿಳಿಸಿದರು‌.

“ಸಮಾಜದಲ್ಲಿ ಕೆಳಸ್ತರದ ಜನರು ಕಿರುಸಾಲ ತೆಗೆದುಕೊಳ್ಳುತ್ತಾರೆ. ಸಾಲ ವಸೂಲಿ ಮಾಡಲು ಅಮಾನವೀಯವಾಗಿ ವರ್ತಿಸಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂತಹ ಘಟನೆಗಳನ್ನು ನಿಲ್ಲಿಸಬೇಕಿದೆ. ಜನ ಊರು ಬಿಡುತ್ತಿರುವುದು, ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ವರದಿಯಾಗುತ್ತಿವೆ. ಹೀಗಾಗಿ ಮಸೂದೆ ತರಲು ಬಜೆಟ್ ಅಧಿವೇಶನದವರೆಗೂ ಕಾಯಲು ಆಗುವುದಿಲ್ಲ. ಸಭೆಯ ಪ್ರಮುಖ ಅಂಶಗಳನ್ನು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ, ಕ್ಯಾಬಿನೆಟ್ ಮುಂದೆ ತರಲಾಗುವುದು” ಎಂದರು‌.

Advertisements

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಫೈನಾನ್ಸ್‌ ಕಂಪನಿ ಕಿರುಕುಳ: ಕಾಣೆಯಾಗಿದ್ದ ಸರ್ಕಾರಿ ಶಾಲೆಯ ಶಿಕ್ಷಕಿ ಮೃತದೇಹ ನದಿಯಲ್ಲಿ ಪತ್ತೆ

“ಮೈಕ್ರೋ ಫೈನಾನ್ಸ್‌ಗಳ‌ ಅಮಾನುಷ ವರ್ತನೆಯ ಘಟನೆಗಳು ಗಮನಕ್ಕೆ ಬಂದ ಕೂಡಲೇ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಜನರೊಂದಿಗೆ ಒತ್ತಾಯ ಪೂರ್ವಕವಾಗಿ ನಡೆದುಕೊಳ್ಳುವುದು ಸಮಾಜಕ್ಕೆ ಒಳ್ಳೆಯದಲ್ಲ. ಸಾಲ ವಸೂಲಾತಿ ಪ್ರಮಾಣ ಕಡಿಮೆ ಇರಬಹುದು. ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲಾಧಿಕಾರಿಗಳ ಒತ್ತಡವಿರಬಹುದು. ಆದರೂ ಈ ರೀತಿಯಾಗಿ ನಡೆದುಕೊಳ್ಳುವುದು ಸರಿಯಾದ ಕ್ರಮವಲ್ಲ. ಸಾಲ‌ ಪಡೆಯುವುದು ಮತ್ತು ನೀಡುವುದರ ಕುರಿತು ಜನರಿಗೆ ಜಾಗೃತಿ‌ ಮೂಡಿಸಲಾಗುವುದು” ಎಂದು ಹೇಳಿದರು.

“ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಆರ್ಥಿಕ ವ್ಯವಹಾರಗಳಿಗೆ ಕಡಿವಾಣ ಹಾಕುತ್ತಿಲ್ಲ. ಸಾಲ ಇಷ್ಟೇ ಕೊಡಬೇಕು ಎಂಬುದನ್ನು ಹೇಳುತ್ತಿಲ್ಲ. ಆದರೆ, ಜನರಿಂದ ಸಾಲ ವಸೂಲಿ ಮಾಡುವ ಕ್ರಮ ಸರಿಯಾಗಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X