ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲು: ಹೆಚ್‌ ಡಿ ಕುಮಾರಸ್ವಾಮಿ

Date:

ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲಿಗೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್ ​ಡಿ ಕುಮಾರಸ್ವಾಮಿ ಹೇಳಿದರು.

- Advertisement -

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿಡಿ ಫ್ಯಾಕ್ಟರಿ ಬಂದ್ ಆಗಿದ್ದು, ಈಗ ಮುಡಾ ಫ್ಯಾಕ್ಟರಿ ಆರಂಭವಾಗಿದೆ” ಎಂದು ಲೇವಡಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಕಾಂಗ್ರೆಸ್ ಪಕ್ಷದ ಅಧ್ಯಕ್ಷರೇ ಮುಡಾ ಹಗರಣ ಹೊರತಂದಿದ್ದಾರೆ.‌ ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ? ಇದರ ಹಿಂದೆ ಸಿಎಂ ಕುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರ ಇದೆ” ಎಂದು ಪರೋಕ್ಷವಾಗಿ ಡಿ ಕೆ ಶಿವಕುಮಾರ್‌ ಉದ್ದೇಶಿಸಿ ಆರೋಪಿಸಿದರು.

ಕಾಂಗ್ರೆಸ್‌ ಕುಮ್ಮಕ್ಕು

“ನನಗೆ ಈ ಬಗ್ಗೆ ಮಾಹಿತಿ ಇದೆ. ಸಿಎಂ ಸಿದ್ದರಾಮಯ್ಯ ಪತ್ನಿಗೆ ಆ ಜಾಗ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ. 62 ಕೋಟಿ ರೂ. ಪರಿಹಾರ ಕೇಳುವ ಸಿಎಂ ಸಿದ್ದರಾಮಯ್ಯ, ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ. ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಆಚೆ ಬರಲು ಕಾಂಗ್ರೆಸ್‌ನವರೇ ಒಳಗೆ ಕುಮ್ಮಕ್ಕು ಕೊಡುತ್ತಿದ್ದಾರೆ” ಎಂದು ಹೇಳಿದರು.

ಕೇಂದ್ರ ಸಚಿವರಾದ ಬಳಿಕ ಮೊಲದ ಬಾರಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುತ್ತಿರುವೆ. ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು, ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲು ಇಲ್ಲಿಗೆ ಬಂದಿದ್ದೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ ಕಲಿಕೆಯ ವಾತಾವರಣ ಅಗತ್ಯ

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ...

ಪಶ್ಚಿಮ ಬಂಗಾಳ | ದುರ್ಗಾ ಪೂಜೆ ಪಂಡಾಲ್‌ನಲ್ಲಿ ಮಮತಾ ಮೇಲೆ ದಾಳಿ; ಟಿಎಂಸಿ ಮುಖಂಡರೇ ಗುರಿಯೆ?

ಈಗಾಗಲೇ ಸರಣಿ ದಾಳಿಯು ಟಿಎಂಸಿ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿದೆ. ಹೀಗಿರುವಾಗ ನಿನ್ನೆಯಷ್ಟೇ...