ಬಿಜೆಪಿಯವರೇ ಬಿಜೆಪಿಗೆ ಕೊಟ್ಟ ಹೆಸರು ‘ಬಕೆಟ್ ಜನತಾ ಪಾರ್ಟಿ’: ಕಾಂಗ್ರೆಸ್‌ ಲೇವಡಿ

Date:

  • ವಿಜಯೇಂದ್ರ ಅವರ ಮಾತಿಗೆ ಮೂರು ಕಾಸಿನ ಕಿಮ್ಮತ್ತಿಲ್ಲ
  • ಬಿಜೆಪಿಯಲ್ಲಿ ಕೆಂಡದಂತಹ ಕಚ್ಚಾಟವಿದೆ: ಕಾಂಗ್ರೆಸ್‌

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಮಾತಿಗೆ ಮೂರು ಕಾಸಿನ ಕಿಮ್ಮತ್ತಿಲ್ಲ ಎನ್ನುವುದು ಕೂಡ ಬಿಜೆಪಿಯ ‘ಸದನ ಕದನ’ದಿಂದ ಬಯಲಾಗಿದೆ ಎಂದು ಕಾಂಗ್ರೆಸ್‌ ಕುಟುಕಿದೆ.

- Advertisement -

ಎಕ್ಸ್‌ ತಾಣದಲ್ಲಿ ಬಿಜೆಪಿಯನ್ನು ಟೀಕೆ ಮಾಡಿರುವ ಕಾಂಗ್ರೆಸ್‌, “ಯತ್ನಾಳ್ ಹೇಳಿದ್ದಕ್ಕೆ ಸಭಾತ್ಯಾಗ ಮಾಡಿದೆವು” ಎನ್ನುವ ಮೂಲಕ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕ ಬಸನಗೌಡ ಅವರೇ ಎಂದು ಆರ್‌ ಅಶೋಕ
ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ! ಬಿಜೆಪಿಯಲ್ಲಿ ಕೆಂಡದಂತಹ ಕಚ್ಚಾಟವಿದೆ ಎಂಬುದನ್ನೂ ಒಪ್ಪಿಕೊಂಡಿದ್ದಾರೆ” ಎಂದು ಛೇಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

”ಡಿಯ‌ರ್ ಬಿಜೆಪಿ, ನಿಮ್ಮದು ‘ಮನೆಯೊಂದು ಮೂರು ಬಾಗಿಲಲ್ಲ, ಮುನ್ನೂರು ಬಾಗಿಲು’ ಅಲ್ಲವೇ?” ಎಂದು ವ್ಯಂಗ್ಯವಾಗಿ ಕಾಂಗ್ರೆಸ್‌ ಪ್ರಶ್ನಿಸಿದೆ. ಬಿಜೆಪಿಗೆ ಬಿಜೆಪಿಗರಿಂದಲೇ ಸಿಕ್ಕಿದ್ದು ಅದೆಷ್ಟು ಹೆಸರುಗಳು! ‘ಭ್ರಷ್ಟ ಜನತಾ ಪಾರ್ಟಿ’, ‘ಬ್ಲಾಕ್ಮೇಲ್ ಜನತಾ ಪಾರ್ಟಿ’, ‘ಬ್ಲೂ ಬಾಯ್ಸ್ ಜನತಾ ಪಾರ್ಟಿ’ ಈಗ ಹೊಸದಾಗಿ ‘ಬಕೆಟ್ ಜನತಾ ಪಾರ್ಟಿ!” ಎಂದು ಲೇವಡಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಪಾಯಕಾರಿ ಸುಳ್ಳು ಆರೋಪ: ತಪ್ಪು ಯತ್ನಾಳರದ್ದೋ, ಕಾಂಗ್ರೆಸ್ಸಿನವರದ್ದೋ?

“ಬಕೆಟ್ ಬಕೆಟ್ ಬಕೆಟ್.. ಅಶೋಕ್ ಬಕೆಟ್ ಹಿಡಿದುಕೊಂಡೇ ರಾಜಕಾರಣ ಮಾಡುವವವರು” ಎಂದು ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹೇಳಿದ್ದಾರೆ. ಹೀಗಾಗಿ ಬಿಜೆಪಿಯವರೇ ಬಿಜೆಪಿಯವರಿಗೆ ಕೊಟ್ಟಿರುವ ಹೆಸರು -B ಬಕೆಟ್ J ಜನತಾ P ಪಾರ್ಟಿ!” ಎಂದು ಕುಟುಕಿದೆ.

“ಆರ್‌ ಅಶೋಕ ಅವರೇ, ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ಯಾರಿಗೆ ಬಕೆಟ್ ಹಿಡಿದಿರಿ? ಯಾವ ಬ್ರಾಂಡ್ ಬಕೆಟ್ ಹಿಡಿದಿರಿ? ಯಾರಿಗೆ ಬಕೆಟ್ ಹಿಡಿದು ನಿಮ್ಮ ಅಕ್ರಮಗಳನ್ನು ಮುಚ್ಚಿಕೊಂಡಿರಿ?” ಎಂದು ಬಿಜೆಪಿಯ ಯಲಹಂಕ ಶಾಸಕ ಎಸ್‌ ಆರ್‌ ವಿಶ್ವನಾಥ್‌ ಹೇಳಿಕೆಯ ವರದಿಯನ್ನು ಕಾಂಗ್ರೆಸ್‌ ಹಂಚಿಕೊಂಡಿದೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

OBC ಮೀಸಲಾತಿಗೆ ಮತಾಂತರದ ಬೇಲಿ: ಸುಪ್ರೀಂ ಹೊಸ ಆದೇಶದಲ್ಲಿ ಸಾಂವಿಧಾನಿಕ ವಿರೋಧಾಭಾಸ!

ಧರ್ಮ ಬದಲಾದರೆ ಸಾಮಾಜಿಕ ಹಿಂದುಳಿದಿರುವಿಕೆಯೂ ಅಳಿಸಿಹೋಗುತ್ತದೆಯೇ? ಮಂಡಲ್ ಆಯೋಗದ 11 ಮಾನದಂಡಗಳಲ್ಲಿ...

ಅ.26ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಭೆ: ಸಿಎಂ ಡಿ ಕೆ ಶಿವಕುಮಾರ್

ಇದೇ ಅಕ್ಟೋಬರ್ 26 ರಂದು ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ...

ಕೈಲೊಂದು ಕ್ಯಾಮೆರಾ, ಜೀವಂತ ಬದುಕಿಗೆ ಮುಖಾಮುಖಿ

ಸಿನೆಮಾದ ಶಕ್ತಿ ಅದರ ಹಿಂದೆ ನಿಂತಿರುವ ತಂತ್ರಜ್ಞರ ಸಂಖ್ಯೆಯಲ್ಲಾಗಲಿ, ದುಬಾರಿ ಉಪಕರಣಗಳಲ್ಲಾಗಲಿ...

ರಾಜ್ಯದಲ್ಲಿ ಮಧ್ಯಾಹ್ನವೇ ಮಳೆ ಅಬ್ಬರ; 13 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭರ್ಜರಿ ಮಳೆ: ಹವಾಮಾನ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ...