ಮುಗಿಯದ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಪ್ರಹಸನ | ಜೆಡಿಎಸ್‌ ಮಾತೇ ಬೇರೆ, ನಡೆಯೇ ಬೇರೆ!

Date:

‌ರಾಜಕೀಯದಲ್ಲಿ ಜೆಡಿಎಸ್‌ ನಡೆ ಯಾವ ಕ್ಷಣದಲ್ಲಿ ಹೇಗೆ ಬದಲಾಗುತ್ತದೆ ಎಂಬುದೇ ವಿಚಿತ್ರ. ಜನರು, ಪ್ರತಿಪಕ್ಷಗಳ ನಾಯಕರು ಜೆಡಿಎಸ್‌ ಅನ್ನು ‘ಊಸರವಳ್ಳಿ ಪಕ್ಷ’ ಎಂದು ಟೀಕಿಸುವುದಕ್ಕೂ, ಜೆಡಿಎಸ್‌ ನಡೆದುಕೊಳ್ಳುವುದಕ್ಕೂ ಸರಿ ಇದೆ.

- Advertisement -

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಖಂಡಿಸಿ, ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ರಾಜ್ಯಾದ್ಯಕ್ಷ ಬಿ ವೈ ವಿಜಯೇಂದ್ರ ಘೋಷಿರುವ ಮೈಸೂರು ಪಾದಯಾತ್ರೆಗೆ ಜೆಡಿಎಸ್‌ ಬೆಂಬಲ ಇಲ್ಲ ಎಂದು ಕಡ್ಡಿಮುರಿದಂತೆ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಮಾಧ್ಯಮಗಳ ಮಂದೆ ಬಂದು ಸ್ಪಷ್ಟಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಶುಕ್ರವಾರ ಯೂ ಟರ್ನ್‌ ಹೊಡೆದಿರುವ ಜೆಡಿಎಸ್‌, ತನ್ನ ಅಧಿಕೃತ ಎಕ್ಸ್‌ ತಾಣದಲ್ಲಿ ಬಿಜೆಪಿ ಪಾದಯಾತ್ರೆಗೆ ಬೆಂಬಲ ಸೂಚಿಸಿ ಪೋಸ್ಟ್‌ ಮಾಡಿದೆ. ಆದರೆ, ಪಾದಯಾತ್ರೆ ವಿರೋಧಿಸಿದ ಕುಮಾರಸ್ವಾಮಿಯಾಗಲಿ ಅಥವಾ ಜೆಡಿಎಸ್‌ ಪ್ರಮುಖ ನಾಯಕರಾಗಲಿ ಯಾರೂ ಕೂಡ ಈವರೆಗೂ ಬಿಜೆಪಿ ಪಾದಯಾತ್ರೆಗೆ ತಮ್ಮ ಪಕ್ಷದ ಬೆಂಬಲ ಇದೆ ಎಂದು ಎಲ್ಲೂ ಘೋಷಿಸಿಲ್ಲ.

ಬಿಜೆಪಿ ಪಾದಯಾತ್ರೆಗೆ ಬೆಂಬಲ ಸೂಚಿಸಿ ಜೆಡಿಎಸ್‌ ಮಾಡಿರುವ ಪೋಸ್ಟ್‌ ಕುಮಾರಸ್ವಾಮಿ ಗಮನಕ್ಕೆ ಬಾರದೇ ಪ್ರಕಟಗೊಂಡಿದೆಯಾ? ಇದಕ್ಕೆ ಪಕ್ಷದ ನಾಯಕರೇ ಉತ್ತರಿಸಬೇಕಿದೆ. ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸುದ್ದಿಗೋಷ್ಠಿ ನಡೆಸಿ,”ಮೈಸೂರು ಪಾದಯಾತ್ರೆಗೆ ಬಿ ಎಸ್‌ ಯಡಿಯೂರಪ್ಪ ಮತ್ತು ಎಚ್‌ ಡಿ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ. ಕೆಂಗೇರಿಯಿಂದ ಪಾದಯಾತ್ರೆ ಹೊರಡಲಿದೆ” ಎಂದು ಸ್ಪಷ್ಟಪಡಿಸುತ್ತಾರೆ. ಜೆಡಿಎಸ್‌-ಬಿಜೆಪಿ ನಾಯಕರು ಒಂದೇ ವೇದಿಕೆಗೆ ಬಂದು ನಾವು ಒಗ್ಗಟ್ಟಿನಿಂದ ಪಾದಯಾತ್ರೆ ಮಾಡುತ್ತೇವೆ ಎಂದು ಎಲ್ಲೂ ಹೇಳಿಕೊಂಡಿಲ್ಲ.

ಜೆಡಿಎಸ್‌ ಏನು ಪೋಸ್ಟ್‌ ಮಾಡಿದೆ?

“ಸಾಲು ಸಾಲು ಹಗರಣಗಳ ಮೂಲಕ ರಾಜ್ಯವನ್ನು ಕೊಳ್ಳೆ ಹೊಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಭ್ರಷ್ಟ ಮುಖ್ಯಮಂತ್ರಿ ‌ ಸಿದ್ದರಾಮಯ್ಯ ಮುಡಾದಲ್ಲಿ ಅಕ್ರಮವಾಗಿ ಸೈಟುಗಳನ್ನು ಪಡೆದು, ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ್ದಾರೆ. ವಾಲ್ಮೀಕಿ ನಿಗಮ ಸೇರಿದಂತೆ ಸರ್ಕಾರದ ಎಲ್ಲ ಇಲಾಖೆಗಳಲ್ಲೂ ಹಣ ನುಂಗಿದ್ದಾರೆ. ಈ ಕಡು ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಜನ ಜಾಗೃತಿ ಮೂಡಿಸಲು ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷಗಳು ಜೊತೆಗೂಡಿ ಬೃಹತ್ ಪಾದಯಾತ್ರೆ ನಡೆಸುತ್ತಿವೆ. ಬೆಂಗಳೂರಿ ನಿಂದ ಮೈಸೂರಿನವರೆಗೂ ನಡೆಯುವ “ಮೈಸೂರು ಚಲೋ” ಪಾದಯಾತ್ರೆಯಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ, ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಿ, ಕರ್ನಾಟಕವನ್ನು ಉಳಿಸಿ” ಎಂದು ಜೆಡಿಎಸ್‌ ಕರೆ ನೀಡಿದೆ.

1 2

ಬಿಜೆಪಿ ನಾಯಕರು ಎಚ್‌ಡಿಕೆ ಮನವೊಲಿಸಿದರೇ?

ಕುಮಾರಸ್ವಾಮಿ ಯಾವಾಗ ಪಾದಯಾತ್ರೆಗೆ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದರೋ ಎದ್ನೋ ಬಿದ್ನೋ ಎಂದು ಬಿಜೆಪಿ ವರಿಷ್ಠರ ಸೂಚನೆ ಮೇರೆಗೆ ಸಂಸತ್ ಭವನದ ಎಚ್‌ ಡಿ ಕುಮಾರಸ್ವಾಮಿ ಕಚೇರಿಗೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ರಾಧಮೋಹನ್ ದಾಸ್, ಬಿ ವೈ ವಿಜಯೇಂದ್ರ ದಾವಿಸಿ ಪಾದಯಾತ್ರೆ ಬಗ್ಗೆ ತರಾತುರಿಯಲ್ಲಿ ಚರ್ಚೆ ನಡೆಸಿದರು.

ಆ ಚರ್ಚೆಯಲ್ಲಿ ಕುಮಾರಸ್ವಾಮಿ ಪಾದಯಾತ್ರೆಗೆ ಒಪ್ಪಿದರಾ ಎಂಬುದು ಕೂಡ ಗೊತ್ತಾಗಲಿಲ್ಲ. ಸಭೆ ಬಳಿಕ ಪ್ರಲ್ಹಾದ್‌ ಜೋಶಿ ಸುದ್ದಿಗಾರರ ಜೊತೆ ಮಾತನಾಡುತ್ತ, “ನಾವು ಪಾದಯಾತ್ರೆಗೆ ಯಾರನ್ನೂ ಆಹ್ವಾನಿಸುವುದಿಲ್ಲ. ಭ್ರಷ್ಟಾಚಾರ ವಿರೋಧಿಸಿ ಭಾಗಿಯಾಗುವವರು ಬರಬಹುದು” ಎಂದು ಹೇಳಿಕೆ ನೀಡಿದರು. ಜೋಶಿ ಮಾತಿನ ಅರ್ಥ ಎಂತಹ ಸಣ್ಣ ಮಕ್ಕಳಿಗಾದ್ರೂ ಅರ್ಥವಾಗುತ್ತೆ, ಕುಮಾರಸ್ವಾಮಿ ಪಾದಯಾತ್ರೆಗೆ ಒಪ್ಪಿಲ್ಲ ಅಥವಾ ಷರತ್ತು ವಿಧಿಸಿ ಕಳುಹಿಸಿರಬಹುದು ಎಂದು.

ಕುಮಾರಸ್ವಾಮಿ ಮೊದಲು ಹೇಳಿದ್ದೇನು?

“ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟ ಪ್ರೀತಂಗೌಡನ ಜೊತೆ ನಾವು ವೇದಿಕೆ ಹಂಚಿಕೊಳ್ಳಲು ಸಾಧ್ಯವೇ ಇಲ್ಲ. ದೇವೇಗೌಡರ ಕುಟುಂಬವನ್ನು ನಾಶ ಮಾಡಲು ಹೊರಟ ಪ್ರೀತಂಗೌಡನನ್ನು ಸಭೆಯಲ್ಲಿ ಕೂರಿಸಿಕೊಂಡು, ನಮ್ಮನ್ನು ಪಾದಯಾತ್ರೆಗೆ ಕರೆಯುತ್ತೀರಾ? ಹಾಸನದಲ್ಲಿ ಪೆನ್ ಡ್ರೈವ್ ಗಳನ್ನು ಹಂಚಿವರು ಯಾರು ಎಂದು ಗೊತ್ತಿಲ್ಲವೇ? ಚುನಾವಣಾ ಮೈತ್ರಿಯೇ ಬೇರೆ. ರಾಜಕೀಯವೇ ಬೇರೆ” ಎಂದು ಕುಮಾರಸ್ವಾಮಿ ಕಿಡಿಕಾರಿದ್ದರು.

“ಪಾದಯಾತ್ರೆಯಲ್ಲಿ ಭಾಗಿಯಾಗಬಾರದು ಎಂದು ಜೆ‌ ಟಿ ದೇವೇಗೌಡರ ಅಧ್ಯಕ್ಷತೆಯ ಕೋರ್ ಕಮಿಟಿ ಬೆಂಗಳೂರಿನಲ್ಲಿ ಮಂಗಳವಾರ ತೀರ್ಮಾನ ಮಾಡಿದೆ. ಬಿಜೆಪಿ ನಾಯಕರು ಪಾದಯಾತ್ರೆ ಮಾಡಬೇಕು ಎಂದು ನಿರ್ಧಾರ ಕೈಗೊಂಡು ಸಿದ್ಧತೆ ಮಾಡುತ್ತಿದ್ದಾರೆ. ಆದರೆ, ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಹೀಗಾಗಿ ನಾವು ಪಾದಯಾತ್ರೆಯಿಂದ ಹಿಂದೆ ಸರಿದಿದ್ದೇವೆ” ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದರು.

ಪಾದಯಾತ್ರೆ ಸುತ್ತ ಬೆಳವಣಿಗೆಗಳನ್ನು ಗಮನಿಸಿದಾಗ “ಎತ್ತು ಏರಿಗೆ ಎಳೀತು, ಕೋಣ ಕೆರೆಗೆ ಇಳೀತು” ಎನ್ನುವಂತಾಗಿದೆ ಬಿಜೆಪಿ-ಜೆಡಿಎಸ್‌ ನಾಯಕರ ನಡೆ. ಮೈತ್ರಿಯಲ್ಲಿ ಒಗ್ಗಟ್ಟಿಲ್ಲ ಎಂಬುದು ಎದ್ದು ಕಾಣುತ್ತಿದೆ. ರಾಜಕೀಯದಲ್ಲಿ ಜೆಡಿಎಸ್‌ ಆಡುವುದೇ ಬೇರೆ, ನಡೆದುಕೊಳ್ಳುವುದೇ ಬೇರೆ ಎಂಬ ಆರೋಪ ಹೀಗೆ ಮುಂದುವರಿಯುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...