ಸಿಸೋಡಿಯಾ ಜೊತೆ ಅಸಭ್ಯವಾಗಿ ವರ್ತಿಸಿದ್ದ ಅಧಿಕಾರಿ, ನನ್ನೊಂದಿಗೂ ಅನುಚಿತವಾಗಿ ವರ್ತಿಸಿದ್ದಾರೆ; ಕೇಜ್ರಿವಾಲ್ ಆರೋಪ

Date:

ದೆಹಲಿ ನ್ಯಾಯಾಲಯದ ಆವರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮೇಲೆ ಹಲ್ಲೆ ನಡೆಸಿದ್ದ ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು, ತಮ್ಮೊಂದಿಗೂ ಅನುಚಿತವಾಗಿ ವರ್ತಿಸಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

- Advertisement -

ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್‌ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಕೇಜ್ರಿವಾಲ್ ಅವರು ದೆಹಲಿಯ ರೂಸ್ ಅವೆನ್ಯೂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತರುತ್ತಿದ್ದಾಗ ಸಹಾಯಕ ಪೊಲೀಸ್ ಕಮಿಷನರ್ ಎ.ಕೆ ಸಿಂಗ್ ಅವರು ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆಂದು ತಿಳಿಸಿದ್ದಾರೆ. ಆ ಅಧಿಕಾರಿಯನ್ನು ತಮ್ಮ ಭದ್ರತಾ ತಂಡದಿಂದ ತೆಗೆದುಹಾಕುವಂತೆ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಕಳೆದ ವರ್ಷ ಇದೇ ನ್ಯಾಯಾಲಯದ ಆವರಣದಲ್ಲಿ ಪತ್ರಕರ್ತರು ಪ್ರಶ್ನೆ ಕೇಳುತ್ತಿದ್ದಾಗ ಸಿಸೋಡಿಯಾ ಅವರನ್ನು ಕುತ್ತಿಗೆಗೆ ಬಿಗಿದು ನಿಲ್ಲಿಸಿದ ಆರೋಪಕ್ಕೆ ಇದೇ ಎ.ಕೆ ಸಿಂಗ್‌ ಅವರು ಗುರಿಯಾಗಿದ್ದರು. ಆ ಕೃತ್ಯವು ವಿಡಿಯೋದಲ್ಲಿ ಸೆರೆಯಾಗಿತ್ತು. ಸಿಸೋಡಿಯಾ ಅವರು ಲಿಖಿತ ದೂರು ದಾಖಲಿಸಿದ್ದರು. ಆದರೆ, ದೆಹಲಿ ಪೊಲೀಸರು ಆ ತಪ್ಪನ್ನು ನಿರಾಕರಿಸಿದ್ದರು. ಅಲ್ಲದೆ, ವೀಡಿಯೊದಲ್ಲಿ ತೋರಿಸಿರುವ ದೃಶ್ಯವು ಭದ್ರತೆಗೆ ಅಗತ್ಯವಾಗಿತ್ತು ಎಂದು ಪೊಲೀಸರು ಹೇಳಿದ್ದರು.

ಕಳೆದ ವರ್ಷ ಫೆಬ್ರವರಿಯಲ್ಲಿ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಬಂಧಿಸಿದ್ದ ಇಡಿ, ಇದೀಗ ಗುರುವಾರ ರಾತ್ರಿ ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಬಂಧನಕ್ಕೊಳಗಾದ ದೇಶದ ಮೊದಲ ಹಾಲಿ ಮುಖ್ಯಮಂತ್ರಿ ಕೇಜ್ರಿವಾಲ್ ಆಗಿದ್ದಾರೆ. ಕೇಜ್ರಿವಾಲ್ ಅವರನ್ನು ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಅವರನ್ನು ಏಳು ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿದೆ.

ಇಡಿ ಪ್ರಕಾರ, ಪ್ರಕರಣದಲ್ಲಿ 600 ಕೋಟಿ ರೂ. ಅವ್ಯವಹಾರ ನಡೆದಿದೆ. ದೆಹಲಿ ಅಬಕಾರಿ ನೀತಿಯು ಸಗಟು ವ್ಯಾಪಾರಿಗಳಿಗೆ 12% ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ಸುಮಾರು 185% ನಷ್ಟು ಲಾಭಾಂಶವನ್ನು ಒದಗಿಸಿದೆ ಎಂದು ಇಡಿ ಹೇಳಿದೆ. 12%ರಲ್ಲಿ 6%ಅನ್ನು ಸಗಟು ವ್ಯಾಪಾರಿಗಳಿಂದ ಎಎಪಿ ನಾಯಕರು ಕಿಕ್‌ಬ್ಯಾಕ್ ಆಗಿ ವಸೂಲಿ ಮಾಡಲಾಗುತ್ತಿತ್ತು ಎಂದು ಕೂಡ ಇಡಿ ಆರೋಪಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...

ಶಾಲೆಗಳಲ್ಲಿ ರ‍್ಯಾಗಿಂಗ್ ತಡೆಗೆ ಕೇಂದ್ರದ ಹೊಸ ಕಾನೂನು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ದೇಶದ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ರ‍್ಯಾಗಿಂಗ್ ಮತ್ತು ಕಿರುಕುಳವನ್ನು ತಡೆಯಲು ಕೇಂದ್ರ...

SIR ಅಕ್ರಮ | ಕೂಡಲೇ ಗ್ಯಾನೇಶ್‌ ಕುಮಾರ್‌, ಮೋದಿ ರಾಜೀನಾಮೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳಾಗಿವೆ ಎಂದು...