ಬಿಜೆಪಿಯಿಂದ ದೇಶ ರಕ್ಷಿಸಲು ವಿಪಕ್ಷಗಳೊಂದಿಗೆ ಒಟ್ಟಿಗೆ ಹೋರಾಟ: ರಾಹುಲ್‌ ಗಾಂಧಿ

Date:

ಪಾಟ್ನಾದಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ನಡೆದ ವಿಪಕ್ಷಗಳ ಒಗ್ಗಟ್ಟಿನ ಸಭೆಯು ಮೊದಲ ಹಂತದಲ್ಲಿ ಯಶಸ್ವಿಯಾಗಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ದೇಶದ 15 ಪಕ್ಷಗಳ 32 ನಾಯಕರು ಪಾಲ್ಗೊಂಡು 2024ರ ಲೋಕಸಭೆಯಲ್ಲಿ ಬಿಜೆಪಿ ವಿರುದ್ಧ ಒಟ್ಟಿಗೆ ಹೋರಾಡಲು ಚರ್ಚೆ ನಡೆಸಿದರು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ, “ಭಿನ್ನಾಭಿಪ್ರಾಯಗಳ ಹೊರತಾಗಿಯೂ, ಪಾಲ್ಗೊಂಡಿರುವ ಎಲ್ಲ ಪಕ್ಷಗಳು ಒಟ್ಟಾಗಿ ಹೋರಾಡಲು ಸಾಮಾನ್ಯ ವೇದಿಕೆಯನ್ನು ಕಂಡುಕೊಳ್ಳುತ್ತಿವೆ. ನಮ್ಮಲ್ಲಿ ಕೆಲವು ಭಿನ್ನಾಭಿಪ್ರಾಯಗಳಿರಬಹುದು. ಆದರೆ ನಮ್ಮ ಸಿದ್ಧಾಂತವನ್ನು ರಕ್ಷಿಸಲು ಹೊಂದಾಣಿಕೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಮಲ್ಲಿಕಾರ್ಜುನ ಖರ್ಗೆ ಮತ್ತು ನಿತೀಶ್ ಕುಮಾರ್ ಅವರ ನೇತೃತ್ವದೊಂದಿಗೆ ಮುಂದಿನ ಸಭೆಯಲ್ಲಿ ನಾವು ಈ ಚರ್ಚೆಯನ್ನು ಇನ್ನಷ್ಟು ಹೆಚ್ಚಿನ ಮಟ್ಟಕ್ಕೆ ಕೊಂಡೊಯ್ಯುತ್ತೇವೆ. ಪ್ರತಿಪಕ್ಷಗಳ ಒಗ್ಗಟ್ಟಿನ ಮೊದಲ ಹಂತದ ಪ್ರಕ್ರಿಯೆ ಈ ಸಭೆಯಿಂದ ಮುಂದುವರಿಯುತ್ತದೆ” ಎಂದು ರಾಹುಲ್‌ ಗಾಂಧಿ ತಿಳಿಸಿದರು.

ಮುಂದಿನ ಸಭೆ ಶಿಮ್ಲಾದಲ್ಲಿ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, 2024ರ ಲೋಕಸಭೆ ಚುನಾವಣೆಯಲ್ಲಿ ಒಟ್ಟಾಗಿ ಹೋರಾಡುವ ಸಾಮಾನ್ಯ ಉದ್ದೇಶ ಮುಂದಿನ ಸಭೆಯಲ್ಲಿ ಅಂತಿಮಗೊಳ್ಳಲಿದೆ. ನಾವೆಲ್ಲರೂ ಒಟ್ಟಾಗಿ ಹೋರಾಡಲು ಸಾಮಾನ್ಯ ಕಾರ್ಯಸೂಚಿಗೆ ಬರಲು ಪ್ರಯತ್ನಿಸುತ್ತಿದ್ದೇವೆ. ಮುಂದಿನ ಜುಲೈ 10 ಅಥವಾ 12 ರಂದು ಶಿಮ್ಲಾದಲ್ಲಿ ಮತ್ತೆ ಸಭೆ ನಡೆಸುತ್ತೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಂಚನೆಗೆ ಕಾದಿದೆ ‘ಪಿಂಕ್ ವಾಟ್ಸಾಪ್’ ಲಿಂಕ್: ಹೊಸ ಫೀಚರ್‌ ಎಂದು ಕ್ಲಿಕ್‌ ಮಾಡಿದರೆ ನಿಮ್ಮ ಹಣ, ದಾಖಲೆಗಳು ಮಾಯ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿ, “ನಾವು ಒಗ್ಗಟ್ಟಾಗಿದ್ದೇವೆ, ಒಗ್ಗಟ್ಟಿನಿಂದ ಹೋರಾಡುತ್ತೇವೆ. ಇತಿಹಾಸವನ್ನು ಬದಲಾಯಿಸಬೇಕು ಎಂದು ಬಿಜೆಪಿ ಬಯಸುತ್ತದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ದೇಶವು ಮತ್ತೊಂದು ಚುನಾವಣೆಯನ್ನು ನೋಡುವುದಿಲ್ಲ. ಅಗತ್ಯವಿದ್ದರೆ ನಮ್ಮ ರಕ್ತ ಹರಿಯಲಿ. ಆದರೆ ನಾವು ನಮ್ಮ ಜನರನ್ನು ರಕ್ಷಿಸುತ್ತೇವೆ. ಬಿಜೆಪಿ ಇತಿಹಾಸವನ್ನು ಬದಲಾಯಿಸಬೇಕೆಂದು ಬಯಸುತ್ತದೆ, ಆದರೆ ಬಿಹಾರದಿಂದ ಇತಿಹಾಸವನ್ನು ಉಳಿಸುವ ಕಾರ್ಯ ನಡೆಯುತ್ತದೆ” ಎಂದು ತಿಳಿಸಿದರು.

ಸಭೆಯಲ್ಲಿ ಪಾಲ್ಗೊಂಡ ನಾಯಕರು ಇವರು

ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ ಸಿ ವೇಣುಗೋಪಾಲ್ (ಕಾಂಗ್ರೆಸ್), ನಿತೀಶ್ ಕುಮಾರ್, ಲಾಲನ್ ಸಿಂಗ್, ಸಂಜಯ್ ಝಾ (ಜೆಡಿಯು), ಮಮತಾ ಬ್ಯಾನರ್ಜಿ, ಅಭಿಷೇಕ್ ಬ್ಯಾನರ್ಜಿ (ಟಿಎಂಸಿ), ಎಂಕೆ ಸ್ಟಾಲಿನ್, ಟಿ ಆರ್ ಬಾಲು (ಡಿಎಂಕೆ), ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್, ರಾಘವ್‌ ಛೆಡ್ಡಾ, ಸಂಜಯ್ ಸಿಂಗ್ (ಎಎಪಿ), ಹೇಮಂತ್ ಸೊರೇನ್ (ಜೆಎಂಎಂ), ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆ, ಸಂಜಯ್ ರಾವುತ್ (ಶಿವಸೇನೆ, ಯುಬಿಟಿ), ಶರದ್ ಪವಾರ್, ಸುಪ್ರಿಯಾ ಸುಳೆ, ಪ್ರಫುಲ್ ಪಟೇಲ್ (ಎನ್‌ಸಿಪಿ), ಲಾಲು ಪ್ರಸಾದ್ ಯಾದವ್, ತೇಜಸ್ವಿ ಯಾದವ್, ಮನೋಜ್ ಝಾ (ಆರ್‌ಜೆಡಿ), ಅಖಿಲೇಶ್ ಯಾದವ್ (ಎಸ್‌ಪಿ), ಸೀತಾರಾಮ್ ಯೆಚೂರಿ (ಸಿಪಿಐಎಂ), ಒಮರ್‌ ಅಬ್ದುಲ್ಲಾ (ನ್ಯಾಷನಲ್‌ ಕಾನ್ಫರೆನ್ಸ್‌), ಮೆಹಬೂಬಾ ಮುಫ್ತಿ (ಪಿಡಿಪಿ), ದೀಪಂಕರ್ ಭಟ್ಟಾಚಾರ್ಯ (ಸಿಪಿಐಎಂಎಲ್), ಡಿ ರಾಜಾ (ಸಿಪಿಐ), ಫಿರ್ಹಾದ್ ಹಕೀಮ್ (ಎಐಟಿಸಿ).

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...