Delhi Election Result | 27 ವರ್ಷಗಳ ಬಳಿಕ ದೆಹಲಿ ಗದ್ದುಗೆ ಏರಿದ ಕಮಲ, ಮುಗ್ಗರಿಸಿದ ಕೇಜ್ರಿವಾಲ್ ಪಕ್ಷ

Date:

ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ಮೂಲಕ ಹ್ಯಾಟ್ರಿಕ್‌ ಜಯದ ನಿರೀಕ್ಷೆಯಲ್ಲಿದ್ದ ದೆಹಲಿಯ ಆಡಳಿತರೂಢ ಆಮ್ ಆದ್ಮಿ ಪಕ್ಷಕ್ಕೆ ತೀವ್ರ ಹಿನ್ನಡೆ ಉಂಟಾಗಿದೆ. 27 ವರ್ಷಗಳ ಬಳಿಕ ಬಿಜೆಪಿ ದೆಹಲಿ ಗದ್ದುಗೆಗೆ ಏರುವ ಲಕ್ಷಣಗಳು ಕಾಣುತ್ತಿವೆ.

- Advertisement -

ದೇಶದ ಗಮನ ಸೆಳೆದಿರುವ ದಿಲ್ಲಿ ವಿಧಾನಸಭೆ ಚುನಾವಣೆಯ ಫಲಿತಾಂಶದ ಪಕ್ಷಿನೋಟ ಹೊರಬಿದ್ದಿದ್ದು. 46 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. 24 ಸ್ಥಾನಗಳಲ್ಲಿ ಆಪ್‌ ಮುನ್ನಡೆಯಲ್ಲಿದೆ. ಸತತವಾಗಿ 15 ವರ್ಷ ದೆಹಲಿಯಲ್ಲಿ ರಾಜ್ಯಭಾರ ಮಾಡಿದ ಕಾಂಗ್ರೆಸ್ ಮತ್ತೊಮ್ಮೆ ಕಳಪೆ ಸಾಧನೆಯತ್ತ ಸಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಬಹುಮತಕ್ಕೆ ಬೇಕಾದ ಸಂಖ್ಯೆಗಿಂತ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಮುನ್ನಡೆಯ ಟ್ರೆಂಡ್‌ಗಳು ಬಿಜೆಪಿ ನಾಯಕರಲ್ಲಿ ಸಂಭ್ರಮ ಹೆಚ್ಚಿಸಿದೆ. ಬಿಜಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಸಿಹಿ ಹಂಚಿ ಖುಷಿ ವ್ಯಕ್ತಪಡಿಸುತ್ತಿದ್ದಾರೆ.

ಬಹುಮತಕ್ಕೆ 36 ಸ್ಥಾನಗಳ ಅಗತ್ಯವಿದ್ದು, ಬಿಜೆಪಿ ಈ ಸ್ಥಾನಗಳನ್ನು ಮುನ್ನಡೆಯಲ್ಲಿ ಭದ್ರಬಡಿಸಿಕೊಂಡಿದೆ. 2013ರ ಚುನಾವಣೆಯಲ್ಲಿ ಬಿಜೆಪಿ 31 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿ ಅಧಿಕಾರದಿಂದ ದೂರ ಉಳಿದಿತ್ತು. 2015ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಬಿಜೆಪಿ 3 ಸ್ಥಾನಗಳನ್ನು ಪಡೆದಿತ್ತು.

15 ವರ್ಷಗಳ ಕಾಲ ರಾಷ್ಟ್ರ ರಾಜಧಾನಿಯನ್ನು ಆಳಿದ ಕಾಂಗ್ರೆಸ್ 2013ರ ವಿಧಾನಸಭಾ ಚುನಾವಣೆಯಲ್ಲಿ 8 ಸ್ಥಾನಗಳನ್ನು ಪಡೆದಿತ್ತು. 28 ಕ್ಷೇತ್ರಗಳಲ್ಲಿ ಗೆದಿದ್ದ ಎಎಪಿಗೆ ಬೆಂಬಲ ನೀಡಿತ್ತು. ಆದರೆ ಕೆಲವೇ ದಿನಗಳಲ್ಲಿ ಮೈತ್ರಿ ಮುರಿದು ಹೋಗಿತ್ತು. 2015ರ ವಿಧಾನಸಭಾ ಚುನಾವಣೆಯಲ್ಲಿ ಎಎಪಿ 67 ಸ್ಥಾನಗಳನ್ನು ಗೆದ್ದು ಹೊಸ ದಾಖಲೆ ಬರೆದಿತ್ತು. ಕಾಂಗ್ರೆಸ್ ಶೂನ್ಯ ಸಂಪಾದನೆ ಮಾಡಿತ್ತು. 2020ರ ವಿಧಾನಸಭಾ ಚುನಾವಣೆಯಲ್ಲಿ ಎಎಪಿ 62 ಸ್ಥಾನಗಳನ್ನು ಗೆದ್ದು ಎರಡನೇ ಸಲ ಅಧಿಕಾರ ಹಿಡಿದಿತ್ತು. ಬಿಜೆಪಿ 8 ಸ್ಥಾನಗಳನ್ನು ಪಡೆದಿತ್ತು. ಕಾಂಗ್ರೆಸ್ ಆಗಲೂ ಶೂನ್ಯ ಸಂಪಾದನೆ ಮಾಡಿತ್ತು. 2025ರ ಚುನಾವಣೆಯಲ್ಲೂ ಕಾಂಗ್ರೆಸ್ ಶೂನ್ಯ ಸಂಪಾದನೆ ಮಾಡುವ ಸಾಧ್ಯತೆ ಕಾಣುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...