ಮುರುಘಾ ಮಠದ ಅಧಿಕಾರ ಮತ್ತೆ ಅತ್ಯಾಚಾರ ಆರೋಪಿ ಮುರುಘಾಶ್ರೀ ಕೈಗೆ!

Date:

Advertisements

ಹೈಕೋರ್ಟ್‌ ನಿರ್ದೇಶನದ ಮೇರೆಗೆ ಮುರುಘಾ ಮಠದ ತಾತ್ಕಾಲಿಕ ಆಡಳಿತಾಧಿಕಾರಿಯಾಗಿದ್ದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಕೆ.ಬಿ.ಗೀತಾ ಅವರು ಪೀಠಾಧಿಪತಿ ಸ್ಥಾನದ ಅಧಿಕಾರವನ್ನು ಅತ್ಯಾಚಾರ ಆರೋಪಿ ಮುರುಘಾಶ್ರೀಗೆ ಹಸ್ತಾಂತರಿಸಿದ್ದಾರೆ.

ಪೀಠಾಧಿಪತಿಗೆ ಅಧಿಕಾರ ಮರಳಿಸಿದ ಆದೇಶ ಡಿ.5ರಂದು ಹೊರಬಿದ್ದಿದ್ದು, ನ್ಯಾಯಾಧೀಶರ ಕಚೇರಿ ಗುರುವಾರ ಅಧಿಕೃತ ಪತ್ರವನ್ನು ಮಠಕ್ಕೆ ತಲುಪಿಸಿದೆ. ಬಸವಪ್ರಭು ಸ್ವಾಮೀಜಿ ನ್ಯಾಯಾಲಯದ ಆದೇಶ ಪ್ರತಿ ಸ್ವೀಕರಿಸಿ ಶಿವಮೂರ್ತಿ ಮುರುಘಾ ಶರಣರಿಗೆ ತಲುಪಿಸಿದ್ದಾರೆ. ಚಿತ್ರದುರ್ಗ ಜಿಲ್ಲಾ ಪ್ರವೇಶಕ್ಕೆ ಹೈಕೋರ್ಟ್‌ ನಿರ್ಬಂಧ ವಿಧಿಸಿರುವುದರಿಂದ ಶರಣರು ಹೊರಗಿನಿಂದಲೇ ಆಡಳಿತ ನಡೆಸಲಿದ್ದಾರೆ.

ಮುರುಘಾಶ್ರೀ

‘ಮುರುಘಾ ಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠದ ಆಡಳಿತವನ್ನು ನ್ಯಾಯಾಧೀಶರು ಪೀಠಾಧಿಪತಿಗೆ ಹಸ್ತಾಂತರಿಸಿದ್ದಾರೆ. ಮಠದ ಸದ್ಭಕ್ತರು ಸಹಕರಿಸಬೇಕು’ ಎಂದು ಎಸ್‌ಜೆಎಂ ವಿದ್ಯಾ‍ಪೀಠದ ಅಧ್ಯಕ್ಷರೂ ಆಗಿರುವ ಶಿವಮೂರ್ತಿ ಶರಣರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisements

ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಪ್ರಕರಣದಲ್ಲಿ 2022ರ ಸೆ.1ರಂದು ಬಂಧನಕ್ಕೊಳಗಾಗಿದ್ದರು. ನ್ಯಾಯಾಂಗ ಬಂಧನದಲ್ಲಿದ್ದರಿಂದ ಮಠದ ಸುಗಮ ಆಡಳಿತಕ್ಕಾಗಿ ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ 2022ರ ಡಿ.13ರಂದು ಆದೇಶಿಸಿತ್ತು.

ಮಠದ ಉಸ್ತುವಾರಿಯಾಗಿದ್ದ ಬಸವಪ್ರಭು ಅವರು ಸರ್ಕಾರದ ಈ ಕ್ರಮವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಸರ್ಕಾರದ ಆಡಳಿತಾಧಿಕಾರಿ ನೇಮಕ ಆದೇಶವನ್ನು ರದ್ದುಪಡಿಸಿದ ನ್ಯಾಯಾಲಯ, ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ನಿಯೋಜಿಸಿ ಜುಲೈ 3ರಂದು ಆದೇಶಿಸಿತ್ತು. ಶಿವಮೂರ್ತಿ ಶರಣರು ನ.16ರಂದು ಜಾಮೀನು ಮೇಲೆ ಕಾರಾಗೃಹದಿಂದ ಹೊರಬಂದ ಬಳಿಕ ಈ ಆದೇಶ ರದ್ದಾಗಿತ್ತು.

ಮುನ್ನೆಲೆಗೆ ಬಂದ ಹಣ ದುರುಪಯೋಗ ನೋಟಿಸ್‌

ಮುರುಘಾ ಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠದ ₹ 24 ಲಕ್ಷವನ್ನು ದುರುಪಯೋಗ ಮಾಡಿಕೊಂಡ ಆರೋಪ ಎದುರಿಸುತ್ತಿರುವ ಬಸವಪ್ರಭು ಸ್ವಾಮೀಜಿ ಅವರಿಗೆ ತಾತ್ಕಾಲಿಕ ಆಡಳಿತಾಧಿಕಾರಿ ನೀಡಿದ್ದ ನೋಟಿಸ್‌ ಮುನ್ನೆಲೆಗೆ ಬಂದಿದೆ.

ಅಡಗೂರು ಮಠದ ₹ 6 ಲಕ್ಷ, ಚಿತ್ರದುರ್ಗದ ಎಸ್‌ಜೆಎಂ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ₹ 8 ಲಕ್ಷ ಹಾಗೂ ಬೆಂಗಳೂರಿನ ಕಾನಿಷ್ಕ ಗ್ರ್ಯಾಂಡ್‌ ಹೋಟೆಲ್‌ ಮಾಲೀಕರಿಂದ ಪಡೆದ ₹ 10 ಲಕ್ಷವನ್ನು ಕಾನೂನು ಬಾಹಿರವಾಗಿ ಬಳಸಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ನೀಡಿದ ಸಮಜಾಯಿಷಿ ಸರಿಯಾಗಿಲ್ಲ. ಕೂಡಲೇ ಹಣವನ್ನು ಮಠ ಅಥವಾ ವಿದ್ಯಾಪೀಠಕ್ಕೆ ಮರಳಿಸಬೇಕು. ತಪ್ಪಿದರೆ ಹಣ ವಸೂಲಿ ಪ್ರಕ್ರಿಯೆಗೆ ದಾವೆ ಹೂಡಬೇಕಾಗುತ್ತದೆ ಎಂದು ನ. 4ರಂದು ನೀಡಿದ ನೋಟಿಸ್‌ನಲ್ಲಿ ಎಚ್ಚರಿಕೆ ನೀಡಲಾಗಿದೆ.

“ತಾತ್ಕಾಲಿಕ ಆಡಳಿತಾಧಿಕಾರಿಯಾಗಿದ್ದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶರು ಈ ನೋಟಿಸ್‌ ನೀಡಿದ್ದರು. ಈಗ ಆಡಳಿತಾಧಿಕಾರಿ ನೇಮಕ ಆದೇಶ ರದ್ದಾಗಿದೆ. ಪೀಠಾಧಿಪತಿ ಶಿವಮೂರ್ತಿ ಶರಣರು ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಿದ್ದಾರೆ” ಎಂದು ಮಠದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X