ಹಾಲಿನ ಬೆಲೆ ಏರಿಕೆ ಮಾಡಿಲ್ಲ, ಹೆಚ್ಚುವರಿ ಹಾಲಿಗೆ 2 ರೂ. ನಿಗದಿ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ

Date:

Advertisements

“ನಂದಿನಿ ಹಾಲಿನ ಪ್ಯಾಕೇಟ್‌ಗಳಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್‌ ಹೆಚ್ಚಳ ಮಾಡಿ, ಆ ಹೆಚ್ಚುವರಿ ಹಾಲಿಗೆ 2. ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

“ಅರ್ಧಲೀಟರ್‌ ಹಾಲಿನ ಪ್ಯಾಕೇಟ್‌ನಲ್ಲಿ ಮುಂದೆ 550 ಎಂಎಲ್‌ ಹಾಲು ಹಾಗೂ ಲೀಟರ್‌ ಪ್ಯಾಕೇಟ್‌ ನಲ್ಲಿ 1,050 ಎಂಎಲ್‌ ಹಾಲು ಸಿಗಲಿದೆ” ಎಂದು ಮಾಧ್ಯಮ ಪ್ರಕಟಣೆಯಲ್ಲಿ ಸಿಎಂ ತಿಳಿಸಿದ್ದಾರೆ.

“ಹಾಲು ಸಂಗ್ರಹಣಾ ಕೇಂದ್ರಗಳಲ್ಲಿ ಯಾವುದೇ ಕಾರಣಕ್ಕೂ ರೈತರು ಹೆಚ್ಚುವರಿಯಾಗಿ ತರುತ್ತಿರುವ ಹಾಲನ್ನು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಕೆಎಂಎಫ್‌ ಸಂಸ್ಥೆ ಪ್ಯಾಕೇಟ್‌ ಗಳಲ್ಲಿ ಹಾಲಿನ ಪ್ರಮಾಣ ಹೆಚ್ಚಳ ಮಾಡುವ ತೀರ್ಮಾನ ಮಾಡಲಾಗಿದೆ” ಎಂದಿದ್ದಾರೆ.

Advertisements

“ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಈ ಬಾರಿ ಹಾಲಿನ ಉತ್ಪಾದನೆ ಶೇ.15 ಹೆಚ್ಚಳವಾಗಿದೆ. ಹಿಂದಿನ ವರ್ಷಗಳಲ್ಲಿ ಈ ವೇಳೆಗೆ ನಿತ್ಯ ಸರಾಸರಿ 90 ಲಕ್ಷ ಲೀಟರ್‌ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣ ಈ ಬಾರಿ ಸರಾಸರಿ 99 ಲಕ್ಷ ಲೀಟರ್‌ಗೆ ಏರಿಕೆಯಾಗಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತಿದೆ. ಯಾವುದೇ ಕಾರಣಕ್ಕೂ ರೈತರಿಂದ ಹಾಲು ಪಡೆಯಲು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಒಂದು ಲೀಟರ್‌ ಹಾಲಿನ ಪ್ಯಾಕಿಗೆ ಹೆಚ್ಚುವರಿಯಾಗಿ 50 ಮಿ.ಲೀ ಹಾಲನ್ನು ಸೇರಿಸಿ, ಈ ಹೆಚ್ಚುವರಿ ಹಾಲಿನ ಬೆಲೆ 2 ರೂಪಾಯಿಯನ್ನು ಮಾತ್ರ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆ. ಹಾಲಿನ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿರುವುದಿಲ್ಲ” ಎಂದು ವಿವರಿಸಿದ್ದಾರೆ.

“ಈವರೆಗೆ 1,000 ಮಿ.ಲೀ ಹಾಲಿಗೆ ರೂ.42 ಹಾಗೂ 500 ಮಿ.ಲೀ ಹಾಲಿಗೆ ರೂ.22 ದರವನ್ನು ನಿಗದಿಪಡಿಸಲಾಗಿತ್ತು, ಇನ್ನು ಮುಂದೆ 1,050 ಮಿ.ಲೀ ಹಾಗೂ 550 ಮಿ.ಲೀ ಹಾಲಿನ ಪ್ಯಾಕೇಟ್‌ ಗಳನ್ನು ಮಾರಾಟ ಮಾಡಲಾಗುತ್ತಿದ್ದು, ಅದಕ್ಕೆ ಕ್ರಮವಾಗಿ ರೂ.44 ಹಾಗೂ ರೂ.24 ದರ ನಿಗದಿಪಡಿಸಲಾಗುತ್ತದೆ. ಇದು ನಾಡಿನ ಲಕ್ಷಾಂತರ ಹೈನುಗಾರರ ಹಿತದೃಷ್ಟಿಯಿಂದ ಕೆ.ಎಂ.ಎಫ್‌ ಸಂಸ್ಥೆಯು ತೆಗೆದುಕೊಂಡ ನಿರ್ಣಯವಾಗಿದ್ದು, ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತಿರುವ ಹಾಲನ್ನು ಗ್ರಾಹಕರಿಗೆ ನೇರವಾಗಿ ತಲುಪಿಸುವ ಸದುದ್ದೇಶ ಹೊಂದಿದೆ” ಎಂದು ಹೇಳಿದ್ದಾರೆ.

“ಈಗಾಗಲೇ ಗರಿಷ್ಟ ಪ್ರಮಾಣದ ಹಾಲನ್ನು ಹಾಲಿನ ಪೌಡರ್‌ ತಯಾರಿಕೆ ಮಾಡುವ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತಿದೆ. ನಿತ್ಯ ಸುಮಾರು 30 ಲಕ್ಷ ಲೀಟರ್‌ ಹಾಲು ಪೌಡರ್‌ ತಯಾರಿಕೆಗಾಗಿ ಬಳಸಲ್ಪಡುತ್ತಿದ್ದು, 250 ಮೆಟ್ರಿಕ್‌ ಟನ್‌ ಹಾಲಿನ ಪೌಡರ್‌ ತಯಾರಿಸಲಾಗುತ್ತಿದೆ. ಇದು ಹಾಲಿನ ಪೌಡರ್‌ಗೆ ಇರುವ ಬೇಡಿಕೆಗೆ ಅನುಗುಣವಾಗಿದೆ” ಎಂದು ತಿಳಿಸಿದ್ದಾರೆ.

“ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ವೇಳೆ ರಾಜ್ಯದಲ್ಲಿ ನಿತ್ಯ ಸರಾಸರಿ 72 ಲಕ್ಷ ಲೀಟರ್‌ಗಳಷ್ಟು ಹಾಲು ಸಂಗ್ರಹವಾಗುತ್ತಿತ್ತು. ಈ ಹಿಂದೆ ಹಾಲಿನ ಬೆಲೆಯಲ್ಲಿ ರೂ.3 ಹೆಚ್ಚಳ ಮಾಡಿ ಆ ಹೆಚ್ಚುವರಿ ಹಣವನ್ನು ರೈತರಿಗೆ ನೇರವಾಗಿ ವರ್ಗಾಯಿಸುವ ಪ್ರೋತ್ಸಾಹದಾಯಕ ಕ್ರಮ ಕೈಗೊಂಡಿದ್ದರಿಂದ ಹೈನೋದ್ಯಮವು ಹಿಂದಿಗಿಂತ ಲಾಭ ತಂದುಕೊಡುವ ಉದ್ಯೋಗವಾಯಿತು ಜೊತೆಗೆ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಜಾನುವಾರುಗಳಿಗೆ ಹಸಿರು ಮೇವು ಲಭ್ಯವಾಗುತ್ತಿದೆ. ಈ ಎರಡು ಕಾರಣಗಳಿಂದಾಗಿ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಇಂದು ನಿತ್ಯ ಸರಿಸುಮಾರು 1ಕೋಟಿ ಲೀಟರ್‌ ತಲುಪುವ ಹಂತಕ್ಕೆ ಬಂದಿದೆ” ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X