ಮೈಕ್ರೋ ಫೈನಾನ್ಸ್‌ | ಸುಗ್ರೀವಾಜ್ಞೆ ಉದ್ದೇಶ ವಿಫಲವಾಗಬಾರದು: ಸಿಎಂ ಸಿದ್ದರಾಮಯ್ಯ

Date:

ಮೈಕ್ರೋ ಫೈನಾನ್ಸ್‌ ಕಿರುಕುಳವನ್ನು ತಡೆಯಲು ಜಾರಿಗೆ ತರಲಾಗಿರುವ ಸುಗ್ರೀವಾಜ್ಞೆಯ ಉದ್ದೇಶ ವಿಫಲವಾಗಬಾರದು. ಸುಗ್ರಿವಾಜ್ಞೆಯ ನಿಯಮಗಳನ್ನು ಎಲ್ಲ ಜಿಲ್ಲೆಗಳಲ್ಲೂ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಸುಗ್ರೀವಾಜ್ಞೆ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ಸಿದ್ದರಾಮಯ್ಯ ವಿಡಿಯೋ ಸಂವಾದದಲ್ಲಿ ಚರ್ಚೆ ನಡೆಸಿದರು. “ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರಿಗೆ ಯಾವುದೇ ಕಿರುಕುಳ ಉಂಟಾಗಬಾರದು ಎಂಬ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆಯ ಎಲ್ಲ ಅಂಶಗಳನ್ನು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಪರವಾನಿಗೆ ಪಡೆಯದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಮೇಲೆ ನಿರಂತರ ನಿಗಾ ಇರಿಸಬೇಕು. ಪರವಾನಿಗೆ ಪಡೆದಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಆರ್‌ಬಿಐ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವುದನ್ನು ಖಾತ್ರಿಪಡಿಸಬೇಕು. ಬಲವಂತದ ವಸೂಲಾತಿ ಮಾಡುವವರ ವಿರುದ್ದ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು” ಎಂದರು.

“ಎಲ್ಲ ಜಿಲ್ಲೆಗಳಲ್ಲಿ ಈಗಾಗಲೇ ಸಹಾಯವಾಣಿ ಪ್ರಾರಂಭಿಸಲು ಸೂಚಿಸಲಾಗಿದ್ದು, ಬಲವಂತದ ಸಾಲ ವಸೂಲಾತಿ ಮಾಡುವ ಪ್ರಕರಣಗಳಲ್ಲಿ ಸ್ವಯಂಪ್ರೇರಿತವಾಗಿ ಮೊಕದ್ದಮೆ ದಾಖಲಿಸಬೇಕು” ಎಂದು ಹೇಳಿದರು.

“ಸಾಲ ನೀಡುವವರಿಗೆ ತೊಂದರೆ ಉಂಟು ಮಾಡುವ ಯಾವುದೇ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಿಲ್ಲ. ಆದರೆ ಬಲವಂತದ ವಸೂಲಾತಿ, ಮಾನಹಾನಿ, ಕಿರುಕುಳದ ಮೂಲಕ ಸಾಲ ವಸೂಲಾತಿಯನ್ನು ತಡೆಯುವ ಉದ್ದೇಶದಿಂದ ಜಾರಿಗೆ ತರಲಾಗಿದೆ” ಎಂದು ತಿಳಿಸಿದರು.

“ಯಾವುದೇ ಜಿಲ್ಲೆಗಳಲ್ಲಿ ಸಾಲಗಾರರ ಕಿರುಕುಳ ಮುಂದುವರೆದಿರುವುದು ಗಮನಕ್ಕೆ ಬಂದರೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿ ಅವರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು” ಎಂದು ಎಚ್ಚರಿಸಿದರು.

“ಕಾಯ್ದೆ ಜಾರಿಗೊಳಿಸಿದ ಬಳಿಕ ಹಲವು ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಮುಖವಾಗಿದ್ದು, ಕಟ್ಟುನಿಟ್ಟಿನಿಂದ ಕಾಯ್ದೆಯ ಅಂಶಗಳನ್ನು ಜಾರಿಗೊಳಿಸುವ ಮೂಲಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು” ಎಂದು ಸೂಚನೆ ನೀಡಿದರು.

ವಿಡಿಯೋ ಸಂವಾದ ಸಭೆಯಲ್ಲಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ನಸೀರ್‌ ಅಹ್ಮದ್‌, ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ದರ್ಶಿ ಎಲ್.ಕೆ.ಅತೀಕ್‌, ಕಾನೂನು ಸಲಹೆಗಾರ ಎ.ಎಸ್.‌ ಪೊನ್ನಣ್ಣ, ಅಡ್ವಕೇಟ್‌ ಜನರಲ್‌ ಶಶಿಕಿರಣ ಶೆಟ್ಟಿ, ಹ ಪೊಲೀಸ್‌ ಮಹಾ ನಿರ್ದೇಶಕ ಅಲೋಕ್‌ ಮೋಹನ್‌, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಮತ್ತಿತರ ಅಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...