ಕಾಂಗ್ರೆಸ್‌ನಿಂದ ನಿರ್ದಿಷ್ಟ ಸಮುದಾಯದ ಓಲೈಕೆ, ನಾಗಮಂಗಲ ಗಲಾಟೆಗೆ ಕಾರಣ: ಕುಮಾರಸ್ವಾಮಿ

Date:

Advertisements

ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ” ಎಂದು ಸಚಿವರು ಕಿಡಿಕಾರಿದ್ದಾರೆ.

“ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ? ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

“ಕಾಂಗ್ರೆಸ್ ಪಕ್ಷ ಮತ್ತು ಆ ಪಕ್ಷದ ರಾಜ್ಯ ಸರಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಈ ಹೇಯ ಘಟನೆ ನಡೆದಿದೆ. ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

“ಸಾರ್ವಜನಿಕರು ಶಾಂತಿ ಕಾಪಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ. ತಕ್ಷಣವೇ ಪಟ್ಟಣದಲ್ಲಿ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು. ಅಲ್ಲದೆ; ಈ ಪ್ರಕರಣ ನೆಪದಲ್ಲಿ ವಿರೋಧ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರು ದರ್ಪ ತೋರಿದರೆ ಸಹಿಸುವ ಪ್ರಶ್ನೆ” ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಾಗಮಂಗಲ ಗಲಾಟೆ | ದುರುಳರು ಯಾವುದೇ ಜಾತಿ, ಧರ್ಮದವರಾಗಲಿ ನಿರ್ದಾಕ್ಷಿಣ್ಯ ಕ್ರಮ: ಸಿದ್ದರಾಮಯ್ಯ

ಪರಮೇಶ್ವರ್​ ಹೇಳಿಕೆಗೆ ಆಕ್ರೋಶ

ಮಂಡ್ಯ ನಾಗಮಂಗಲದಲ್ಲಿ ನಡೆದ ಕೋಮು ಗಲಭೆ ವಿಚಾರವಾಗಿ ರಾಜಕಾರಣ ಮಾಡಬಾರದು ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿರುವುದು ಹೆಚ್ ​ಡಿ ಕುಮಾರಸ್ವಾಮಿ ಕೆರಳಿ ಮಾತನಾಡಿದ್ದಾರೆ.

ಈ ವಿಚಾರವಾಗಿ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, “ಕುಮಾರಸ್ವಾಮಿ ಅವರು ರಾಜಕಾರಣ ಮಾಡಬಾರದು ಎಂದು ಹೇಳುತ್ತಿದ್ದಾರೆ. ನಾನು ಯಾವತ್ತೂ ಸಮಾಜದ ಹೆಸರಲ್ಲಿ ರಾಜಕಾರಣ ಮಾಡಿಲ್ಲ” ಎಂದರು.

“ಗೃಹ ಸಚಿವ ಪರಮೇಶ್ವರ್​ ಸಣ್ಣ ಘಟನೆ ಎಂದು ಲಘುವಾಗಿ ಮಾತನಾಡಿದ್ದಾರೆ. ಒಂದೂವರೆ ಕೋಟಿ ರೂಪಾಯಿ ನಷ್ಟ ಆಗಿದೆ ಎಂದು ಬಟ್ಟೆ ಅಂಗಡಿ ಮಾಲೀಕ ಹೇಳಿದ್ದಾರೆ. ಇದು ಸಣ್ಣ ಘಟನೆಯೇ” ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X