ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಡಿಸೆಂಬರ್ ಅಂತ್ಯದೊಳಗೆ ಪೂರ್ಣ: ಸಚಿವ ಎಂ ಸಿ ಸುಧಾಕರ್

Date:

Advertisements
  • ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ
  • ಅಧಿಕಾರಿ ವರ್ಗದಿಂದ ಯಾವುದೇ ಅಡಚಣೆಯಾಗುವುದಿಲ್ಲ: ಸಚಿವರ ಭರವಸೆ

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ. ಇದಕ್ಕಾಗಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ತಿಳಿಸಿದ್ದಾರೆ.

ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿಯಾಗಿರುವ ನೂರಾರು ಅಭ್ಯರ್ಥಿಗಳು ಸಚಿವರನ್ನು ಮಂಗಳವಾರ ಭೇಟಿಯಾಗಿ ಅಭಿನಂದಿಸಿದರು. ಬಳಿಕ ಮಾತನಾಡಿದ ಸಚಿವರು, “ಕಳೆದ ಮೂರು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾಗಿರುವ 1208 ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಗೆ ಅಧಿಕಾರಿ ವರ್ಗದಿಂದ ಯಾವುದೇ ಅಡಚಣೆಯಾಗುವುದಿಲ್ಲ” ಎಂದು ಭರವಸೆ ನೀಡಿದರು.

“ಮುಖ್ಯಮಂತ್ರಿಗಳ ಸಹಕಾರದಿಂದ ಕೈಗೊಂಡ ಈ ಕ್ರಮದಿಂದಾಗಿ ಈ ಮೊದಲು ಉಂಟಾಗಿದ್ದಂತಹ ಎಲ್ಲ ಸಮಸ್ಯೆಗಳು ಪರಿಹಾರಗೊಂಡಿದೆ. ಇದರಿಂದ ನೂರಾರು ಕುಟುಂಬಗಳ ಬದುಕು ಹಸನಾಗಲಿದೆ. ಇನ್ನು ಕೆಲವೇ ದಿನಗಳಲ್ಲಿ ನೀವು ಸರ್ಕಾರದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿ ನಿಮ್ಮ ಮೇಲಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜೈಲುಗಳಲ್ಲಿ ಪುರುಷರಿಗೆ ನೀಡುವ ಸೌಲಭ್ಯಗಳು ಮಹಿಳೆಯರಿಗೇಕಿಲ್ಲ?

“ಕಡ್ಡಾಯವಾಗಿ ಗ್ರಾಮೀಣ ಭಾಗಕ್ಕೆ ತೆರಳಿ ತಮ್ಮ ವೃತ್ತಿಯನ್ನು ಆರಂಭಿಸಿ ವರ್ಗಾವಣೆಗಾಗಿ ಒತ್ತಡ ಹೇರುವ ಕೆಲಸ ಮಾಡಬೇಡಿ. ನಾನು ನಿಮ್ಮಿಂದ ಇದನ್ನು ಅಷ್ಟೇ ನಿರೀಕ್ಷಿಸುತ್ತೇನೆ. ವಯಸ್ಸಾದ ತಂದೆ, ತಾಯಿ, ಆರೋಗ್ಯ, ಕುಟುಂಬದ ಸಮಸ್ಯೆಗಳನ್ನು ಹೇಳಿಕೊಂಡು ಗ್ರಾಮೀಣ ಭಾಗದ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುವುದನ್ನು ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಬೇಡಿ” ಎಂದು ಕಿವಿಮಾತು ಹೇಳಿದರು.

“ಮೂರು ವರ್ಷದಿಂದ ಸಾಕಷ್ಟು ಅಲೆದಾಡಿದ್ದೀರಿ, ಕಷ್ಟಪಟ್ಟಿದ್ದೀರಿ. ಈಗ ಒಳ್ಳೆಯ ದಿನಗಳು ಬರುತ್ತಿವೆ. ಸಮರ್ಥವಾಗಿ ಬಳಸಿಕೊಂಡು ಶಿಕ್ಷಣ ಕ್ಷೇತ್ರಕ್ಕೆ ನಿಮ್ಮ ಕೊಡುಗೆ ನೀಡಿ. ಸಿಂಧುತ್ವ, ಪೊಲೀಸ್ ಪರಿಶೀಲನೆ, ವೈದ್ಯಕೀಯ ಪರಿಶೀಲನೆ ಎಲ್ಲವನ್ನೂ ತುರ್ತಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಎಲ್ಲಾ ಪರಿಶೀಲನೆ ಮುಗಿದ ತಕ್ಷಣ ಆಯಾ ಅಭ್ಯರ್ಥಿಗಳಿಗೆ ಹುದ್ದೆ ನಿರ್ವಹಿಸಲು ತತ್ ಕ್ಷಣ ಅವಕಾಶ ಮಾಡಿಕೊಡಲಾಗುತ್ತದೆ” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಧರ್ಮಸ್ಥಳ | ದೂರುದಾರನ ಹಿನ್ನೆಲೆ ತಿಳಿದುಕೊಂಡಿದ್ದರೆ ಸರ್ಕಾರದ ದುಡ್ಡು ಉಳೀತಿತ್ತು: ಆರ್. ಅಶೋಕ್

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಡಲಾಗಿದೆ ಎಂದು ದೂರು ಕೊಟ್ಟಿದ್ದ ಸಾಕ್ಷಿ ದೂರುದಾರನನ್ನು...

ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇಡಿ: ನಗದು ಸಹಿತ ಚಿನ್ನಾಭರಣ ವಶಕ್ಕೆ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31...

Download Eedina App Android / iOS

X