ಸರಿಯಾದ ಸಮಯಕ್ಕೆ ಕಚೇರಿಗೆ ಹಾಜರಾಗಿ: ಕಟ್ಟುನಿಟ್ಟಿನ ಆದೇಶ ಹೊರಡಿಸಿದ ಕಂದಾಯ ಇಲಾಖೆ

Date:

  • ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಆದೇಶ
  • ಆದೇಶ ಪಾಲಿಸದಿದ್ದಲ್ಲಿ ಕಟ್ಟುನಿಟ್ಟಿನ ಕಟ್ಟುನಿಟ್ಟಿನ ಕ್ರಮದ ಎಚ್ಚರಿಕೆ ನೀಡಿದ ಕಂದಾಯ ಇಲಾಖೆ

ಸರ್ಕಾರ ನಿಗದಿಪಡಿಸಿರುವ ಸಮಯದಲ್ಲಿ ಕಚೇರಿಗೆ ಆಗಮಿಸಿ, ಸಾರ್ವಜನಿಕರ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸುವಂತೆ ಕಂದಾಯ ಇಲಾಖೆಯು ಅಧಿಕಾರಿಗಳು, ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಸೆ.16ರಂದು ಆದೇಶ ಹೊರಡಿಸಿದ್ದು, ನಿಗದಿತ ವೇಳೆಯಲ್ಲಿ ಕಚೇರಿಗೆ ಹಾಜರಾಗಬೇಕು ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ಆದೇಶದಲ್ಲಿ ಅಧಿಕಾರಿಗಳ ಲೋಷದೋಷಗಳ ಬೆಟ್ಟು ಮಾಡಿರುವ ಅವರು, “ಹಲವಾರು ಬಾರಿ ಕಂದಾಯ ಇಲಾಖೆಯ ಅಧೀನ ಶಾಖೆಗಳಿಗೆ ನಾನು ಖುದ್ದಾಗಿ ಪೂರ್ವಾಹ್ನ 10.45 ಗಂಟೆಗೆ ತಪಾಸಣೆಗೆಂದು ಭೇಟಿ ನೀಡಿದ್ದೆ. ಆಗ ಶಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕರ್ತವ್ಯಕ್ಕೆ ಇನ್ನೂ ಹಾಜರಾಗದಿರುವುದು, ಅಲ್ಲದೇ ಸಾಯಂಕಾಲ ಕಚೇರಿ ತುರ್ತು ಕೆಲಸ ನಿರ್ವಹಣೆಗಾಗಿ ಸಿಬ್ಬಂದಿಗಳನ್ನು ಕರೆದಾಗಲೂ ಕಚೇರಿಯಿಂದ ಅತೀ ಬೇಗ ನಿರ್ಗಮಿಸಿರುವುದು ಕಂಡು ಬಂದಿರುತ್ತದೆ. ಇದರಿಂದಾಗಿ ಕಚೇರಿ ಕೆಲಸಕ್ಕೆ, ಅಡಚಣೆಯುಂಟಾಗುತ್ತಿರುತ್ತದೆ” ಎಂದು ಉಲ್ಲೇಖಿಸಿದ್ದಾರೆ.

ಆದೇಶ ಪತ್ರದ ಪ್ರತಿ

ಅಲ್ಲದೇ, “ಕಚೇರಿ ವೇಳೆಯಲ್ಲಿ ಸಾರ್ವಜನಿಕರು ಟಪಾಲು, ಕಡತ ಚಲನವಲನ ಚಾರಣೆಗಾಗಿ ಬಂದಾಗ ವಿನಾಕಾರಣ ಅವರೊಂದಿಗೆ ಕಾಲಹರಣ ಮಾಡುತ್ತಿರುವುದು, ಗಂಟೆಗಟ್ಟಲೆ ಟೀ, ಕಾಫಿ, ಉಪಾಹಾರಕ್ಕೆಂದು ಕಚೇರಿ ಬಿಟ್ಟು ಹೋಗುವುದು, ಸಂತೆ ಬೀದಿಗಳಲ್ಲಿ ಓಡಾಡುತ್ತಿರುವುದು ಮುಂತಾದವುಗಳು ನನ್ನ ಗಮನಕ್ಕೆ ಬಂದಿದೆ. ಇನ್ನು ಮುಂದೆ ಈ ರೀತಿ ಪುನರಾವರ್ತನೆಯಾದಲ್ಲಿ ಅಂತಹ ನೌಕರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು” ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ರಾಜೇಂದರ್ ಕುಮಾರ್ ಕಟಾರಿಯಾ

ಕಂದಾಯ ಇಲಾಖೆಯ ಎಲ್ಲ ನೌಕಕರು ಪ್ರತಿ ದಿನ ಕಚೇರಿಗೆ ಪೂರ್ವಾಹ 10.30ರೊಳಗಾಗಿ ಕಡ್ಡಾಯವಾಗಿ ಹಾಜರಿರುವುದು ಹಾಗೂ ಸಾಯಂಕಾಲ ಕಚೇರಿಯಿಂದ ತೆರಳುವಾಗ ತಮ್ಮ ಶಾಖೆಯ ಸಂಬಂಧಪಟ್ನ, ಜಂಟಿ,ಉಪ ಕಾರ್ಯದರ್ಶಿಯವರ ಅನುಮತಿ ಪಡೆದು ಕಚೇರಿಯಿಂದ ತೆರಳುವಂತೆಯೂ ಸ್ಪಷ್ಟವಾಗಿ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ತಿಳಿಸಿದ್ದಾರೆ.ಈ ಸೂಚನೆಗಳನ್ನು ಸಿಬ್ಬಂದಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲವಾದಲ್ಲಿ ತಪ್ಪಿತಸ್ಥರ ಮೇಲೆ ಸೂಕ್ತ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದೂ ಕೂಡ ಎಚ್ಚರಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಜಾತಿ ನಿಂದನೆ; ನಟ ಉಪೇಂದ್ರ ಬಂಧನಕ್ಕೆ ಆಗ್ರಹ

ನಟ ಉಪೇಂದ್ರ ಅವರು, ʼಊರು ಇದ್ದಲ್ಲಿ ಹೊಲಗೇರಿʼ ಎನ್ನುವ ಮಾತನ್ನು ಹೇಳುವುದರ...

ಕಾವೇರಿ ವಿವಾದ | ಬೆಂಗಳೂರು ಬಂದ್‌ಗೆ ಎಫ್‌ಐಟಿಯು ಬೆಂಬಲ: ಅಬ್ದುಲ್ ರಹಿಮಾನ್

ಕಾವೇರಿ ಜಲ ವಿವಾದದ ಹಿನ್ನಲೆಯಲ್ಲಿ ಮಂಗಳವಾರ ನಡೆಯಲಿರುವ ಬೆಂಗಳೂರು ಬಂದ್‌ಗೆ ಫೆಡರೇಶನ್...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲು ಮಸೂದೆಗೆ ತಿದ್ದುಪಡಿ: ಮಲ್ಲಿಕಾರ್ಜುನ ಖರ್ಗೆ

2024ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮಸೂದೆಗೆ ತಿದ್ದುಪಡಿ ತರುವುದಾಗಿ...

ಬೀದರ್‌ | ಪಡಿತರದಲ್ಲಿ ಅಕ್ರಮ; 22 ನ್ಯಾಯಬೆಲೆ ಅಂಗಡಿಗಳ ಅಮಾನತು

ಪಡಿತರ ಮಾರಾಟದಲ್ಲಿ ನಿಗದಿತ ಬೆಲೆಗಿಂತ ಹೆಚ್ಚು ದರ ವಿಧಿಸುವುದು, ಇಲ್ಲವೇ ಬಯೋಮೆಟ್ರಿಕ್‌...