ನಾನು ಅನ್ನಕ್ಕಾಗಿ ಕಾದು ನಿಂತ ಪರಿಸ್ಥಿತಿಯೇ ‘ಅನ್ನ ಭಾಗ್ಯ’ ಯೋಜನೆಗೆ ಪ್ರೇರಣೆ: ಸಿಎಂ ಸಿದ್ದರಾಮಯ್ಯ

Date:

ಹೊಟ್ಟೆ ತುಂಬ ಹಿಟ್ಟು-ಬಾಯಿ ತುಂಬ ಅನ್ನ ಎಂದು ನನ್ನಮ್ಮ ಹೇಳುತ್ತಿದ್ದರು. ನಾನು ಅನ್ನ ಭಾಗ್ಯ ಜಾರಿಗೆ ತರಲು ಅನ್ನಕ್ಕಾಗಿ ಕಾದು ನಿಂತ ಪರಿಸ್ಥಿತಿಯೇ ಕಾರಣ ಎಂದು ಮುಖ್ಯಮಂತ್ರಿಗಳು ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸಿದರು.

- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ “ಗ್ಯಾರಂಟಿ ಯೋಜನೆಗಳು: ಬಡವರ ಸುರಕ್ಷತೆ ಮತ್ತು ಕಲ್ಯಾಣ” ಕೃತಿ ಬಿಡುಗಡೆ ಮಾಡಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“1949 ನವೆಂಬರ್ 25 ರಂದು ಸಂವಿಧಾನ ಜಾರಿ ಸಭೆಯಲ್ಲಿ ಮಾಡಿದ ಭಾಷಣ ನನ್ನ ಗ್ಯಾರಂಟಿಗಳಿಗೆ ಸ್ಫೂರ್ತಿ.‌ ಅವಕಾಶಗಳಿಂದ ವಂಚಿತರಾಗಿರುವವರಿಗೆ ಸಮಾನ ಅವಕಾಶಗಳು ಸಿಕ್ಕಾಗ ಸಮ ಸಮಾಜ ನಿರ್ಮಾಣ ಸಾಧ್ಯ. ಬಸವಾದಿ ಶರಣರು, ಬುದ್ದ ಕೂಡ ಸಮ ಸಮಾಜದ ಬಗ್ಗೆ ಹೇಳಿದ್ದಾರೆ. ಕೇವಲ ಭಾಷಣಳಿಂದ ಸಮ ಸಮಾಜದ ಆಶಯ ಈಡೇರಲ್ಲ. ಈ ಕಾರಣಕ್ಕೇ ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ಹಲವು ಭಾಗ್ಯಗಳನ್ನು ಜಾರಿ ಮಾಡಿದೆ” ಎನ್ನುತ್ತಾ ತಮ್ಮ ಬಾಲ್ಯದ ಬಡತನದ ದಿನಗಳನ್ನು ನೆನೆದರು.

“ಹಬ್ಬ ಬಂದಾಗ ಮಾತ್ರ ನಮ್ಮ ಮನೆಯಲ್ಲಿ ಅನ್ನ ಮಾಡ್ತಿದ್ರು. ಅಕ್ಕ ಪಕ್ಕದವರ ಮನೆಯಲ್ಲಿ ಯಾರಿಗಾದ್ರೂ ಹುಷಾರು ತಪ್ಪಿದರೆ ಅವರಿಗೆ ಅನ್ನ ಮಾಡ್ತಿದ್ರು. ಅವರ ಮನೆ ಬಾಗಿಲಲ್ಲಿ ಒಂದು ತುತ್ತು ಅನ್ನಕ್ಕಾಗಿ ಕಾದು ನಿಂತಿದ್ದ ದಿನಗಳು ಇದ್ದವು‌. ಹೀಗೆ ಅನ್ನಕ್ಕೆ ಯಾರೂ ಕಾದು ನಿಲ್ಲಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದದ್ದು” ಎಂದು ವಿವರಿಸಿದರು.

“ಜಾತಿ ಕಾರಣಕ್ಕಾಗಿ ಸಮಾಜದಲ್ಲಿ ಆರ್ಥಿಕ‌ ಅಸಮಾನತೆ ಸೃಷ್ಟಿ ಆಯಿತು. ಆದ್ದರಿಂದ ಎಲ್ಲರಿಗೂ ಆರ್ಥಿಕ ಶಕ್ತಿ ಕೊಡುವ ಕಾರಣಕ್ಕೆ 2013-18 ರ ವರೆಗೆ ಹಲವು ಕಾರ್ಯಕ್ರಮಗಳನ್ನು ಜಾರಿ ಮಾಡಿದೆವು. ಹಾಗೆಯೇ ಎರಡನೇ ಬಾರಿ ಮುಖ್ಯಮಂತ್ರಿ ಆದಾಗಲೂ ಗ್ಯಾರಂಟಿಗಳ ಮೂಲಕ ಆರ್ಥಿಕ ಶಕ್ತಿ ನೀಡಿದೆವು” ಎಂದರು.

“ನಮ್ಮ ಭಾಗ್ಯಗಳನ್ನು, ಗ್ಯಾರಂಟಿಗಳನ್ನು ವಿರೋಧಿಗಳು ಆಡಿಕೊಂಡರು. ಈಗಲೂ ಅಪ ಪ್ರಚಾರ ಮಾಡುತ್ತಿದ್ದಾರೆ. ಆದರೆ ನಾನು ಹೋದಲ್ಲಿ ಬಂದಲ್ಲಿ ಗ್ಯಾರಂಟಿಗಳ ಫಲಾನುಭವಿಗಳು ಕಾಂಗ್ರೆಸ್ ಸರ್ಕಾರಕ್ಕೆ ಧನ್ಯತೆ ಅರ್ಪಿಸುತ್ತಿದ್ದಾರೆ” ಎಂದು ಉಚಿತ ಯೋಜನೆಗಳ ಫಲಾನುಭವಿಗಳು ಗೃಹಲಕ್ಷ್ಮಿ ಹಣದಲ್ಲಿ ಮಾಡಿದ ಸಾಧನೆಗಳನ್ನು ವಿವರಿಸಿದರು.

“ನರೇಗಾ ಮತ್ತು ಅನ್ನಭಾಗ್ಯ ಯೋಜನೆಗಳು ಕೊರೋನಾ ಸಂದರ್ಭದಲ್ಲಿ ಬಡವರನ್ನು, ಕೆಳ ಮಧ್ಯಮ ವರ್ಗದವರನ್ನು ಬದುಕಿಸಿತು. ಹೀಗಾಗಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹೆಚ್ಚೆಚ್ಚು ಮಾತಾಡಬೇಕು. ಅನ್ನಭಾಗ್ಯದ ಮೇಲೆ “ಅನ್ನ” ಅಂತಲೇ ಸಿನಿಮಾ ಬಂದಿದೆ. ನಾನೂ ಸಿನಿಮಾ ನೋಡಿದೆ” ಎಂದರು.

ಹಸಿದವರ ಹೊಟ್ಟೆಗೆ ಅನ್ನ ಕೊಡುವುದೇ ದೇವರಿಗೆ ಕೊಡುವ ಕಾಣಿಕೆ

“ಗ್ಯಾರಂಟಿ ಯೋಜನೆಗಳು ಪ್ರಜಾತಂತ್ರವನ್ನು ಗಟ್ಟಿಗೊಳಿಸಿವೆ. ಡಾ.ಬಿ.ಆರ್.ಅಂಬೇಡ್ಕರ್ ಆಶಯವನ್ನು ಘೋಷಿಸದೇ ಈಡೇರಿಸಿವೆ. ಬಡವರಿಗೆ ಈ ಗ್ಯಾರಂಟಿಗಳು ಸಾಮಾಜಿಕವಾಗಿ ಚಾಲನಾ ಸಾಮರ್ಥ್ಯವನ್ನು ನೀಡಿವೆ. ಸಿದ್ದರಾಮಯ್ಯ ಅವರು ಸೂಕ್ಷ್ಮ ಮನಸ್ಸಿನ ನಾಯಕರು. ಇವರಿಂದ ಮಾತ್ರ ಸಮಾಜಕ್ಕೆ ಈ ಚಾಲನಾ ಸಾಮರ್ಥ್ಯ ನೀಡಲು ಸಾಧ್ಯ. ಹಸಿದವರ ಹೊಟ್ಟೆಗೆ ಅನ್ನ ಕೊಡುವುದೇ ದೇವರಿಗೆ ಕೊಡುವ ಕಾಣಿಕೆ. ಇದನ್ನು ನಾವು ಪ್ರಾಮಾಣಿಕವಾಗಿ ಒಪ್ಪಿ, ಸಾರ್ವಜನಿಕವಾಗಿ ಹೇಳಬೇಕಿದೆ” ಎಂದು ಪ್ರಾಧ್ಯಾಪಕ ಕೆ ವೈ ನಾರಾಯಣಸ್ವಾಮಿ ಹೇಳಿದರು,

“ಉಚಿತ ಯೋಜನೆಗಳನ್ನು ಜಾರಿ ತಂದ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ಮಾನವ ಅಭಿವೃದ್ಧಿ ಸೂಚ್ಯಂಕಗಳಲ್ಲಿ ಮೊದಲ ಸ್ಥಾನಗಳಲ್ಲಿ ಇದ್ದು ಜಿಡಿಪಿ ಬೆಳವಣಿಗೆ ಉತ್ತಮವಾಗಿವೆ. ಉಚಿತ ಯೋಜನೆಗಳನ್ನು ಜಾರಿ ಮಾಡದ ಉತ್ತರಪ್ರದೇಶ, ಬಿಹಾರ, ಮಧ್ಯಪ್ರದೇಶ ರಾಜ್ಯಗಳು ಮಾನವ ಅಭಿವೃದ್ಧಿ ಸೂಚ್ಯಂಕಗಳಲ್ಲಿ ಅತ್ಯಂತ ಕುಸಿದು, ಜಿಡಿಪಿ ಕೂಡ ಕುಸಿದಿದೆ” ಎಂದು ಧಾರವಾಡದ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕ ಪ್ರೊ.ಎಂ ಚಂದ್ರ ಪೂಜಾರಿ ಅಭಿಪ್ರಯಾಪಟ್ಟರು.

ಕೊರೊನಾ ಕಾಲದ ಬಿಕ್ಕಟ್ಟುಗಳಿಗೆ ಗ್ಯಾರಂಟಿಗಳು ಪರಿಹಾರ: ಪುರುಷೋತ್ತಮ ಬಿಳಿಮಲೆ

“2017 ರಿಂದ ಭಾರತದ ಆರ್ಥಿಕ ಪರಿಸ್ಥಿತಿ ಕುಸಿಯುತ್ತಾ, ಕೊರೋನಾ ಕಾಲದಲ್ಲಿ ಇನ್ನಷ್ಟು ನೆಲಕಚ್ಚಿತು. ನಿರುದ್ಯೋಗ, ಬಡತನ ಇಮ್ಮಡಿಯಾಗಿ ಜಿಡಿಪಿ ಕುಸಿದಿತ್ತು. ಇಂಥಾ ಭಯಾನಕ ಆರ್ಥಿಕ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಐದು ಗ್ಯಾರಂಟಿಗಳು ರಾಜ್ಯ ಸ್ಮಶಾನ ಆಗದಂತೆ ತಡೆದಿದೆ. ಕೊರೊನಾ ಕಾಲದ ಬಿಕ್ಕಟ್ಟುಗಳಿಗೆ ಗ್ಯಾರಂಟಿಗಳು ಪರಿಹಾರವಾಯಿತು. ಇದನ್ನು ನಾವೆಲ್ಲಾ ಧೈರ್ಯದಿಂದ ಹೇಳಬೇಕು. ದೇಶಕ್ಕೆ ಮಾದರಿಯಾದ ಈ ಯೋಜನೆಗಳು ಜನಕಲ್ಯಾಣಕ್ಕೆ ಹೇಗೆ ಸಹಕರಿಸಿತು ಎಂಬುದನ್ನು ಹೇಳಬೇಕು” ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಹೇಳಿದರು.

ಡಾ.ಡಿ.ಶ್ರೀನಿವಾಸ ಮಣಗಳ್ಳಿ ಅವರ ಸಂಪಾದನಾ ಕೃತಿ ಬಿಡುಗಡೆಯ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪುರುಷೋತ್ತಮ ಬಿಳಿಮಲೆ, ವಿಧಾನ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ, ನಾಟಕಕಾರರಾದ ಕೆ.ವೈ.ನಾರಾಯಣಸ್ವಾಮಿ, ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾದ ಪ್ರೊ.ಎಂ.ಚಂದ್ರ ಪೂಜಾರಿ, ಕುಲಪತಿಗಳಾದ ಪ್ರೊ.ಎನ್.ಕೆ.ಲೋಕನಾಥ್, ಸಾಮಾಜಿಕ ಕಾರ್ಯಕರ್ತರಾದ ಅಹಿಂದ ಜವರಪ್ಪ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...