ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಮತ್ತು ಕೊಲೆಗಳು ಹೆಚ್ಚಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಜನತಾ ದಳ (ಜೆಡಿಎಸ್) “ಹಾದಿಬೀದಿಯಲ್ಲಿ ಕೊಲೆಯಾಗುತ್ತಿದೆ, ರಾಜ್ಯವು ಅತ್ಯಾಚಾರಿಗಳ ಆಡುಂಬೋಲವಾಗಿದೆ” ಎಂದು ಹೇಳಿದೆ.
ರಾಜ್ಯದಲ್ಲಿ ನಾಲ್ಕು ತಿಂಗಳ ಅವಧಿಯಲ್ಲಿ ಸುಮಾರು 430 ಕೊಲೆಗಳು ನಡೆದಿದೆ ಮತ್ತು 198 ಅತ್ಯಾಚಾರ ಪ್ರಕರಣಗಳು ದಾಖಲಾಗಿದೆ ಎಂಬ ವರದಿಯನ್ನು ಉಲ್ಲೇಖಿಸಿ ಎಕ್ಸ್ ಪೋಸ್ಟ್ ಮಾಡಿರುವ ಜೆಡಿಎಸ್ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡಂಬೋಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ!! 1/2#ಜನರಿಗಿಲ್ಲ_ನೆಮ್ಮದಿಯ_ಗ್ಯಾರಂಟಿ pic.twitter.com/iu3tqqEYZ3
— Janata Dal Secular (@JanataDal_S) May 18, 2024
“ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡುಂಬೋಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ” ಎಂದು ಜೆಡಿಎಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ಇದನ್ನು ಓದಿದ್ದೀರಾ? ಲೈಂಗಿಕ ದೌರ್ಜನ್ಯ ಪ್ರಕರಣ | ಮತ್ತೆ ವಿಮಾನ ಟಿಕೆಟ್ ರದ್ದು; ಪ್ರಜ್ವಲ್ ರೇವಣ್ಣರಿಂದ ಕಣ್ಣಾಮುಚ್ಚಾಲೆ ಆಟ
“ರಾಜ್ಯ ಗೃಹ ಇಲಾಖೆ ಎನ್ನುವುದು ಕೆಲಸ ಮಾಡುತ್ತಿದೆಯಾ? ಅಥವಾ ನಿದ್ದೆ ಮಾಡುತ್ತಿದೆಯಾ? ದಯಮಾಡಿ ಹೇಳುವಿರಾ ಪರಮೇಶ್ವರ ಅವರೇ” ಎಂದು ಜೆಡಿಎಸ್ ಪ್ರಶ್ನಿಸಿದೆ.
ರಾಜ್ಯದಲ್ಲಿ 2024ರ ಜನವರಿ ತಿಂಗಳಿನಿಂದ ಏಪ್ರಿಲ್‌ವರೆಗಿನ ನಾಲ್ಕು ತಿಂಗಳ ಅವಧಿಯಲ್ಲಿ 430 ಕೊಲೆಗಳು ಮತ್ತು 198 ಅತ್ಯಾಚಾರ ಪ್ರಕರಣಗಳು ದಾಖಲಾಗಿದೆ ಎಂದು ವರದಿಯಾಗಿದೆ.
2022ರಲ್ಲಿ ಒಟ್ಟಾಗಿ 537, 2023ರಲ್ಲಿ 609 ಅತ್ಯಾಚಾರ ಪ್ರಕರಣಗಳು ದಾಖಲಾಗಿದೆ. 2024ರ ನಾಲ್ಕು ತಿಂಗಳ ಅವಧಿಯಲ್ಲೇ 198 ಅತ್ಯಾಚಾರ ಪ್ರಕರಣಗಳು ದಾಖಲಾಗಿದೆ. ಏಪ್ರಿಲ್‌ವರೆಗೆ 2327 ಮಹಿಳೆಯರ ಮೇಲೆ ದೌರ್ಜನ್ಯದ ಪ್ರಕರಣ ದಾಖಲಾಗಿದೆ.