ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಕ್ಕೆ ಪರೋಕ್ಷ ಚಾಲನೆ ನೀಡಿದ ರಾಜ್ಯ ಸರ್ಕಾರ

Date:

  • ನಿಗಮ ಮಂಡಳಿ ಅಧ್ಯಕ್ಷ/ಸದಸ್ಯರ ನಾಮ ನಿರ್ದೇಶನ ರದ್ದುಗೊಳಿಸಲು ಸೂಚನೆ
  • ಮೇ 22ರಿಂದ ಅನ್ವಯಿಸುವಂತೆ ಆದೇಶ ಹೊರಡಿಸಿದ ಮುಖ್ಯ ಕಾರ್ಯದರ್ಶಿ

ಸಚಿವ ಸಂಪುಟ ವಿಸ್ತರಣೆ ಬಳಿಕ ಎದುರಾಗಲಿರುವ ಅಸಮಾಧಾನ ಶಮನಕ್ಕೆ ರಾಜ್ಯ ಸರ್ಕಾರ ಉಪಾಯ ರೂಪಿಸಿದ್ದು ಅದಕ್ಕಾಗಿ ನಿಗಮ ಮಂಡಳಿಗಳಿಗೆ ಅಧ್ಯಕ್ಷರು, ಸದಸ್ಯರುಗಳ ನೇಮಕಕ್ಕೆ ಮುಂದಾಗಿದೆ.

ಈ ಸಲುವಾಗಿ ಆದೇಶವೊಂದನ್ನು ಹೊರಡಿಸಿರುವ ಸರ್ಕಾರ ಮೇ 22ರಿಂದ ಅನ್ವಯವಾಗುವಂತೆ ನಿಗಮ ಮಂಡಳಿಗಳಿಗೆ ಆಗಿದ್ದ ನಾಮನಿರ್ದೇಶನವನ್ನು ರದ್ದು ಪಡಿಸುವಂತೆ ತಿಳಿಸಿದೆ.

ರಾಜ್ಯ ಸರ್ಕಾರ ಇದೇ ತಿಂಗಳ 28ರಿಂದ ಪೂರ್ಣ ಪ್ರಮಾಣದ ಸದಸ್ಯರೊಂದಿಗೆ ಕಾರ್ಯಾರಂಭ ಮಾಡಬೇಕಿದೆ. ಹೀಗಾಗಿ ಶೀಘ್ರದಲ್ಲೇ ಮಂತ್ರಿ ಮಂಡಲ ವಿಸ್ತರಣೆಗೂ ಸರ್ಕಾರ ಮುಂದಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ವೇಳೆ ಸಚಿವ ಸ್ಥಾನ ವಂಚಿತರು ಬಂಡಾಯ ಏಳುವ ಸಾಧ್ಯತೆ ಇರುವುದರಿಂದ, ಸಚಿವ ಸ್ಥಾನಕ್ಕೆ ಪರಿಗಣಿಸಲಾಗದಿರುವ ಶಾಸಕರಿಗೆ ನಿಗಮಮಂಡಳಿಗಳಲ್ಲಿ ಅವಕಾಶ ಕಲ್ಪಿಸುವ ಮೂಲಕ ಅಸಮಾಧಾನ ಶಮನಕ್ಕೆ ರಾಜ್ಯ ಸರ್ಕಾರ ಈ ಮಾರ್ಗ ಕಂಡುಕೊಂಡಿದೆ.ನಾಮನಿರ್ದೇಶನ ರದ್ದು

ಈ ಸುದ್ದಿ ಓದಿದ್ದೀರಾ?: ಸಿಎಂ ಸಿದ್ದರಾಮಯ್ಯಗೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಆಪ್ತ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರ ನೇಮಕ

ಮೇ 22ರಿಂದ ಆರಂಭವಾಗಿರುವ 16ನೇ ವಿಧಾನಸಭೆ ಕಲಾಪದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಜನಪ್ರತಿನಿಧಿಗಳು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿ ಸರ್ಕಾರದ ಭಾಗವಾಗಲು ಕಾದು ನಿಂತಿದ್ದಾರೆ.

ಈ ಬೆಳವಣಿಗೆಗೆ ಪೂರಕವಾಗುವಂತೆ ಸರ್ಕಾರ ನಾಮನಿರ್ದೇಶನ ರದ್ದು ಮಾಡಿ ಹೊಸಬರಿಗೆ ಅವಕಾಶ ಮಾಡಿಕೊಡಲು ಸಿದ್ದತೆ ಆರಂಭಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಮೋದಿಯವರ ‘ಚಾರ್‌ ಸವ್ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು...

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...