ಎಲ್ಲ ವಿಚಾರಗಳಲ್ಲೂ ರೈತರ ಹಿತಕಾಯಲು ರಾಜ್ಯ ಸರ್ಕಾರ ಬದ್ದ: ಕೃಷಿ ಸಚಿವ ಚಲುವರಾಯಸ್ವಾಮಿ

Date:

Advertisements
  • ಮಂಡ್ಯದಲ್ಲಿ ಸಿರಿಧಾನ್ಯ ಮೇಳ, ವಸ್ತು ಪ್ರದರ್ಶನ ಹಾಗೂ ಬೆಲ್ಲದ ಪರಿಷೆ ಉದ್ಘಾಟನೆ
  • ಎತ್ತಿನ ಗಾಡಿಯಲ್ಲಿ ಬಂದ ಸಚಿವ, ನಿರ್ಮಲಾನಂದ ಸ್ವಾಮೀಜಿ

ಕಾವೇರಿ ನದಿ ನೀರಿನ ಹಂಚಿಕೆ ಸಂಕಷ್ಟ ಸೇರಿದಂತೆ ಎಲ್ಲ ವಿಚಾರಗಳಲ್ಲೂ ರಾಜ್ಯದ ರೈತರ ಹಿತ ಕಾಯಲು ಸರ್ಕಾರ ಬದ್ದವಾಗಿದೆ ಎಂದು‌ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಭಾರತ ಸರ್ಕಾರದ ಆಹಾರ ಸಂಸ್ಕರಣಾ ಮಂತ್ರಾಲಯ , ಕರ್ನಾಟಕ ರಾಜ್ಯ ಕೃಷಿ ಇಲಾಖೆ, ಜಲಾನಯನ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ, ಕರ್ನಾಟಕ ಕೃಷಿ ವಾಣಿಜ್ಯ ಅಭಿವೃದ್ಧಿ ನಿಗಮ, ಮಂಡ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಭಾಗಿತ್ವದಲ್ಲಿ ಮಂಡ್ಯದ ಡಾ.ರಾಜ್ ಕುಮಾರ್ ಬಡಾವಣೆ ಮೈದಾನದಲ್ಲಿ ಏರ್ಪಡಿಸಿದ್ದ ಸಿರಿಧಾನ್ಯ ಮೇಳ, ವಸ್ತು ಪ್ರದರ್ಶನ ಹಾಗೂ ಬೆಲ್ಲದ ಪರಿಷೆ ಉದ್ಘಾಟಿಸಿ ಅವರು ಮಾತನಾಡಿದರು.

mandya 1

ಇಂತಹ ಪರಿಸ್ಥಿತಿಯಲ್ಲಿ ಕಾವೇರಿ ನದಿ ನೀರಿನ‌ ಹಂಚಿಕೆಗೆ ಸಂಕಷ್ಟ ಸೂತ್ರ ಬೇಕು. ರಾಜ್ಯದ ರೈತರನ್ನು ಉಳಿಸುವುದು ನಮ್ಮ ಜವಾಬ್ದಾರಿ ಅದನ್ನು ಸರಿಯಾಗಿಯೇ ನಿರ್ವಹಿಸುತ್ತೇವೆ ಎಂದು ಸಚಿವರು ಭರವಸೆ ನೀಡಿದರು.

Advertisements

ಕಡಿಮೆ ನೀರಿನ ಬಳಕೆ ಮೂಲಕ ಕೃಷಿ ಮಾಡುವುದು, ಅಂತರ್ಜಲ ಹೆಚ್ಚಿಸುವ ಪ್ರಯತ್ನಗಳನ್ನೂ ನಾವು ಮಾಡಬೇಕಿದೆ. ಕೃಷಿ ಹೊಂಡ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದೆ. ರೈತರ ಬದುಕು ‌ಹಸನಾಗಬೇಕೆಂಬುದು ನಮ್ಮ ಆಶಯ. ಅದಕ್ಕೆ ಪೂರಕವಾದ ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದು ಚಲುವರಾಯಸ್ವಾಮಿ ಹೇಳಿದರು.

ಇಂದು ಸಿರಿ ಧಾನ್ಯದ ಬಗ್ಗೆ ವಿಶ್ವದಲ್ಲೇ ವ್ಯಾಪಕ ಚರ್ಚೆ ನಡೆಯುತ್ತಿದೆ ಹಿಂದೊಮ್ಮೆ ಬಡವರ ಆಹಾರವಾಗಿದ್ದ ಸಿರಿಧಾನ್ಯ ಇಂದು ಸಿರಿವಂತರ ಆಯ್ಕೆಯಾಗುತ್ತಿದೆ. ಪ್ರಪಂಚದ ಅತ್ಯಂತ ಅವಶ್ಯಕ ಧಾನ್ಯ ವಾಗಿದೆ ಎಂದು ಚಲುವರಾಯಸ್ವಾಮಿ ಹೇಳಿದರು.

ಈ ವರ್ಷ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಳು ಸಿರಿಧಾನ್ಯ ಬೆಳೆಗಳಿಗೆ ವಿವಿಧ ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಿವೆ. ಕೃಷಿಕರು ಈ‌ ಯೋಜನೆಗಳ ಲಾಭ ಪಡೆಯಬೇಕು.
ಸಿರಿಧಾನ್ಯ ಗಳ ಉತ್ಪನ್ನಗಳ ಮಾಲ್ಯ ವರ್ಧನೆ, ಬ್ರಾಂಡಿಂಗ್ ‌ಮಾಡಬೇಕು. ಆ ಮೂಲಕ‌ ಆರ್ಥಿಕ ಪ್ರಗತಿ ಸಾಧಿಸಬೇಕು ಎಂದು ಸಚಿವರು ಕರೆ ನೀಡಿದರು.

mandya 2

ಸುಧಾರಿತ ಕೃಷಿ ಹಾಗೂ ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಡಾ .ನಿರ್ಮಲಾನಂದ ನಾಥ ಸ್ವಾಮೀಜಿ ಸಲಹೆ ನೀಡಿದರು.

ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ಪಿ ರವಿ ಕುಮಾರ್ ಅವರು ಕಾರ್ಯಕ್ರಮದಲ್ಲಿ ಮಾತನಾಡಿದರು.

ಇದೇ ವೇಳೆ ಪ್ರಗತಿರ ರೈತ ದಂಪತಿಗಳನ್ನು ಸನ್ಮಾನಿಸಲಾಯಿತು.
ಪಿಎಂಎಫ್‌ಎಂಇ(PMFME) ಉತ್ಪನ್ನಗಳ ಬ್ರಾಂಡ್ ಬಿಡುಗಡೆ ,ಇದೇ ಯೋಜನೆಯ ಫಲಾನುಭವಿಗಳಿಗೆ ಸಾಲ ಮಂಜೂರಾತಿ ಪತ್ರ ವಿತರಣೆ, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ‌ ವಿತರಣೆ ನಡೆಯಿತು.

ಗಮನ ಸೆಳೆದ ವಸ್ತುಪ್ರದರ್ಶನ
ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಕೃಷಿ ಯಂತ್ರಗಳು, ಕೃಷಿ ಉತ್ಪನ್ನಗಳು ,ಸಿರಿಧಾನ್ಯಗಳಿಂದ ಮಾಡಿದ್ದ ತಿಂಡಿ-ತಿನಿಸುಗಳ ಮಾರಾಟ ಹಾಗೂ ಪ್ರದರ್ಶನವು ನೆರೆದಿದ್ದವರ ಗಮನ ಸೆಳೆದವು.

ಮಂಡ್ಯ 3

ಎತ್ತಿನ ಗಾಡಿಯಲ್ಲಿ ಬಂದ ಸಚಿವರು, ಸ್ವಾಮೀಜಿ

ಕೃಷಿ ಸಂಸ್ಕೃತಿಗೆ ಹೆಸರುವಾಸಿಯಾಗಿರುವ ಮಂಡ್ಯದಲ್ಲಿ ಏರ್ಪಡಿಸಿರುವ ಸಿರಿಧಾನ್ಯ ಮೇಳ ಹಲವು ವಿಭಿನ್ನತೆಯಿಂದ ಗಮನ ಸೆಳೆಯಿತು. ಸಚಿವರು,ಸ್ವಾಮೀಜಿ, ಗಣ್ಯರಿಗೆ ಪೂರ್ಣಕುಂಭ ಸ್ವಾಗತದ ಜೊತೆಗೆ ಎತ್ತಿನ ಬಂಡಿಯಲ್ಲಿ ಕೂರಿಸಿ ಮೆರವಣಿಗೆಯ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ಕರೆತರಲಾಯಿತು.

ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ಮಧು ಜಿ. ಮಾದೇಗೌಡ, ದಿನೇಶ್ ಗೂಳಿಗೌಡ, ಕೆ.ಎಂ ಉದಯ್ ಸೇರಿದಂತೆ ಹಲವಾರು ಗಣ್ಯರು ಕಾರ್ಯಲ್ರಮದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X