ಪ್ರಸ್ತುತ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಕುರಿತು ದರ ನಿಗದಿ ಸಮಿತಿ ರಚಿಸಲು ಮತ್ತು ಇದರ ಸಂಪೂರ್ಣ ಪ್ರಕ್ರಿಯೆಯನ್ನು ಪ್ರಾರಂಭಿಸಲು ಬಿಎಮ್‌ಆರ್‌ಸಿಎಲ್‌ಗೆ ರಾಜ್ಯ ಸರ್ಕಾರವೇ ಸಲಹೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.
ದೆಹಲಿ ಮೆಟ್ರೋವನ್ನು ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಮೊದಲ ಹಂತದ ಪ್ರಯಾಣದರವನ್ನು ಆಯಾ ರಾಜ್ಯಗಳ ಮೆಟ್ರೊ ನಿಗಮಗಳೇ ನಿಗದಿ ಪಡಿಸಿತ್ತು. ಈಗ ನಮ್ಮ ಮೆಟ್ರೋ ಪ್ರಯಾಣ ದರವನ್ನು ಕೇಂದ್ರ ಸರ್ಕಾರ ನೇಮಿಸುವ ಸಮಿತಿ ನಿಗದಿಪಡಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಅವರ ಸ್ಪಷ್ಟನೆ ಎಕ್ಸ್ ತಾಣದಲ್ಲಿ ತಿರುಗೇಟು ನೀಡಿದ್ದಾರೆ.
“2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಪ್ರತಿಯೊಂದು ಇಲಾಖೆಗಳಲ್ಲಿಯೂ ಬೆಲೆ ಏರಿಕೆ ಸಾಮಾನ್ಯವಾಗಿದೆ. ಬಿಎಂಟಿಸಿ ಪ್ರಯಾಣ ದರ, ವಿದ್ಯುತ್ ಬಿಲ್, ಆಸ್ತಿ ತೆರಿಗೆ, ಅಬಕಾರಿ ಸುಂಕ ಹೀಗೆ ಪ್ರತಿಯೊಂದರ ಬೆಲೆ ಏರಿಕೆಯಾಗಿದೆ. ಸಮಿತಿಯಲ್ಲಿನ ರಾಜ್ಯ ಪ್ರತಿನಿಧಿಗಳ ಪ್ರಯಾಣದ ದರ ಏರಿಕೆಯ ಒತ್ತಾಯದ ಮೇರೆಗೆ ಮೆಟ್ರೋ ಪರಿಷ್ಕೃತ ದರದ ವರದಿಯನ್ನು ಬಿಡುಗಡೆ ಮಾಡಲಾಗಿದೆ” ಎಂದಿದ್ದಾರೆ.
ಈ ಸುದ್ದಿ ಓದಿದ್ದೀರಾ? ‘ನಮ್ಮ ಮೆಟ್ರೋ’ ಪ್ರಯಾಣ ದರ ಏರಿಕೆ | ಕೇಂದ್ರ ಸರ್ಕಾರದ ಸಮಿತಿಯಿಂದಲೇ ದರ ನಿಗದಿ: ಸಿಎಂ ಸ್ಪಷ್ಟನೆ
“ಪ್ರಯಾಣದ ದರ ಏರಿಕೆಯಿಂದ ಬೆಂಗಳೂರಿನ ಜನತೆಗೆ ಉಂಟಾಗುವ ತೊಂದರೆಗಳ ಅರಿತು ಬಿಜೆಪಿ ದರ ಏರಿಕೆಯನ್ನು ಮೊದಲಿನಿಂದಲೂ ವಿರೋಧಿಸುತ್ತಲೇ ಬಂದಿದೆ. ಮುಖ್ಯಮಂತ್ರಿಗಳಿಗೆ ಈ ಸಮಸ್ಯೆ ಬಗ್ಗೆ ನಿಜವಾದ ಕಾಳಜಿ ಇದ್ದರೆ, ಪರಿಷ್ಕೃತ ದರಗಳ ಏರಿಕೆಯನ್ನು ಮರು ಪರಿಶೀಲಿಸಿ ನ್ಯಾಯಸಮ್ಮತ ದರ ನಿಗದಿಪಡಿಸಲು ನೆರವಾಗಬೇಕು” ಎಂದು ಆಗ್ರಹಿಸಿದ್ದಾರೆ.
“ಬೆಂಗಳೂರಿನ ಸಂಸದರು ಹಾಗೂ ದರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತೊಡಗಿರುವ ಕೇಂದ್ರ ಸರ್ಕಾರದ ಅಧಿಕಾರಿಗಳು ಬೆಂಗಳೂರಿನ ಜನರ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯದಲ್ಲಿ ತಮಗೆ ಸಲಹೆ ಮತ್ತು ಸಹಕಾರ ನೀಡಲು ಸಿದ್ದರಿದ್ದಾರೆ” ಎಂದು ಹೇಳಿದ್ದಾರೆ.
2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಪ್ರತಿಯೊಂದು ಇಲಾಖೆಗಳಲ್ಲಿಯೂ ಬೆಲೆ ಏರಿಕೆ ಸಾಮಾನ್ಯವಾಗಿದೆ. ಬಿಎಂಟಿಸಿ ಪ್ರಯಾಣ ದರ, ವಿದ್ಯುತ್ ಬಿಲ್, ಆಸ್ತಿ ತೆರಿಗೆ, ಅಬಕಾರಿ ಸುಂಕ ಹೀಗೆ ಪ್ರತಿಯೊಂದರ ಬೆಲೆ ಏರಿಕೆಯಾಗಿದೆ.
— Tejasvi Surya (@Tejasvi_Surya) February 11, 2025
ಪ್ರಸ್ತುತ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಕುರಿತು ದರ ನಿಗದಿ ಸಮಿತಿ ರಚಿಸಲು… https://t.co/GjL9nRBBvQ
ಅದನ್ನು ಕೇಂದ್ರ ಕಡಿಮೆ ಮಾಡಲು ತಿಳಿಸು.
ಜಾಸ್ತಿ ಬೇಗ ಮಾಡುತ್ತಾರೆ ಕಡಿಮೆ ಮಾಡಲು ಯಾರು ಹೇಳಿದರು ಮೋದಿ ಕೇಳಲ್ಲ.
ನಮ್ಮ ದೇಶದ ಅಣೆಬರಹ ಈ ಸಂಘಗಳಿಂದ