ಕಾಂಗ್ರೆಸ್ಸಿಗರ ಮಿಡ್ ನೈಟ್ ಮೀಟಿಂಗ್ ನಡುವೆ ಬಡವಾಗುತ್ತಿದೆ ರಾಜ್ಯ: ವಿಜಯೇಂದ್ರ ಆಕ್ರೋಶ

Date:

Advertisements

ಕಾಂಗ್ರೆಸ್ಸಿಗರ ಮಿಡ್ ನೈಟ್ ಮೀಟಿಂಗ್ ನಡುವೆ ಕರ್ನಾಟಕ ಬಡವಾಗುತ್ತಿದೆ, ಜನರು ಪರಿತಪಿಸುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದರು.

ಬೆಂಗಳೂರು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಕಾನೂನು ಪ್ರಕೋಷ್ಠದ ವಿಶೇಷ ಸಭೆ ಉದ್ಘಾಟಿಸಿ ಮಾತನಾಡಿದ ಅವರು, “ಸಿದ್ದರಾಮಯ್ಯನವರು ಹೊರಗಡೆಯಿಂದ ಬಂದವರು ಎಂದು ಆಡಳಿತ ಪಕ್ಷದಲ್ಲಿ ಕೆಲವರಿಗೆ ಅನಿಸಿದೆ. ಒಂದು ಬಾರಿ 5 ವರ್ಷ ಕಾಲ ಮುಖ್ಯಮಂತ್ರಿಯಾಗಿದ್ದಾರೆ. ಎರಡನೇ ಬಾರಿಗೆ 2 ವರ್ಷ ಸಿಎಂ ಆಗಿದ್ದು, ಅವರೇ ಅಧಿಕಾರ ಬಿಟ್ಟುಕೊಡಬೇಕೆಂಬ ಚರ್ಚೆ ಈಗ ಕಾಂಗ್ರೆಸ್ಸಿನಲ್ಲಿ ಆರಂಭವಾಗಿದೆ” ಎಂದರು.

“ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈಚೆಗೆ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಬಹಳ ಮುಕ್ತವಾಗಿ ಮಾತನಾಡಿದ್ದರು. 25 ವರ್ಷಗಳ ಹಿಂದೆ ಅಂದಿನ ಮುಖ್ಯಮಂತ್ರಿಗಳು ಡಿ.ಕೆ.ಶಿವಕುಮಾರ್ ಅವರನ್ನು ಮಂತ್ರಿಮಂಡಲದಲ್ಲಿ ತೆಗೆದುಕೊಂಡಿರಲಿಲ್ಲ. ಆಗ ಅವರ ಗುರುಗಳು ‘ಅಧಿಕಾರ ಸಿಗಲಿಲ್ಲ ಅಂದ್ರೆ ಅಧಿಕಾರವನ್ನು ಒದ್ದು ಕಿತ್ಕೋಬೇಕು’ ಎಂದಿದ್ದರಂತೆ. ಆಗ ಡಿ.ಕೆ.ಶಿವಕುಮಾರ್ ಅವರು ಅಧಿಕಾರವನ್ನು ಒದ್ದು ಕಿತ್ಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. 25 ವರ್ಷಗಳ ನಂತರ ಸಿದ್ದರಾಮಯ್ಯನವರು ಸಿಎಂ ಆಗಿ 2 ವರ್ಷ ಪೂರೈಸಿದ್ದು, ಅಧಿಕಾರ ಬಿಟ್ಟು ಕೊಡುವರೇ ಇಲ್ಲವೇ ಎಂಬ ಅನುಮಾನ ಅವರಿಗೆ ಕಾಡುತ್ತಿದೆ. ಆದ್ದರಿಂದ ಅವರು ಒದ್ದು ಕಿತ್ಕೊಳ್ಳುವ ವಿಷಯವನ್ನು ನೆನಪು ಮಾಡಿಕೊಂಡಿದ್ದಾರೆ” ಎಂದು ಹೇಳಿದರು.

Advertisements

“ಡಿ.ಕೆ.ಶಿವಕುಮಾರ್ ಎಂದರೆ ಹಠವಾದಿಗಳು; ಅಧಿಕಾರವನ್ನು ಒದ್ದು ಕಿತ್ಕೊಳ್ಳುವ ವಿಷಯದಲ್ಲಿ ನಿಸ್ಸೀಮರು. ಹಾಗಾಗಿ ಆ ಪ್ರಕ್ರಿಯೆಗೆ ಅವರು ಚಾಲನೆ ನೀಡಿದ್ದಾರೆ. ಒಂದು ಕಡೆ ಸಿದ್ದರಾಮಯ್ಯನವರು ಅವರ ಅವಧಿ ಪೂರ್ಣವಾದರೂ ಬಿಟ್ಟು ಕೊಡಲು ಮನಸ್ಸು ಬರುತ್ತಿಲ್ಲ. ಸಚಿವರ ನೇತೃತ್ವದಲ್ಲಿ ಡಿಕೆ ಶಿವಕುಮಾರ್ ಇಲ್ಲದ ವೇಳೆ ಡಿನ್ನರ್ ಮೀಟಿಂಗ್ ಅವರು ಪ್ರಾರಂಭಿಸಿದ್ದಾರೆ. ಇನ್ನೊಂದೆಡೆ ವಿಳಂಬವಾಗಿ ಮಲಗುವ ಡಿ.ಕೆ.ಶಿವಕುಮಾರ್ ಲೇಟ್ ನೈಟ್ ಮೀಟಿಂಗ್ ಶುರುಮಾಡಿದ್ದಾರೆ” ಎಂದರು.

“ಡಿನ್ನರ್ ಮೀಟಿಂಗ್, ಮಿಡ್‍ನೈಟ್ ಮೀಟಿಂಗ್‍ಗಳ ವಿಚಾರ ಪತ್ರಿಕೆಗಳಲ್ಲಿ- ಮಾಧ್ಯಮಗಳಲ್ಲಿ ಬಹಳಷ್ಟು ಚರ್ಚೆ ಆಗುತ್ತಿದೆ. ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ನಡುವೆ ಅವರ ಹೈಕಮಾಂಡಿನ ಮಟ್ಟದಲ್ಲಿ ಅಧಿಕಾರದ ಒಪ್ಪಂದ, ಸೂತ್ರ ಏರ್ಪಟ್ಟಿದೆ. ಅಭಿವೃದ್ಧಿ ಬಗ್ಗೆ ಒಪ್ಪಂದ ಆಗಿಲ್ಲ. ಅಧಿಕಾರ ಹಂಚಿಕೆ ಕುರಿತು ಒಪ್ಪಂದವಾದಂತಿದೆ” ಎಂದು ಹೇಳಿದರು.

“ಒಂದು ಕಡೆ ಸರಕಾರದ ಬೇಜವಾಬ್ದಾರಿಯಿಂದ ಸರಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು, ನವಜಾತ ಶಿಶುಗಳ ಸರಣಿ ಸಾವು ಸಂಭವಿಸುತ್ತಿದೆ. ಭ್ರಷ್ಟಾಚಾರ ಮಿತಿ ಮೀರಿದೆ. ಸರಕಾರ ಆಡಳಿತಕ್ಕೆ ಬಂದು 2 ವರ್ಷಗಳು ಕಳೆದರೂ ಅಭಿವೃದ್ಧಿಯನ್ನು ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ನೋಡಲು ಸಾಧ್ಯವಾಗದ ಸ್ಥಿತಿ ಇದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರು ಚುನಾವಣೆ ಹೊರತುಪಡಿಸಿ ಬೇರೆ ದಿನಗಳಲ್ಲಿ ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿಲ್ಲ; ಅವರ ಪ್ರವಾಸ ಕೇವಲ ಬೆಂಗಳೂರಿಗೆ ಸೀಮಿತವಾಗಿದೆ” ಎಂದು ಆಕ್ಷೇಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X