ಸುಪ್ರೀಂ ಕೋರ್ಟ್‌ ಸೂಚನೆ ಗಾಯದ ಮೇಲೆ ಬರೆ ಎಳೆದಂತಾಗಿದೆ: ಸಿ ಟಿ ರವಿ

Date:

Advertisements
  • ‘ತಮಿಳುನಾಡು ಕೇಳುವ ಮೊದಲೇ ಕರ್ನಾಟಕ ಸರ್ಕಾರ ನೀರು ಬಿಟ್ಟಿತ್ತು’
  • ಇಂಡಿಯಾದ ಭಾಗವಾಗಲು ನೀರು ಬಿಡಿ ಎಂದಿರಬಹುದು: ಸಿ ಟಿ ರವಿ

ತಮಿಳುನಾಡು ಸರ್ಕಾರ ಕೇಳುವ ಮೊದಲೇ ಕರ್ನಾಟಕ ಸರ್ಕಾರ ಕಾವೇರಿ ನೀರು ಬಿಟ್ಟಿತ್ತು. ನಂತರದ ದಿನಗಳಲ್ಲಿ ನಮ್ಮ ನೆರವಿಗೆ ಸಿಡಬ್ಲ್ಯುಆರ್‌ಸಿ ಬರಲಿಲ್ಲ.‌ ಸುಪ್ರೀಂ ಕೋರ್ಟ್‌ನಿಂದಲೂ ಈಗ ಸೂಚನೆ ಬಂದಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಮಾಜಿ ಸಚಿವ ಸಿ ಟಿ ರವಿ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಕಾವೇರಿ ವಿವಾದ ವಿಚಾರವಾಗಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿಲ್ಲ. ಆದರೆ ನಮ್ಮ ರಾಜ್ಯ ಸರ್ಕಾರದ ತಪ್ಪುಗಳನ್ನು ನಾವು ಎತ್ತಿ ಹೇಳಲೇಬೇಕಿದೆ” ಎಂದರು.

“ನೀರು ಬಿಟ್ಟು ಸಭೆ ಕರೆಯುವ ಹೊಸ ಸಂಪ್ರದಾಯ ಕಾಂಗ್ರೆಸ್‌ ಸರ್ಕಾರ ಆರಂಭಿಸಿದೆ. ನೀರು ಬಿಟ್ಟ ಮೇಲೆ ಸಂಸದರ ಸಭೆ ಮಾಡಿದ್ದಾರೆ. ನೀರು ಬಿಟ್ಟ ಮೇಲೆ ವಾದ ಶುರು ಮಾಡಿದ್ದಾರೆ” ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

Advertisements

“ಡಿಎಂಕೆ ನಿಮಗೆ ಬೆದರಿಕೆ ಹಾಕಿರಬಹುದು, ನಿಮ್ಮ ಇಂಡಿಯಾದ ಭಾಗವಾಗಿರಬೇಕು ಎಂದರೆ ನೀರು ಬಿಡಿ ಎಂದಿರಬಹುದು. ಅಥವಾ ನಿಮ್ಮ ಹೈಕಮಾಂಡ್ ನಿಮಗೆ ನೀರು ಬಿಡಲು ಸೂಚನೆ ನೀಡಿರಬಹುದು” ಎಂದು ತರಾಟೆಗೆ ತೆಗೆದುಕೊಂಡರು.

“ಮುಂದಿನ 15 ದಿನ ತಮಿಳುನಾಡಿಗೆ ಪ್ರತಿ ದಿನ 5 ಸಾವಿರ ಕ್ಯೂಸೆಕ್‌ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಪರಿಣಾಮ ಬರದಿಂದ ಕಂಗೆಟ್ಟಿದ್ಧ ರಾಜ್ಯದ ರೈತರು ಕಂಗಾಲಾಗಿದ್ದಾರೆ. ಕಾವೇರಿ ನದಿ ನೀರು ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಕಾವೇರಿ ಪ್ರಾಧಿಕಾರದ ಸಮಿತಿಯ ಆದೇಶವನ್ನು ಎತ್ತಿ ಹಿಡಿಯುವ ಮೂಲಕ ಕರ್ನಾಟಕಕ್ಕೆ ಶಾಕ್‌ ನೀಡಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಾವೇರಿ ವಿವಾದ | ವಿಧಾನಸೌಧ ಮುತ್ತಿಗೆಗೆ ಮುಂದಾದ ಕರವೇ

ಸರ್ಕಾರದ ಢೋಂಗಿ‌ತನ ಬಯಲು

ಕಾವೇರಿ ನದಿ ನೀರಿನ ಹಂಚಿಕೆಯ ವಿಚಾರದಲ್ಲಿ ಕಾಂಗ್ರೆಸ್‌ ಸರ್ಕಾರದ ಢೋಂಗಿ‌ತನ ಮತ್ತೊಮ್ಮೆ ಬಯಲಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕದ ಪರ ಸಮರ್ಥವಾಗಿ ವಾದ ಮಂಡಿಸುವಲ್ಲಿ ಸಿದ್ದರಾಮಯ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬಿಜೆಪಿ ಟ್ವೀಟ್‌ ಮಾಡಿದೆ.

“ಮಿತ್ರಪಕ್ಷ ಡಿಎಂಕೆಯ ಸರ್ಕಾರದ ಮುಂದೆ ಮಂಡಿಯೂರಿ ಕುಳಿತು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ. ತಮಿಳುನಾಡಿಗೆ ಪ್ರತಿದಿನ 5000 ಕ್ಯೂಸೆಕ್ ನೀರು ಬಿಡಲು ಸಿದ್ದರಾಮಯ್ಯರವರ ಸರ್ಕಾರ ಒಪ್ಪಿಕೊಂಡು ಬಂದಿದೆ. ಕನ್ನಡಿಗರು ನೀರಿಲ್ಲದೆ ಪರಿತಪಿಸುತ್ತಿದ್ದರೂ ಪರವಾಗಿಲ್ಲ, ಕಾಂಗ್ರೆಸ್ಸಿಗೆ I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಬೇಕಿದೆ‌. “ನಾನು ಸತ್ತಂತೆ ಮಾಡುವೆ, ನೀನು ಅತ್ತಂತೆ ಮಾಡು” ಎನ್ನುವ ಧೋರಣೆಯ ಮೂಲಕ ಕಾಂಗ್ರೆಸ್ ಸರ್ಕಾರ ಕನ್ನಡನಾಡಿಗೆ ದ್ರೋಹ ಬಗೆದಿದೆ. ಕೊಡಗಿನ ಕಾವೇರಿಯ ಕೊನೆ ಹನಿ ಕೂಡ ತಮಿಳುನಾಡು ಪಾಲಾಗುವುದು ನಿಶ್ಚಿತ” ಎಂದಿದೆ.

“ತಮಿಳುನಾಡಿನ 35 ಸಚಿವರಿಗಿಂತಲೂ ಹೆಚ್ಚು ಶ್ರಮಪಟ್ಟು, ನ್ಯಾಯಾಲಯ ಹಾಗೂ ನ್ಯಾಯಾಧಿಕರಣ ಪ್ರಾಧಿಕಾರದಲ್ಲಿ ತಮಿಳುನಾಡಿನ ಹಿತಾಸಕ್ತಿಯನ್ನು ಕಾಪಾಡಿ, ಕಾವೇರಿ ನೀರು ಲೀಲಾಜಾಲವಾಗಿ ಹರಿಯುವಂತೆ ಮಾಡಿದ ಸಿದ್ದರಾಮಯ್ಯ
ಅವರನ್ನು ಗುರುತಿಸಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ತಮ್ಮ ಸಂಪುಟಕ್ಕೆ ನೂತನ ನೀರಾವರಿ ಸಚಿವರನ್ನಾಗಿ ನೇಮಕ ಮಾಡಿಕೊಂಡರೆ ಅಚ್ಚರಿಯಿಲ್ಲ” ಎಂದು ಲೇವಡಿ ಮಾಡಿದೆ.

“ಕರ್ನಾಟಕದ ಹಿತವನ್ನು ಬದಿಗಿಟ್ಟು ತಮಿಳುನಾಡಿಗೆ ನೀರು ಹರಿಸುತ್ತಾ DMK ಹಾಗೂ I.N.D.I ಮೈತ್ರಿಕೂಟದ ಬಾಂಧವ್ಯವನ್ನು ಮತ್ತಷ್ಟು ಭದ್ರಗೊಳಿಸಬೇಕೆಂಬ ರಾಹುಲ್ ಗಾಂಧಿರವರ ಸೂಚನೆಯನ್ನು ಸಿದ್ದರಾಮಯ್ಯರವರು ಚಾಚೂ ತಪ್ಪದೆ ಪರಿಪಾಲಿಸುತ್ತಿದ್ದಾರೆ!” ಎಂದು ಟೀಕಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X