ಕೇಶವಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆಯ ಮಾತು; ಪ್ರಿಯಾಂಕ್ ಖರ್ಗೆ ಆಕ್ರೋಶ

Date:

ತಮ್ಮ ಬಣ್ಣದ ಬಗ್ಗೆ ಲೇವಡಿ ಮಾಡಿರುವ ಬಿಜೆಪಿ ಮುಖಂಡ ಆರಗ ಜ್ಞಾನೇಂದ್ರ ಅವರ ಮಾತಿಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು. ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆಯ ಮಾತು’ ಎಂದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ‘ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ಧಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ. ಶತಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಿನಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು. ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ’ ಎಂದು ತಿರುಗೇಟು ಕೊಟ್ಟಿದ್ದಾರೆ.

‘ಆರಗ ಜ್ಞಾನೇಂದ್ರ ಅವರು ಒಂದೇ ಒಂದು ದಿನ ಮಣ್ಣು ಹೊತ್ತರೆ ಅವರ ಮೈಬಣ್ಣವೂ ಕಪ್ಪಗಾಗುತ್ತದೆ’ ಎಂದಿರುವ ಪ್ರಿಯಾಂಕ್ ಖರ್ಗೆ, ‘ಮನುಸ್ಮೃತಿಯ ವರ್ಣಾಶ್ರಮವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ರಾಜಕೀಯ ಏಳಿಗೆಯ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆ’ ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ: ಆರಗ ಜ್ಞಾನೇಂದ್ರರಿಂದ ಕಲ್ಯಾಣ ಕರ್ನಾಟಕದ ಜನತೆಗೆ ಅವಮಾನ: ಈಶ್ವರ ಖಂಡ್ರೆ ಕಿಡಿ

‘@BJP4Karnatakaಯ ಈ ಅಸಹನೆ ಬಿಜೆಪಿಯನ್ನೇ ಸುಟ್ಟು ಕರಕಲು ಮಾಡುತ್ತದೆ. ಏಕೆಂದರೆ, ಇದು ಮನುಸ್ಮೃತಿಯ ಕಾಲವಲ್ಲ. ಬಾಬಾ ಸಾಹೇಬರ ಸಂವಿಧಾನದ ಕಾಲ’ ಎಂದಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂದು ನಡೆಯಲಿದೆ ಹೈ ಪ್ರೊಫೈಲ್‌ ಕೇಸುಗಳ ವಿಚಾರಣೆ; ಸಂಪೂರ್ಣ ಮಾಹಿತಿ ಇಲ್ಲಿದೆ

ಇಂದು ನಾಲ್ಕು ಹೈಪ್ರೊಫೈಲ್‌ ಕೇಸುಗಳ ವಿಚಾರಣೆ ಹೈಕೋರ್ಟ್‌ ಸೇರಿದಂತೆ ವಿವಿಧ ಕೋರ್ಟ್‌ಗಳಲ್ಲಿ...

ಲೈಂಗಿಕ ದೌರ್ಜನ್ಯ | ಸಿ ಪಿ ಯೋಗೇಶ್ವರ್ ಆಪ್ತ ಟಿ ಎಸ್‌ ರಾಜು ವಿರುದ್ಧ ದೂರು ದಾಖಲು, ಆರೋಪಿ ಪರಾರಿ

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಚನ್ನಪಟ್ಟಣ ಬಿಜೆಪಿ ಗ್ರಾಮಾಂತರ ಮಂಡಳದ ಅಧ್ಯಕ್ಷ...

ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿ ಬಗ್ಗೆ ಚರ್ಚೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿಯಲ್ಲಿ ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಯ...

ಆರ್ ಅಶೋಕ್‌ಗೆ ನಮ್ಮ ಪಕ್ಷದ ಉಸಾಬರಿ ಯಾಕೆ: ಗೃಹ ಸಚಿವ ಪರಮೇಶ್ವರ್‌ ಪ್ರಶ್ನೆ

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್‌ ಅವರಿಗೆ ನಮ್ಮ ಪಕ್ಷದ...