ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಮಹಿಳಾ ಮೀಸಲಾತಿ ಮಸೂದೆ ಜಾರಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Date:

Advertisements

ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಮಹಿಳೆಯರು ಮುಂದುವರಿದಂತೆ ರಾಜಕೀಯವಾಗಿಯೂ ಮುಂದುವರಿಯಬೇಕಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಈ ಕುರಿತು ಆದ್ಯತೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಬೆಂಗಳೂರಿನ ಗೃಹ ಕಚೇರಿಯಲ್ಲಿ ಗುರುವಾರ, ಮುಂಬರುವ ಲೋಕಸಭಾ ಚುನಾವಣಾ ಪ್ರಣಾಳಿಕೆಯ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, “ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ಕಲ್ಪಿಸಲು ಕೇಂದ್ರ ಸರ್ಕಾರ ಮಸೂದೆಯನ್ನು ಅಂಗೀಕರಿಸಿದೆ; ಆದರೆ; ಇನ್ನೂ ಅನುಷ್ಠಾನಗೊಂಡಿಲ್ಲ. ನಮ್ಮ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣವೇ ಮಸೂದೆಯನ್ನು ಜಾರಿಗೊಳಿಸಲಾಗುವುದು” ಎಂದರು.

“ಸರ್ಕಾರಿ ಉದ್ಯೋಗದಲ್ಲಿ ಶೇಕಡ 50ರಷ್ಟು ಮೀಸಲಾತಿ ಜಾರಿಗೆ ತರುವ ಉದ್ದೇಶ ಹೊಂದಲಾಗಿದೆ. ಇದು ಕೆಳಮಟ್ಟದಿಂದ ಮೇಲ್ಮಟ್ಟದವರೆಗೂ ಮೀಸಲಾತಿ ಕಲ್ಪಿಸುವ ಆಶಯವಾಗಿದೆ. ಸರ್ಕಾರಿ ಉದ್ಯೋಗ ಮಾತ್ರವಲ್ಲ; ಖಾಸಗಿ ಕಂಪನಿಗಳಲ್ಲೂ ಶೇಕಡ 50ರಷ್ಟು ಮಹಿಳೆಯರಿಗೆ ಉದ್ಯೋಗ ಮೀಸಲಾತಿ ಬಗ್ಗೆಯೂ ಪ್ರಣಾಳಿಕೆಯಲ್ಲಿ ಸೇರಿಸಲಾಗುವುದು” ಎಂದು ಸಚಿವರು ತಿಳಿಸಿದರು.

Advertisements

“ಕರ್ನಾಟಕದಲ್ಲಿ ಈಗಾಗಲೇ ಯಶಸ್ವಿಯಾಗಿ ಅನುಷ್ಠಾನಗೊಂಡಿರುವ ಗೃಹಲಕ್ಷ್ಮಿ ಯೋಜನೆ ರಾಷ್ಟ್ರ ಮಟ್ಟದಲ್ಲೂ ಜಾರಿ ಆಗಬೇಕೆಂದು ಎಲ್ಲರ ಆಶಯವಾಗಿದೆ. ಪ್ರಣಾಳಿಕೆಯಲ್ಲಿ ಈ ವಿಷಯವನ್ನು ಸೇರ್ಪಡೆಗೊಳಿಸುವ ಸಂಬಂಧ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಕೇಂದ್ರ ಸರ್ಕಾರದ ವಿರುದ್ಧ ಹಿಂದೆ ಮೋದಿ ವಾಗ್ದಾಳಿ ನಡೆಸಿದಾಗ ದೇಶದ ಏಕತೆ, ಭದ್ರತೆಗೆ ಬೆದರಿಕೆ ಎದುರಾಗಿರಲಿಲ್ಲವೇ: ಸಿದ್ದರಾಮಯ್ಯ ಪ್ರಶ್ನೆ

“ಇದೇ ತಿಂಗಳ 10ರಂದು ಬೆಂಗಳೂರಿನಲ್ಲಿ ಪ್ರಣಾಳಿಕೆ ಸಮಿತಿ ಅಧ್ಯಕ್ಷರು ಹಾಗೂ ಕೇಂದ್ರ ಮಾಜಿ ವಿತ್ತ ಸಚಿವರೂ ಆದ ಪಿ. ಚಿದಂಬರಂ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮಹಿಳೆಯರ ಸಬಲೀಕರಣ, ರಾಜಕೀಯ ಮೀಸಲಾತಿ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಚರ್ಚೆ ನಡೆಸಲಾಗುವುದು” ಎಂದು ಹೇಳಿದರು.

ಸಭೆಯಲ್ಲಿ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಉಪಾಧ್ಯಕ್ಷೆ ಡಾ. ನಾಗಲಕ್ಷ್ಮೀ, ಎನ್ ಎಸ್ ಯುಐ ಮಾಜಿ ಅಧ್ಯಕ್ಷೆ ರುಚಿತ್ ಗುಪ್ತಾ, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್, ಅಂಗನವಾಡಿ ಕಾರ್ಯಕರ್ತರ ಸಂಘಟನೆಯ ಪ್ರೇಮಾ, ಮಮತಾ ರೆಡ್ಡಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X