ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಮಹಿಳಾ ಮೀಸಲಾತಿ ಮಸೂದೆ ಜಾರಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Date:

ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಮಹಿಳೆಯರು ಮುಂದುವರಿದಂತೆ ರಾಜಕೀಯವಾಗಿಯೂ ಮುಂದುವರಿಯಬೇಕಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಈ ಕುರಿತು ಆದ್ಯತೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

- Advertisement -

ಬೆಂಗಳೂರಿನ ಗೃಹ ಕಚೇರಿಯಲ್ಲಿ ಗುರುವಾರ, ಮುಂಬರುವ ಲೋಕಸಭಾ ಚುನಾವಣಾ ಪ್ರಣಾಳಿಕೆಯ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, “ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ಕಲ್ಪಿಸಲು ಕೇಂದ್ರ ಸರ್ಕಾರ ಮಸೂದೆಯನ್ನು ಅಂಗೀಕರಿಸಿದೆ; ಆದರೆ; ಇನ್ನೂ ಅನುಷ್ಠಾನಗೊಂಡಿಲ್ಲ. ನಮ್ಮ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣವೇ ಮಸೂದೆಯನ್ನು ಜಾರಿಗೊಳಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಸರ್ಕಾರಿ ಉದ್ಯೋಗದಲ್ಲಿ ಶೇಕಡ 50ರಷ್ಟು ಮೀಸಲಾತಿ ಜಾರಿಗೆ ತರುವ ಉದ್ದೇಶ ಹೊಂದಲಾಗಿದೆ. ಇದು ಕೆಳಮಟ್ಟದಿಂದ ಮೇಲ್ಮಟ್ಟದವರೆಗೂ ಮೀಸಲಾತಿ ಕಲ್ಪಿಸುವ ಆಶಯವಾಗಿದೆ. ಸರ್ಕಾರಿ ಉದ್ಯೋಗ ಮಾತ್ರವಲ್ಲ; ಖಾಸಗಿ ಕಂಪನಿಗಳಲ್ಲೂ ಶೇಕಡ 50ರಷ್ಟು ಮಹಿಳೆಯರಿಗೆ ಉದ್ಯೋಗ ಮೀಸಲಾತಿ ಬಗ್ಗೆಯೂ ಪ್ರಣಾಳಿಕೆಯಲ್ಲಿ ಸೇರಿಸಲಾಗುವುದು” ಎಂದು ಸಚಿವರು ತಿಳಿಸಿದರು.

“ಕರ್ನಾಟಕದಲ್ಲಿ ಈಗಾಗಲೇ ಯಶಸ್ವಿಯಾಗಿ ಅನುಷ್ಠಾನಗೊಂಡಿರುವ ಗೃಹಲಕ್ಷ್ಮಿ ಯೋಜನೆ ರಾಷ್ಟ್ರ ಮಟ್ಟದಲ್ಲೂ ಜಾರಿ ಆಗಬೇಕೆಂದು ಎಲ್ಲರ ಆಶಯವಾಗಿದೆ. ಪ್ರಣಾಳಿಕೆಯಲ್ಲಿ ಈ ವಿಷಯವನ್ನು ಸೇರ್ಪಡೆಗೊಳಿಸುವ ಸಂಬಂಧ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಕೇಂದ್ರ ಸರ್ಕಾರದ ವಿರುದ್ಧ ಹಿಂದೆ ಮೋದಿ ವಾಗ್ದಾಳಿ ನಡೆಸಿದಾಗ ದೇಶದ ಏಕತೆ, ಭದ್ರತೆಗೆ ಬೆದರಿಕೆ ಎದುರಾಗಿರಲಿಲ್ಲವೇ: ಸಿದ್ದರಾಮಯ್ಯ ಪ್ರಶ್ನೆ

“ಇದೇ ತಿಂಗಳ 10ರಂದು ಬೆಂಗಳೂರಿನಲ್ಲಿ ಪ್ರಣಾಳಿಕೆ ಸಮಿತಿ ಅಧ್ಯಕ್ಷರು ಹಾಗೂ ಕೇಂದ್ರ ಮಾಜಿ ವಿತ್ತ ಸಚಿವರೂ ಆದ ಪಿ. ಚಿದಂಬರಂ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮಹಿಳೆಯರ ಸಬಲೀಕರಣ, ರಾಜಕೀಯ ಮೀಸಲಾತಿ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಚರ್ಚೆ ನಡೆಸಲಾಗುವುದು” ಎಂದು ಹೇಳಿದರು.

ಸಭೆಯಲ್ಲಿ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಉಪಾಧ್ಯಕ್ಷೆ ಡಾ. ನಾಗಲಕ್ಷ್ಮೀ, ಎನ್ ಎಸ್ ಯುಐ ಮಾಜಿ ಅಧ್ಯಕ್ಷೆ ರುಚಿತ್ ಗುಪ್ತಾ, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್, ಅಂಗನವಾಡಿ ಕಾರ್ಯಕರ್ತರ ಸಂಘಟನೆಯ ಪ್ರೇಮಾ, ಮಮತಾ ರೆಡ್ಡಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...