ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಗೊಂದಲಗಳಿಲ್ಲ: ಸಿಎಂ ಸಿದ್ದರಾಮಯ್ಯ

Date:

  • ಸರ್ಕಾರದ ಘೋಷಿತ ಗ್ಯಾರಂಟಿಗಳು ಹಂತಹಂತವಾಗಿ ಜಾರಿಯಾಗಲಿವೆ
  • ಪ್ರಣಾಳಿಕೆಯ ಘೋಷಣೆಯಂತೆ ನಾವು ಗ್ಯಾರಂಟಿ ಅನುಷ್ಠಾನ ಮಾಡುತ್ತಿದ್ದೇವೆ

ರಾಜ್ಯ ಸರ್ಕಾರ ಘೋಷಿತ ಗ್ಯಾರಂಟಿ ಯೋಜನೆ ಬಗ್ಗೆ ಇದ್ದ ಎಲ್ಲಾ ಗೊಂದಲಗಳು ಬಗೆಹರಿದಿದೆ. ನಾವು ಏನು ಹೇಳಿದ್ದೆವೋ ಅದರಂತೆ ನಡೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

ಮೈಸೂರು ಜಿಲ್ಲಾ ಪ್ರವಾಸಕ್ಕೆ ತೆರಳುವ ಮೊದಲು, ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹಲಕ್ಷಿ, ಗೃಹಜ್ಯೋತಿ ಯೋಜನೆ ಬಗ್ಗೆ ಯಾವುದೇ ಗೊಂದಲ ಇಲ್ಲ. ಎಲ್ಲ ಗೊಂದಗಳ ಪರಿಹಾರ ಕಾರ್ಯ ನಡೆದಿದ್ದು, ಯೋಜನೆಗಳು ಸುಸೂತ್ರವಾಗಿ ಜಾರಿಯಾಗಲಿವೆ. ಆಯಾಯ ಇಲಾಖೆ ಸಚಿವರು ಗೊಂದಲಗಳಿಲ್ಲದೆ ಯೋಜನೆ ಜಾರಿ ಮಾಡುತ್ತಾರೆ ಎಂದು ಸಿಎಂ ಹೇಳಿದರು.

ನಮ್ಮ ಸರ್ಕಾರ ಪಕ್ಷ ಪ್ರಣಾಳಿಕೆಯಲ್ಲಿ ಘೋಷಿಸಿರುವ ಯೋಜನೆಗಳನ್ನ ಜಾರಿ ಮಾಡಿದೆ. ನಾವು ನುಡಿದಂತೆ ನಡೆಯುತ್ತೇವೆ, ನಡೆದಿದ್ದೇವೆ. ಏನನ್ನು ಹೇಳಿದ್ದೇವೆಯೋ ಅದರಂತೆಯೇ ನಡೆಯುತ್ತೇವೆ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?:ಮೈಸೂರು | ಯತೀಂದ್ರಗೆ ಲೋಕಸಭಾ ಟಿಕೆಟ್‌ ನೀಡುವಂತೆ ಒತ್ತಾಯಿಸಿ ಅಂಚೆ ಅಭಿಯಾನ

ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ಮೋದಿ ಎಷ್ಟು ಭರವಸೆ ಕೊಟ್ಟಿದ್ದರು? ಅವರು ಕೊಟ್ಟ ಎಲ್ಲ ಭರವಸೆಗಳೂ ಈಡೇರಿವೆಯೇ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ನಮ್ಮ ಜನಪರ ಸರ್ಕಾರದ ಕಾರ್ಯಗಳನ್ನು ಬಿಜೆಪಿಗೆ ಸಹಿಸಿಕೊಳ್ಳಲಾಗುತ್ತಿಲ್ಲ, ಹೀಗಾಗಿ ಇಲ್ಲಸಲ್ಲದ ಆರೋಪ ಹಾಗೂ ಗೊಂದಲ ಸೃಷ್ಟಿಸುತ್ತಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಸ್ವಕ್ಷೇತ್ರ ವರುಣಾದಲ್ಲಿ ಕೃತಜ್ಞತಾ ಸಮಾವೇಶ ಹಮ್ಮಿಕೊಂಡಿದ್ದು, ಮತದಾರರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಈ ಸಲುವಾಗಿ ಮೈಸೂರಿಗೆ ತೆರಳಿದ್ದಾರೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಅವರಿಗೆ ಜೊತೆಯಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೇಹಾ ಕೊಲೆಗೂ ರಾಜಕೀಯಕ್ಕೂ ಸಂಬಂಧವಿಲ್ಲ: ಸಚಿವ ಡಾ. ಜಿ ಪರಮೇಶ್ವರ್‌ ಸ್ಪಷ್ಟನೆ

ಹುಬ್ಬಳ್ಳಿಯ ಬಿವಿಬಿ ಇಂಜಿನಿಯರ್​​ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ...

ಮತದಾರರಿಗೆ ಬೆದರಿಕೆ ಆರೋಪ; ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಲೋಕಸಭಾ ಚುನಾವಣೆಯಲ್ಲಿ ತಮ್ಮ ಸಹೋದರ ಡಿಕೆ ಸುರೇಶ್​ಗೆ ಮತ ನೀಡುವಂತೆ ಬೆಂಗಳೂರು...

ಬೆಂಗಳೂರು | ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

ಒಂದೆಡೆ ಲೋಕಸಭಾ ಚುನಾವಣೆಯ ಕಾವು ಏರಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಆದಾಯ ತೆರಿಗೆ ಇಲಾಖೆ...

ಹಾಸನ ಲೋಕಸಭಾ ಕ್ಷೇತ್ರ | ಪ್ರಜ್ವಲ್ ಆರ್ಭಟದೆದುರು ಶ್ರೇಯಸ್ ಅನುಕಂಪ ಗೆಲ್ಲಬಹುದೇ?

ಹಾಸನ ರಾಜಕಾರಣದ ಶಕ್ತಿಕೇಂದ್ರ. ದೇವೇಗೌಡ, ರೇವಣ್ಣ, ಭವಾನಿ, ಬಾಲಕೃಷ್ಣ, ಪ್ರಜ್ವಲ್ ಹಾಗೂ...