ಕೇಂದ್ರದ ಸಾಲಕ್ಕೂ, ತಾವು ಮಾಡಿರುವ ಸಾಲಕ್ಕೂ ವ್ಯತ್ಯಾಸವಿದೆ: ಸಿದ್ದರಾಮಯ್ಯಗೆ ಅಶೋಕ್ ತಿರುಗೇಟು

Date:

Advertisements

ಸಿಎಂ ಸಿದ್ದರಾಮಯ್ಯ ನವರೇ, ನಾನು ತಮ್ಮಂತೆ ಸ್ವಯಂ ಘೋಷಿತ ಆರ್ಥಿಕ ತಜ್ಞನಲ್ಲ. ಆದರೆ ತಮ್ಮಂತೆ ನನಗೊಬ್ಬನಿಗೇ ಎಲ್ಲವೂ ಗೊತ್ತು ಎಂಬ ಅಹಂಕಾರವೂ ಇಲ್ಲ. ಕೇಂದ್ರ ಸರ್ಕಾರ ಮಾಡಿರುವ ಸಾಲಕ್ಕೂ, ತಾವು ಮಾಡಿರುವ ಸಾಲಕ್ಕೂ ಅಜಗಜಾಂತರ ವ್ಯತ್ಯಾಸ ಇದೆ. ನಿಮಗೆ ಅರ್ಥವಾಗುವುದಿದ್ದರೆ ಓದಿಕೊಳ್ಳಿ” ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಅವರ ಎಕ್ಸ್‌ ತಾಣದ ಪೋಸ್ಟ್‌ಗೆ ಮರಳಿ ಪ್ರತಿಕ್ರಿಯಿಸಿರುವ ಅವರು, “ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚಿನ ಗಮನ ಹರಿಸಿದ್ದು, 2024ರ ಮಧ್ಯಂತರ ಬಜೆಟ್ನಲ್ಲಿ ಬಂಡವಾಳ ವೆಚ್ಚವನ್ನು ಸತತ ನಾಲ್ಕನೇ ವರ್ಷವೂ ಶೇ.11.1ರಷ್ಟು ಹೆಚ್ಚಿಸಿದೆ. ಇದರಿಂದ ಬಂಡವಾಳ ವೆಚ್ಚ 11.11 ಲಕ್ಷ ಕೋಟಿ ರೂ.ಗೆ ಏರಿಕೆಯಾಗಲಿದೆ. ಇದು ದೇಶದ ಜಿಡಿಪಿಯ ಶೇ. 3.4ರಷ್ಟು ಆಗಿದೆ. ಅದೇ ನಿಮ್ಮ ಕಾರ್ಯವೈಖರಿ ನೋಡಿ” ಎಂದಿದಾರೆ.

“2023-24 ರಲ್ಲಿ ತಾವು ಮಂಡಿಸಿದ ಬಜೆಟ್ ಗಾತ್ರ 3.27 ಲಕ್ಷ ಕೋಟಿ. ಅದರಲ್ಲಿ ಬಂಡವಾಳ ವೆಚ್ಚಕ್ಕೆ ತಾವು ಮೀಸಲಿಟ್ಟಿದ್ದು 54,000 ಕೋಟಿ. ಅದೇ 2024-2025ರ ಆರ್ಥಿಕ ಸಾಲಿಗೆ ತಾವು ಮಂಡಿಸಿರುವ ಕರ್ನಾಟಕದ ಬಜೆಟ್ ಗಾತ್ರ 3,71,383 ಕೋಟಿ. ಅಂದರೆ 2023-24 ರಲ್ಲಿ ತಾವು ಮಂಡಿಸಿದ 3.27 ಲಕ್ಷ ಕೋಟಿಗಿಂತ ದೊಡ್ಡದು” ಎಂದು ಹೇಳಿದ್ದಾರೆ.

Advertisements

“ಕಳೆದ ವರ್ಷಕ್ಕಿಂತ ಸುಮಾರು 25 ಸಾವಿರ ಕೋಟಿ‌ ರೂ. ಹೆಚ್ಚಿನ ಸಾಲ ಕೂಡ ಮಾಡಿದ್ದೀರಿ. ಆದರೆ ಬಂಡವಾಳ ವೆಚ್ಚಕ್ಕೆ ತಾವು ಮೀಸಲಿಟ್ಟಿದ್ದು ಕೇವಲ 55,000 ಕೋಟಿ, ಅಂದರೆ ಕಳೆದ ವರ್ಷಕ್ಕಿಂತ ಹೆಚ್ಚಾದ ಮೊತ್ತ ಎಷ್ಟು? ಕೇವಲ 1,000 ಕೋಟಿ. ಅಂದರೆ ಬಂಡವಾಳ ವೆಚ್ಚ ಹೆಚ್ಚಳವಾಗಿದ್ದು ಕೇವಲ ಶೇ.1.85.” ಎಂದು ವಿವರಿಸಿದ್ದಾರೆ.

“ಬಜೆಟ್ ಗಾತ್ರ ಹೆಚ್ಚಾದರೂ, ಸಾಲ ಹೆಚ್ಚಾದರೂ, ಬಂಡವಾಳ ವೆಚ್ಚ ಮಾತ್ರ ಯಾಕೆ ಅದೇ ಪ್ರಮಾಣದಲ್ಲಿ ಹೆಚ್ಚಾಗುತ್ತಿಲ್ಲ ಸಿಎಂ ಸಿದ್ದರಾಮಯ್ಯ ನವರೇ? ಸಾಲದ ದುಡ್ಡೆಲ್ಲಾ ಎಲ್ಲಿ ಹೋಗುತ್ತಿದೆ? ಹೆಚ್ಚಾದ ಬಜೆಟ್ ಗಾತ್ರವೆಲ್ಲಾ ಎಲ್ಲಿ ಹೋಯ್ತು? ನಿಮ್ಮ ಬಳಿ ಇದಕ್ಕೆಲ್ಲಾ ಉತ್ತರ ಇದೆಯೇ” ಎಂದು ಪ್ರಶ್ನಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ವಿರೋಧ ಪಕ್ಷದ ನಾಯಕರು, ಸಾಲದ ಪ್ರಶ್ನೆಯನ್ನು ತಮ್ಮ ಕೇಂದ್ರ ಸರಕಾರಕ್ಕೂ ಕೇಳಬೇಕು,,55 ಲಕ್ಷ ಕೋಟಿ ಇದ್ದ ಸಾಲ 205 ಲಕ್ಷ ಕೋಟಿಗೆ ಹೋಗಿದ್ದು ಹೇಗೆ,, ಇಷ್ಟು ಸಾಲದ ಹಣ ಯಾರ ಬೊಕ್ಕಸ ಸೇರಿತು,, ನಿಮ್ಮ ಸರಕಾರ ಇದ್ದಾಗಲೂ ರಾಜ್ಯದಲ್ಲಿ ಸಾಲಾ ಮಾಡಿದ್ದು ಗುಟ್ಟೇನಲ್ಲ ಆ ದುಡ್ಡು ಏನು ಮಾಡಿದಿರಿ,,, ನಿಮಗೆ ಭಯಂಕರ ನಿಷ್ಠೆ ಪ್ರದರ್ಶನ ಮಾಡುವುದು ಬಿಟ್ಟರೆ ಹಣಕಾಸು ಮಂತ್ರಿಗಳ ಮುಂದೆ ನಿಂತು ಕೇಳುವ ತಾಕತ್ತು ಇರಲಿಲ್ಲ,,,ಈಗ ಸಿದ್ದರಾಮಯ್ಯ ರಾಜ್ಯದ ಪಾಲು ಮುಲಾಜಿಲ್ಲದೆ ಕೇಳುತ್ತಿದ್ದಾರೆ ಆತ್ಮವಂಚನೆ ಮಾಡಿಕೊಳ್ಳದೇ ಅವರಿಗೆ ಬೆಂಬಲ ಕೊಡಿ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X