ಸೋಲಿನ ಭೀತಿಯಿಂದ ಐಟಿ, ಇಡಿ ಮೂಲಕ ನಮ್ಮನ್ನು ಬೆದರಿಸುವ ಪ್ರಯತ್ನ ನಡೆಯುತ್ತಿದೆ: ಡಿ.ಕೆ. ಸುರೇಶ್ ಆಕ್ರೋಶ

Date:

“ಬಿಜೆಪಿ ಹಾಗೂ ಮಾಜಿ ಪ್ರಧಾನಿಗಳ ಕೈಗೊಂಬೆಯಾಗಿರುವ ಐಟಿ ಅಧಿಕಾರಿಗಳು ನಮ್ಮ ಕಾರ್ಯಕರ್ತರ ಮನೆಯಲ್ಲಿ ಮಹಿಳೆಯರನ್ನು ತೀಕ್ಷ್ಣವಾಗಿ ಕಂಡು, ಯುವಕರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಸೋಲಿನ ಭೀತಿಯಿಂದ  ಈ ರೀತಿ ನಡೆದುಕೊಳ್ಳುತ್ತಿದ್ದಾರೆ” ಎಂದು ಸಂಸದ ಡಿ.ಕೆ. ಸುರೇಶ್ ಆಕ್ರೋಶ ಹೊರಹಾಕಿದರು.

- Advertisement -

ಆನೇಕಲ್‌ನಲ್ಲಿ ಪ್ರಚಾರದ ವೇಳೆ ಮಾಧ್ಯಮಗಳ ಪ್ರಶ್ನೆಗಳ ಜತೆ ಮಾತನಾಡಿದ ಅವರು, “ಚುನಾವಣೆ ಸೋಲಿನ ಭೀತಿಯಿಂದ ಐಟಿ, ಇಡಿ ಮೂಲಕ ನಮ್ಮ ಕಾರ್ಯಕರ್ತರನ್ನು ಬೆದರಿಸುವ ಪ್ರಯತ್ನ ನಡೆಯುತ್ತಿದೆ. ನಿನ್ನೆ ಕೆಲವು ಅಧಿಕಾರಿಗಳು ಬಂದು ನಮ್ಮ ಕಾರ್ಯಕರ್ತರನ್ನು, ಅವರ ಕುಟುಂಬದ ಹೆಣ್ಣು ಮಕ್ಕಳನ್ನು ಬೆದರಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುತ್ತಿದ್ದು, ಐಟಿ ಇಲಾಖೆ ಮುಖ್ಯಸ್ಥರ ಗಮನಕ್ಕೆ ತರುತ್ತೇನೆ. ಅವರ ಕೆಲಸ ಕೇವಲ ಪರಿಶೀಲನೆ ಮಾಡುವುದು ಮಾತ್ರ. ಅದನ್ನು ಬಿಟ್ಟು ಬಿಜೆಪಿ ಪರ ಪ್ರಚಾರ ಮಾಡುವುದು ಸರಿಯಲ್ಲ. ಇದು ಅಕ್ಷಮ್ಯ ಅಪರಾಧ. ಹೀಗೆ ಮುಂದುವರಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ನನ್ನ ಚಾಲಕರ ಮನೆಯಲ್ಲಿ ಅವರ ಕುಟುಂಬದವರನ್ನು ಎಳೆದಾಡಿದ್ದಾರೆ. ಮಹಿಳೆಯರನ್ನು ತೀಕ್ಷ್ಣವಾಗಿ ಕಂಡು, ಯುವಕರನ್ನು ಒಂಟಿ ಕಾಲಲ್ಲಿ ನಿಲ್ಲಿಸಿದ್ದಾರೆ. ಮಾಜಿ ಪ್ರಧಾನಮಂತ್ರಿಗಳು ಹಾಗೂ ಬಿಜೆಪಿಯವರ ಕೈಗೊಂಬೆಯಾಗಿ ಐಟಿ ಅಧಿಕಾರಿಗಳ ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗಿದೆ. ಅವರು ಚುನಾವಣೆಯಲ್ಲಿ ಜನರ ಮುಂದೆ ಹೋಗಿ ಹೋರಾಟ ಮಾಡಬೇಕು. ಅದನ್ನು ಬಿಟ್ಟು ಈ ರೀತಿ ಅಧಿಕಾರಿಗಳ ದುರ್ಬಳಕೆ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ” ಎಂದು ಡಿ ಕೆ ಸುರೇಶ್ ತಿಳಿಸಿದ್ದಾರೆ.

“ಚುನಾವಣೆ ನಿಷ್ಪಕ್ಷಪಾತವಾಗಿ ಚುನಾವಣೆ ಮಾಡಬೇಕು. ನಾನು ನನ್ನ ಕೆಲಸದ ಆಧಾರದ ಮೇಲೆ ಮತ ಕೇಳುತ್ತಿದ್ದೇನೆಯೇ ಹೊರತು, ನನಗೆ ಯಾರನ್ನು ಬೆದರಿಸುವ ಅಗತ್ಯವಿಲ್ಲ. ನಾನು ಆಸ್ತಿ, ಕುಟುಂಬ ಉಳಿಸಿಕೊಳ್ಳಲು ಬೇರೆಯವರ ಜತೆ ಸೇರಿ ರಾಜಕಾರಣ ಮಾಡುತ್ತಿಲ್ಲ” ಎಂದು ಪರೋಕ್ಷವಾಗಿ ಜೆಡಿಎಸ್‌ ಅನ್ನು ಕುಟುಕಿದರು.

“ಜೆಡಿಎಸ್‌ನವರು ಕ್ಷುಲ್ಲಕ ರಾಜಕಾರಣ ಮಾಡುವುದರಲ್ಲಿ ಹೆಸರುವಾಸಿ. ಅವರು ಹಿರಿಯರಿದ್ದಾರೆ. ಅವರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಅವರು ಮಾಡಿರುವ ಆರೋಪಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುತ್ತೇವೆ. ನಾನು ಹಾಗೂ ಶಿವಕುಮಾರ್ ಅವರಿಗೆ ಕಲ್ಲು ಹೊಡೆದಿದ್ದಾರೆ ಎಂದು ಹೇಳುತ್ತಾರಲ್ಲ, ಅವರ ಕುಟುಂಬದಲ್ಲಿ ಯಾರೆಲ್ಲಾ ಎಲ್ಲಿ ಕಲ್ಲು ಹೊಡೆದಿದ್ದಾರೆ ಎಂದು ನಾನು ತೋರಿಸುತ್ತೇನೆ. ಅವರು ಯಾರ ಜಮೀನುಗಳನ್ನು ಯಾರ ಹೆಸರಲ್ಲಿ ಹಾಕಿಕೊಂಡಿದ್ದಾರೆ ಎಂಬುದನ್ನು ತೋರಿಸಬಹುದು. ಆದರೆ ಅದರ ಅಗತ್ಯ ನಮಗಿಲ್ಲ” ಎಂದು ಡಿ.ಕೆ. ಸುರೇಶ್ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...