ಬೇರೆ ಪಕ್ಷಕ್ಕೆ ಆಹ್ವಾನವಿದೆ, ಕುಟುಂಬದ ಜತೆ ಚರ್ಚಿಸಿ ನಾಳೆ ನಿರ್ಧಾರ: ಡಿ ವಿ ಸದಾನಂದಗೌಡ

Date:

“ಇವತ್ತು ನನ್ನ ಜನ್ಮದಿನ, ಇಡೀ ದಿನ ಕುಟುಂಬದ ಸದಸ್ಯರ ಜತೆ ಕಳೆಯುವೆ. ಮುಂದಿನ ರಾಜಕೀಯ ಹೆಜ್ಜೆಗಳ ಬಗ್ಗೆ ಕುಟುಂಬ ಸದಸ್ಯರ ಜತೆ ಚರ್ಚಿಸಿ, ನನ್ನ ನಿರ್ಣಯವನ್ನು ನಾಳೆ ಸುದ್ದಿಗೋಷ್ಠಿ ಮಾಡಿ ತಿಳಿಸುವೆ” ಎಂದು ಸಂಸದ, ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ ಹೇಳಿದರು.

ಬೆಂಗಳೂರು ಉತ್ತರ ಕ್ಷೇತ್ರದಿಂದ ಸದಾನಂದಗೌಡರಿಗೆ ಬಿಜೆಪಿ ಟಿಕೆಟ್ ತಪ್ಪಿದೆ. ಪಕ್ಷದ ಈ ನಿರ್ಧಾರದಿಂದ ಅವರು ಬೇಸರಗೊಂಡಿದ್ದಾರೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು.

ಕಾಂಗ್ರೆಸ್​ ಮುಖಂಡರು ನಿಮ್ಮನ್ನು ಸಂಪರ್ಕಿಸುತ್ತಿರುವುದು ನಿಜವೇ ಎಂದು ಪ್ರಶ್ನಿಸಿದಾಗ, “ವಿವಿಧ ರಾಜಕೀಯ ಪಕ್ಷಗಳ ನಾಯಕರು ನನ್ನನ್ನು ಸಂಪರ್ಕ ಮಾಡುತ್ತಿದ್ದಾರೆ. ಬೇರೆ ಬೇರೆ ಸಂಗತಿಗಳು ನಡೀತಿವೆ” ಎಂದಷ್ಟೇ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಮ್ಮ ಪಕ್ಷದ ಪ್ರಮುಖ ನಾಯಕರೊಬ್ಬರು ಬಂದು ಸಾಂತ್ವನ ಮಾಡಿರುವುದು ನಿಜ. ದೆಹಲಿಯಲ್ಲಿ, ರಾಜ್ಯದಲ್ಲಿ ಒಂದಷ್ಟು ವಿದ್ಯಮಾನ ನಡೆದಿವೆ. ನಿಮಗೆ ಟಿಕೆಟ್ ಅಂದರು, ಕೊನೆ ಕ್ಷಣದಲ್ಲಿ ರಕ್ಷಣೆಗೆ ಬರಲಿಲ್ಲ. ಕೆಲವೊಂದು ಮನದಾಳದ ವಿಚಾರವನ್ನ ಹೇಳಿಕೊಳ್ಳಬೇಕಿದೆ” ಎಂದರು.

ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಈಶ್ವರಪ್ಪ ನಿರ್ಧರಿಸಿರುವ ಬಗ್ಗೆ ಪ್ರತಿಕ್ರಿಯಿಸಿ, “ಈಶ್ವರಪ್ಪ ಅವರನ್ನು ಭೇಟಿಯಾಗಿ ಮಾತನಾಡಿದ್ದೇನೆ. ಪಕ್ಷದಲ್ಲಿ ಯಾರಿಗೆಲ್ಲಾ ಮನಸ್ಸಿಗೆ ನೋವಾಗಿದೆಯೋ, ಒಟ್ಟಿಗೆ ಹೋಗಿ ವರಿಷ್ಠರ ಭೇಟಿಯಾಗಿ ತೀರ್ಮಾನಿಸೋಣ ಅಂದಿದ್ದೆ. ಆದರೆ ಈಶ್ವರಪ್ಪ ತಮ್ಮದೇ ಆದ ನಿರ್ಣಯ ತೆಗೆದುಕೊಂಡಿದ್ದಾರೆ. ಅದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ” ಎಂದು ತಿಳಿಸಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೂರಜ್ ರೇವಣ್ಣ ಪ್ರಕರಣ | ನಮಗೆ ಯಾರೂ ಅಧಿಕೃತ ದೂರು ನೀಡಿಲ್ಲ: ಸಚಿವ ಪರಮೇಶ್ವರ್

ಎಂಎಲ್‌ಸಿ ಸೂರಜ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಸಂಬಂಧಪಟ್ಟ ಹಾಗೆ...

ನೀಟ್ ರದ್ದು ಮಾಡಿದರೆ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ: ಶಿಕ್ಷಣ ಸಚಿವ

ನೀಟ್‌ ವಿಚಾರವಾಗಿ ತೀವ್ರ ವಿವಾದ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ತನಿಖೆ...

ದರ್ಶನ್ ಪ್ರಕರಣ | ಕಾನೂನು ಉಲ್ಲಂಘಿಸೋರು ಶ್ರೀಮಂತರು – ನರಳೋರು ಬಡವರು; ನಟಿ ರಮ್ಯ ಟ್ವೀಟ್

ರಾಜ್ಯದಲ್ಲಿ ಇತ್ತೀಚೆಗೆ ಹಲವು ಪ್ರಕರಣಗಳು ಭಾರೀ ಸದ್ದು ಮಾಡುತ್ತಿವೆ. ಸಿನಿಮಾ ತಾರೆಯರು,...

ಜಗನ್ ರೆಡ್ಡಿ ಅವರ ವೈಎಸ್‌ಆರ್‌ ಕಾಂಗ್ರೆಸ್‌ನ ನಿರ್ಮಾಣ ಹಂತದಲ್ಲಿದ್ದ ಕೇಂದ್ರ ಕಚೇರಿ ಕೆಡವಿದ ಆಂಧ್ರ ಸರ್ಕಾರ

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಸೀತಾನಗರಂನಲ್ಲಿ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ...