ಆರೋಪಿ ನಾಶಿಪುಡಿಗೂ, ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಗಲಾಟೆಗೂ ಸಂಬಂಧವಿಲ್ಲ: ಸಚಿವ ಪರಮೇಶ್ವರ್

Date:

ಹಾವೇರಿಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಗಲಾಟೆ ಯಾರು ಮಾಡಿದರು ಅಂತ ವಿಚಾರಣೆ ನಡೆಯುತ್ತಿದೆ. ಆಂಧ್ರ ಪ್ರದೇಶದಿಂದಲೂ ಬ್ಯಾಡಗಿ ಮಾರುಕಟ್ಟೆಗೆ ರೈತರು ಬರುತ್ತಾರೆ. ಸೋಮವಾರ (ಮಾ.11) ರಂದು ಘಟನೆಯಲ್ಲಿ 6-7 ಗಾಡಿಗಳನ್ನು ಸುಟ್ಟು ಹಾಕಿದ್ದಾರೆ. ಏಕಾಏಕಿ ದರ ಅಷ್ಟು ಯಾಕೆ ಕುಸಿದಿದೆ ಅಂತ ಗೊತ್ತಿಲ್ಲ. ಇದನ್ನ ತನಿಖೆ ಮಾಡಿ ತಿಳಿಸಿ ಅಂತ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, “ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಡಿ ಬಂಧಿತವಾಗಿರುವ ನಾಶಿಪುಡಿಗೂ ಮತ್ತು ಈ ಘಟನೆಗೂ ಸಂಬಂಧವಿಲ್ಲ. ಯಾರು ಕಾರಣ ಅಂತ ಕಂಡುಹಿಡಿಯಬೇಕಿದೆ. ಇವತ್ತಿನಿಂದ ಎಲ್ಲ ಪ್ರಕ್ರಿಯೆ ಮತ್ತೆ ಆರಂಭವಾಗುತ್ತದೆ” ಎಂದರು.

ಬಾಂಬ್ ಸ್ಫೋಟದ ಆರೋಪಿ ಮಲೆನಾಡಿನ ವ್ಯಕ್ತಿ ಎಂಬ ಶಂಕೆ ವ್ಯಕ್ತವಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಿ, “ನಾನು ಮಾಧ್ಯಮಗಳಲ್ಲಿ ನೋಡಿದೆ. ಕರ್ನಾಟಕದವನು ಎಂಬುವುದು ಊಹಾಪೋಹ. ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿದಾಗ ಸತ್ಯ ಗೊತ್ತಾಗುತ್ತದೆ” ಎಂದು ತಿಳಿಸಿದರು.‌

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಸಂವಿಧಾನ ಬದಲಾವಣೆ | ಅನಂತಕುಮಾರ್ ಹೆಗಡೆ ಹೇಳಿಕೆಗೂ ಬಿಜೆಪಿಗೂ ಸಂಬಂಧ ಇಲ್ಲ: ಪಿ.ರಾಜೀವ್

ಸಿಎಎ ಜಾರಿ ವಿಚಾರವಾಗಿ ಪ್ರತಿಕ್ರಿಯಿಸಿ, “ರಾಜಕೀಯ ಕಾರಣಕ್ಕೆ ಮಾಡಿದ್ದಾರೆ ಎಂದು ಒಂದು ವಾದವಿದೆ. ಮಾಹಿತಿ ಸಿಕ್ಕಿದಾಗ ಮಾತಾಡಬಹುದು. ನಿಯಮಗಳ ಮೇಲೆ ಪ್ರತಿಕ್ರಿಯಿಸಬಹುದು” ಎಂದು ಹೇಳಿದರು.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಮಾತನಾಡಿ, “21 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಸಭೆ ಮಾಡಿದರು. ಆದರೆ ಎಷ್ಟು ಕ್ಷೇತ್ರಗಳಿಗೆ ಕ್ಲಿಯರ್ ಆಗಿದೆ ಗೊತ್ತಿಲ್ಲ. ಬುಧವಾರ ಸಭೆ ಇದೆ. ಇಂದು ಕ್ಲಿಯರ್ ಆದರೆ ದೆಹಲಿಗೆ ಪಟ್ಟಿ ತೆಗೆದುಕೊಂಡು ಹೋಗುತ್ತಾರೆ. ನಮ್ಮ ಪಕ್ಷದಲ್ಲಿ ಅಭ್ಯರ್ಥಿಗಳ ಕೊರತೆಯಿಲ್ಲ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾನು ರಾಜ್ಯಕ್ಕೆ ಭೇಟಿ ನೀಡುವುದು ಡಿ ಕೆ ಶಿವಕುಮಾರ್‌ಗೆ ಸಹಿಸಲು ಆಗುತ್ತಿಲ್ಲ: ಎಚ್‌ ಡಿ ಕುಮಾರಸ್ವಾಮಿ

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿಕೆಗಳಲ್ಲಿ ತಾಳಮೇಳವಿಲ್ಲ, ಸ್ಥಿರತೆ ಇಲ್ಲ. ಅವರೊಬ್ಬ...

ಯಾದಗಿರಿ | ಮಾಜಿ ಶಾಸಕ ಡಾ.ವೀರಬಸವಂತರಡ್ಡಿ ಮುದ್ನಾಳ ನಿಧನ

ಯಾದಗಿರಿ ಜಿಲ್ಲೆಯ ಮಾಜಿ ಶಾಸಕ ಹಾಗೂ ವೈದ್ಯ ಡಾ. ವೀರಬಸವಂತರೆಡ್ಡಿ ಮುದ್ನಾಳ...

ನೀಟ್ ಪ್ರಕರಣ | ಶಿಕ್ಷಣ ಸಚಿವರು ತಮ್ಮನ್ನು ಹೊರತುಪಡಿಸಿ ಎಲ್ಲರನ್ನೂ ದೂಷಿಸಿದ್ದಾರೆ: ರಾಹುಲ್ ಗಾಂಧಿ

ನೀಟ್ ಪ್ರಕರಣದಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮನ್ನು ಹೊರತುಪಡಿಸಿ...

ಅಧಿವೇಶನ | ಕುಮ್ಕಿ ಜಮೀನು ಮಂಜೂರಾತಿ ಸಾಧ್ಯವಿಲ್ಲ, ಬಡವರ ಮನೆಗಳ ತೆರವೂ ಇಲ್ಲ: ಕೃಷ್ಣ ಬೈರೇಗೌಡ

ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ. ಆದ್ರೆ, ಕುಮ್ಕಿ...