UGC-NET ಪರೀಕ್ಷೆಯಂತೆ ನೀಟ್ ಪರೀಕ್ಷೆ ರದ್ದು ಮಾಡಲ್ಲ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

Date:

ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ನಿನ್ನೆ ಕೇಂದ್ರ ಸರ್ಕಾರವು ಬುಧವಾರ UGC-NET ಪರೀಕ್ಷೆಯನ್ನು ರದ್ದು ಮಾಡಿತ್ತು. ಇದೇ ರೀತಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿರುವ ನೀಟ್ ಪರೀಕ್ಷೆ ರದ್ದು ಮಾಡುವುದಕ್ಕೆ ಕೇಂದ್ರ ಸರ್ಕಾರ ಹಿಂದೇಟು ಹಾಕಿದೆ.

- Advertisement -

ದೇಶದಲ್ಲಿ ಭಾರೀ ವಿವಾದ ಎಬ್ಬಿಸಿರುವ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದವು ದಿನದಿಂದ ದಿನಕ್ಕೆ ಒಂದೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ನಡುವೆ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ, ಆರ್‌ಎಸ್‌ಎಸ್‌ ಹಾಗೂ ಎನ್‌ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದರ ಬೆನ್ನಲ್ಲೇ ಇಂದು ಸಂಜೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, “ನೀಟ್ ಪರೀಕ್ಷೆಯನ್ನು ರದ್ದುಗೊಳಿಸುವ ಯಾವುದೇ ನಿರ್ಧಾರವಿಲ್ಲ. ನೀಟ್‌ನಲ್ಲಿನ ಅಕ್ರಮಗಳು ಮತ್ತು ಯುಜಿಸಿ-ನೆಟ್ ಪರೀಕ್ಷೆ ರದ್ದತಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿ ಸರ್ಕಾರದ ಮೊದಲ ಆದ್ಯತೆಯಾಗಿದೆ” ಎಂದು ಹೇಳಿದ್ದಾರೆ.

“ನೀಟ್‌ಗೆ ಸಂಬಂಧಿಸಿ ಪೊಲೀಸ್ ತನಿಖೆ ಪ್ರಗತಿಯಲ್ಲಿದೆ. NEET-UG 2024ಕ್ಕೆ ಸಂಬಂಧಿಸಿದಂತೆ ಲಕ್ಷಗಟ್ಟಲೆ ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ಆಸಕ್ತಿಯಲ್ಲಿ ಇಟ್ಟುಕೊಳ್ಳಬೇಕು. ಪಾಟ್ನಾ ಪೊಲೀಸರು ಪ್ರತ್ಯೇಕ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ನೀಟ್ ಮತ್ತು ಯುಜಿಸಿ ಪ್ರಕರಣಗಳ ಹಿನ್ನೆಲೆಯೇ ಬೇರೆ ಇದೆ. ಯುಜಿಸಿ ನೆಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಡಾರ್ಕ್‌ ನೆಟ್ ಮೂಲಕ ಹಂಚಲಾಗಿದೆ ಎಂದು ತಿಳಿದು ಬಂದ ಹಿನ್ನೆಲೆಯಲ್ಲಿ ನಾವು ರದ್ದು ಮಾಡಿದ್ದೇವೆ” ಎಂದು ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

“ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಲು ಬದ್ಧವಾಗಿದೆ ಎಂದು ನಾನು ಎಲ್ಲರಿಗೂ ಭರವಸೆ ನೀಡಲು ಬಯಸುತ್ತೇನೆ. ಪಾರದರ್ಶಕತೆಯೊಂದಿಗೆ ನಾವು ರಾಜಿ ಮಾಡಿಕೊಳ್ಳುವುದಿಲ್ಲ. NEET ಪರೀಕ್ಷೆಯ ಕುರಿತು ನಾವು ಬಿಹಾರ ಸರ್ಕಾರದಿಂದ ಇನ್‌ಪುಟ್‌ಗಳನ್ನು ಸ್ವೀಕರಿಸಿದ್ದೇವೆ. ಪಾಟ್ನಾ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಮತ್ತು ಅವರು ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ವಿವರವಾದ ವರದಿಯನ್ನು ಕಳುಹಿಸಲಿದ್ದಾರೆ. ದೋಷಗಳು ನಿರ್ದಿಷ್ಟ ಪ್ರದೇಶಕ್ಕೆ ಸೀಮಿತವಾಗಿವೆ ಎಂದು ಪ್ರಾಥಮಿಕ ಮಾಹಿತಿಯು ಸೂಚಿಸುತ್ತದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಿದ್ದೆ ಎಂದಿದ್ದ ಮೋದಿಗೆ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲಾಗುತ್ತಿಲ್ಲ: ರಾಹುಲ್ ಗಾಂಧಿ

“ಶೂನ್ಯ ದೋಷಗಳೊಂದಿಗೆ ಪರೀಕ್ಷೆಗಳನ್ನು ನಡೆಸಲು ನಾವು ಬದ್ಧರಾಗಿದ್ದೇವೆ. ನಮ್ಮ ಸರ್ಕಾರವು 2024 ರಲ್ಲಿ ಮೊದಲ ಬಾರಿಗೆ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಕಾಯಿದೆಯನ್ನು ತಂದಿತ್ತು. ಈ ವಿಷಯದ ಬಗ್ಗೆ ವದಂತಿಗಳನ್ನು ಹಬ್ಬಿಸಬೇಡಿ ಮತ್ತು ರಾಜಕೀಯ ದೃಷ್ಟಿಕೋನದಿಂದ ನೋಡಬೇಡಿ ಎಂದು ನಾನು ವಿಪಕ್ಷ ನಾಯಕರ ಸಹಿತ ಎಲ್ಲರಿಗೂ ವಿನಂತಿಸುತ್ತೇನೆ. ಅಪರಾಧಿಗಳನ್ನು ಪತ್ತೆ ಹಚ್ಚದೇ ಬಿಡುವುದಿಲ್ಲ. ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಲಿದ್ದೇವೆ. ವಿದ್ಯಾರ್ಥಿಗಳ ಭವಿಷ್ಯ ನಮಗೆ ಬಹುಮುಖ್ಯ” ಎಂದು ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...