ನನ್ನ ನಿರ್ಧಾರದಿಂದ ಹಿಂದೆ ಸರಿಯುವ ಮಾತೇ ಇಲ್ಲ: ಕೆ ಎಸ್‌ ಈಶ್ವರಪ್ಪ ಪುನರುಚ್ಚಾರ

Date:

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಸೋಮವಾರ (ಮಾ.18) ಪ್ರಧಾನಿ ನರೇಂದ್ರ ಮೋದಿಯ ಸಮಾವೇಶ ನಡೆಯುತ್ತಿದ್ದು, ಯಾವುದೇ ಕಾರಣಕ್ಕೂ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಮಾಜಿ ಸಚಿವ ಕೆ ಎಸ್​​ ಈಶ್ವರಪ್ಪ ಮತ್ತೆ ಪುನರುಚ್ಚರಿಸಿದ್ದಾರೆ.

- Advertisement -

ಶಿವಮೊಗ್ಗದ ಬೀಳಗಿಯ ರಾಚಟೇಶ್ವರ ಮಠದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಇಂದು ಮಾತನಾಡಿ, “ನನ್ನ ಹೋರಾಟ ಕುಟುಂಬ ರಾಜಕಾರಣ ‌ವಿರುದ್ಧ. ಸಿ ಟಿ ರವಿ, ಬಸನಗೌಡ ಪಾಟೀಲ್​ ಯತ್ನಾಳ್, ನಳೀನ ಕುಮಾರ ಕಟೀಲು ಅವರಿಗೆ ಟಿಕೆಟ್ ನೀಡಿಲ್ಲ. ಪ್ರಧಾನಿ ಮೋದಿಯವರು ಕಾಂಗ್ರೆಸ್ ಪಕ್ಷದ ಕುಟುಂಬ ರಾಜಕಾರಣ ವಿರೋಧ ಮಾಡಿದರು. ಆದರೆ ಕರ್ನಾಟಕದಲ್ಲಿ ಬಿ‌ ಎಸ್​​ ಯಡಿಯೂರಪ್ಪ ಅವರ ಪುತ್ರನಿಗೆ ಟಿಕೆಟ್ ನೀಡಿದ್ದಾರೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

“ಕುಟುಂಬ ರಾಜಕಾರಣ ವಿರೋಧಿಸಿ, ಪಕ್ಷೇತರ ಸ್ಪರ್ಧೆ ಮಾಡುತ್ತಿದ್ದೇನೆ. ಗೆದ್ದು ನರೇಂದ್ರ ಮೋದಿಯವರ ಕೈ ಬಲಪಡಿಸುತ್ತೇನೆ. ಕೇಂದ್ರದ ನಾಯಕರು ದೂರವಾಣಿ ಸಂಪರ್ಕ ಮಾಡಿದರೂ, ಸ್ಪಷ್ಟ ನಿರ್ಧಾರ ಹೇಳಿದ್ದೇನೆ. ಯಾವುದೇ ಕಾರಣಕ್ಕೂ ನನ್ನ ನಿರ್ಧಾರದಿಂದ ಹಿಂದೆ ಸರಿಯಲ್ಲ” ಎಂದರು.

“ಸಂಘ ಪರಿವಾರದ ಪ್ರಮುಖ ಗೋಪಾಲ್​​ ಅಯೋದ್ಯೆಯಿಂದ ಕರೆ ಮಾಡಿ ಮನವೊಲಿಸಲು ಯತ್ನಿಸಿದ್ದಾರೆ. ಅವರಿಗೂ ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ನಾನು ಹಿಂದೆ ಸರಿಯಲ್ಲ ಎಂದಿದ್ದೇನೆ” ಎಂದು ಹೇಳಿದರು.

ದೆಹಲಿಯವರು ಮನವೊಲಿಸುವುದಾದರೆ ಒಲಿಸಲಿ, ನಾನು ಮಾತನಾಡುವುದಿಲ್ಲ ಎಂದು ಬಿ ಎಸ್​ ಯಡಿಯೂರಪ್ಪ ಹೇಳಿದ್ದಾರೆ. ಈ ಮಧ್ಯೆ ಜನರೇ ತೀರ್ಮಾನ ಮಾಡುತ್ತಾರೆ ಎಂದು ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...