ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿ ಹೊಂದಿರುವವರ ಪೈಕಿ ಯಾರು ಆದಾಯ ತೆರಿಗೆ ಕಟ್ಟುವುದಿಲ್ಲವೋ, ಅಂಥವರು ಗೃಹಲಕ್ಷ್ಮಿ ಯೋಜನೆಗೆ ಅರ್ಹರು. ಅವರಿಗೆ ಯೋಜನೆಯ ಹಣ ಮುಂದೆಯೂ ಬರುತ್ತದೆ. ತೆರಿಗೆ ಕಟ್ಟುವವರನ್ನು ಯೋಜನೆಯಿಂದ ಹೊರಗಿಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ 80 ಸಾವಿರ ಬಿಪಿಎಲ್ ಪಡಿತರ ಚೀಟಿಗಳನ್ನು ಎಪಿಎಲ್ ಚೀಟಿಗಳಾಗಿ ಬದಲಿಸಲಾಗಿದೆ. ಈ ಬದಲಾವಣೆಯಲ್ಲಿ ಯಾವುದೇ ಗೊಂದಲ ಇಲ್ಲ. ಎಪಿಎಲ್, ಬಿಪಿಎಲ್ ಪಡಿತರ ಚೀಟಿ ಹೊಂದಿದ ಇಬ್ಬರಿಗೂ ಗೃಹಲಕ್ಷ್ಮಿ ಯೋಜನೆಯಡಿ ಹಣ ದೊರೆಯುತ್ತದೆ” ಎಂದು ಹೇಳಿದ್ದಾರೆ.
ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಸಾವನ್ನಪ್ಪಿದ ವಿಷಯದ ಬಗ್ಗೆ ಮಾತನಾಡಿದ ಹೆಬ್ಬಾಳ್ಕರ್, “ಬಿಮ್ಸ್ ಆಸ್ಪತ್ರೆಯ ಎಲ್ಲ ವ್ಯವಸ್ಥೆಗಳಯೂ ಬದಲಾವಣೆ ತರಬೇಕಿದೆ. ಈ ಬಗ್ಗೆ ಮೊದಲಿನಿಂದಲೂ ಹೇಳುತ್ತಿದ್ದೇನೆ. ಮತ್ತೊಮ್ಮೆ ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸುತ್ತೇವೆ” ಎಂದಿದ್ದಾರೆ.