ಸದ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ: ಮಾಜಿ ಸಚಿವ ಆರ್‌ ಅಶೋಕ

Date:

  • ಡಿಕೆ ಶಿವಕುಮಾರ್‌ ಕಿರಿಕಿರಿ ಬೀದಿಗೆ ಬಂದರೆ ಈ ಸರ್ಕಾರ ಬೀಳಲಿದೆ
  • ಜುಲೈ 3ರಂದು ವಿಪಕ್ಷ ನಾಯಕನ ಬಗ್ಗೆ ಘೋಷಣೆ ಮಾಡುತ್ತಾರೆ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಲ್ಲಿ ನಳಿನ್ ಕುಮಾರ್ ಕಟೀಲ್ ಇನ್ನೂ ಇದ್ದಾರೆ. ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಇಲ್ಲ ಎಂದು ಮಾಜಿ ಸಚಿವ ಆರ್ ಅಶೋಕ ಹೇಳಿದರು.

- Advertisement -

ಚಿಕ್ಕಮಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸೋಮಣ್ಣ ಹೇಳಿಕೆ ನನಗೆ ಗೊತ್ತಿಲ್ಲ, ರಾಜ್ಯಾಧ್ಯಕ್ಷರ ಸ್ಥಾನ ಖಾಲಿ ಇಲ್ಲ. ಸದ್ಯಕ್ಕೆ ಅವರನ್ನು ತೆಗೆಯುವ ಸಂದರ್ಭ ಕಾಣುತ್ತಿಲ್ಲ. ಲೋಕಸಭಾ ಚುನಾವಣೆ ಇದೆ. ರಾಷ್ಟ್ರಾಧ್ಯಕ್ಷರ ತೀರ್ಮಾನ ಗೊತ್ತಿಲ್ಲ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ನನ್ನ ಬಳಿ ಯಾವ ಮಾಹಿತಿಯೂ ಇಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ-ನೀಡಿಲ್ಲ ಎಂಬ ನಳಿನ್‌ ಕುಮಾರ್‌ ಕಟೀಲ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, “ನಮ್ಮದು ರಾಷ್ಟ್ರೀಯ ಪಕ್ಷ, ದೆಹಲಿಯಲ್ಲಿ ಅಂಗೀಕಾರ ಮಾಡಬೇಕಲ್ಲವೇ? ಲೋಕಸಭೆ ಚುನಾವಣೆಯಿದೆ, ಈಗ ಬದಲಾವಣೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು ಚರ್ಚಿಸುತ್ತಾರೆ. ಅಲ್ಲಿಯರೆಗೆ ರಾಜ್ಯಾಧ್ಯಕ್ಷರ ಪದವಿ ಖಾಲಿ ಇಲ್ಲ” ಎಂದು ಸ್ಪಷ್ಟನೆ ನೀಡಿದರು.

ಇದೇ ವೇಳೆ ವಿಪಕ್ಷ ನಾಯಕನ ಆಯ್ಕೆಯ ಬಗ್ಗೆ ಮಾತನಾಡಿದ ಅಶೋಕ್, “ಜುಲೈ 3ರಂದು ವಿಪಕ್ಷ ನಾಯಕನ ಬಗ್ಗೆ ಘೋಷಣೆ ಮಾಡುತ್ತಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ನಳಿನ್‍ಕುಮಾರ್ ಕಟೀಲ್‌

“ಡಿ ಕೆ ಶಿವಕುಮಾರ್ ಸಿಎಂ ಅಲ್ಲ, ಆಕ್ಟಿಂಗ್ ಸಿಎಂ ರೀತಿ ಮಾಡುತ್ತಿದ್ದಾರೆ. ಡಿಕೆಶಿ ಅವರದ್ದು ಒಂದು ರೀತಿ ಅತಿರೇಕದ ನಡೆ. ಸಿದ್ದರಾಮಯ್ಯ ಬಿಟ್ಟುಕೊಡಲ್ಲ, ನನಗೆ ಸಿಎಂ ಸ್ಥಾನ ಸಿಗುವುದಿಲ್ಲ ಎನ್ನುವ ಗ್ಯಾರಂಟಿಯಿದೆ. ನಾನೇ ಸಿಎಂ ಎಂದು ಸಿದ್ದರಾಮಯ್ಯ ದೆಹಲಿಯಲ್ಲಿ ಹೇಳಿದ್ದಾರೆ. ಇದೇನು ಸಮ್ಮಿಶ್ರ ಸರ್ಕಾರವೇ ಎಂದು ಯಾರಿಗೆ ಹೇಳಿದ್ದಾರೆ, ಅದು ಡಿಕೆಶಿಗೆ ಹೇಳಿದ್ದು ಎಂದು ಜಗಜ್ಜಾಹೀರು” ಎಂದು ಅಶೋಕ್ ಹೇಳಿದರು.

“ಡಿಕೆ ಶಿವಕುಮಾರ್ ಈಗಿನಿಂದಲೇ ಓವರ್‌ಟೇಕ್‌ ಮಾಡಿ ಏನಾದರೂ ಕಿರಿಕಿರಿ ಮಾಡಲು ಹೊರಟರೆ, ಕಿರಿಕಿರಿ ಬೀದಿಗೆ ಬಂದರೆ ಈ ಸರ್ಕಾರ ಬಿದ್ದು ಹೋಗುತ್ತದೆ. ಸಿಎಂ ಆದವರು ಹಿಂದಿನ ಸಿಎಂರನ್ನು ಭೇಟಿ ಮಾಡುವುದು ಮಾಮೂಲಿ. ನಾನು ಡಿಸಿಎಂ ಆಗಿದ್ದೆ, ಆದರೆ ಮಾಜಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿಲ್ಲ” ಎಂದು ಅಶೋಕ್ ಕುಟುಕಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...