ಇ.ಡಿ ದಾಳಿ ಮಾಡುವ ಅಗತ್ಯವೇ ಇರಲಿಲ್ಲ: ಡಿ ಕೆ ಶಿವಕುಮಾರ್

Date:

Advertisements

ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಬಸವರಾಜ ದದ್ದಲ್ ವಿರುದ್ಧ ಇ.ಡಿಗೆ ಯಾರೂ ದೂರು ನೀಡಿಲ್ಲ. ಆದರೂ ದಾಳಿ ನಡೆದಿದೆ. ನನ್ನ ಪ್ರಕಾರ ದಾಳಿಯ ಅಗತ್ಯವೇ ಇರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಮಾತನಾಡಿ, “ಬಿಜೆಪಿ ನಾಯಕ ಎನ್ ಆರ್ ರಮೇಶ್ ದೂರು ಆಧಾರದಲ್ಲಿ ದಾಳಿ ಮಾಡಲು ಆಗಲ್ಲ. ಸಿಬಿಐಗೆ ದಾಳಿ ಅಧಿಕಾರ ಇದೆ. ಈಗಾಗಲೇ ಎಸ್ ಐ ಟಿ ವಿಚಾರಣೆ ನಡೆಯುತ್ತಿದೆ. ಪಾರದರ್ಶಕ ತನಿಖೆ ನಡೆಸಲು ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ” ಎಂದರು.

“ಲೋಕಸಭಾ ಚುನಾವಣೆಯಲ್ಲಿ ಎಲ್ಲಿ ಎಡವಿದ್ದೇವೆ ಎಂದು ತಿಳಿದುಕೊಳ್ಳಲು ಸತ್ಯಶೋಧನಾ ಸಮಿತಿ ರಾಜ್ಯಕ್ಕೆ ಬಂದಿದೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 9 ಸ್ಥಾನ ಪಡೆದುಕೊಂಡಿದ್ದೇವೆ. ನಮಗೆ 14 ರಿಂದ 15 ಸೀಟು ನಿರೀಕ್ಷೆ ಇತ್ತು. ಎಲ್ಲಿ ಎಡವಿದ್ದೇವೆ ಎಂಬುದನ್ನು ತಿಳಿದುಕೊಳ್ಳಲು ಸತ್ಯಶೋಧನಾ ಸಮಿತಿ ಬಂದಿದೆ” ಎಂದರು.

Advertisements

“ಲೋಕಸಭಾ ಚುನಾವಣಾ ಹಿನ್ನಡೆಯ ಬಗ್ಗೆ, ನಾನು ಸಿಎಂ ಪ್ರತ್ಯೇಕವಾಗಿ ಚರ್ಚೆ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಪ್ರತ್ಯೇಕ ವಿಚಾರ ವಿನಿಮಯ ಮಾಡುತ್ತೇವೆ. ನಾವು ಉತ್ತಮ ಅಭ್ಯರ್ಥಿ ಹಾಕಿದ್ದೆವು, ಒಗ್ಗಟ್ಟಿನಿಂದ ಕೆಲಸ ಮಾಡಿದ್ದೆವು. ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ವರ್ಕೌಟ್ ಆಗಿದೆ. ಮುಂದಿನ ದಿನಗಳಲ್ಲಿ ಏನು ಮಾಡಬೇಕೆಂದು ಸಿದ್ದತೆ ಮಾಡುತ್ತೇವೆ” ಎಂದು ಹೇಳಿದರು.

“ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ, ಎಲ್ಲ ರಾಜ್ಯಗಳ ಒಂದು ತಂಡ ಹೋಗಿದೆ. ಎಲ್ಲಿ ಏನು ಸಮಸ್ಯೆ ಆಗಿದೆ, ಯಾವ ರೀತಿಯಲ್ಲಿ ಸರಿಪಡಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಸಮಿತಿ ಕಳಿಸಿದ್ದಾರೆ. ಎಲ್ಲರೂ ಇಲ್ಲಿ ಬರಲು ಸಾಧ್ಯವಾಗದೆ ಇರುವುದರಿಂದ ನಾನೂ ನಾಲ್ಕು ಜಿಲ್ಲೆಗೆ ತಂಡ ಕಳಿಸಿದ್ದೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

Download Eedina App Android / iOS

X