ರಾಜ್ಯಸಭಾ ಚುನಾವಣೆ | ನಮ್ಮಿಂದ ಯಾವುದೇ ಅಡ್ಡ ಮತದಾನ ನಡೆಯಲ್ಲ: ಡಿ ಕೆ ಶಿವಕುಮಾರ್ ‘ಗ್ಯಾರಂಟಿ’

Date:

ನಾಳೆ ಅಂದರೆ ಫೆಬ್ರವರಿ 27ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಹಿಲ್ಟನ್ ಹೊಟೇಲ್‌ನಲ್ಲಿ ಇಂದು (ಸೋಮವಾರ) ರಾತ್ರಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಯಿತು.

- Advertisement -

ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್, “ನಮ್ಮ ಕಡೆಯಿಂದ ಯಾವುದೇ ಅಡ್ಡ ಮತದಾನ ನಡೆಯುವುದಿಲ್ಲ” ಎಂದು ಗ್ಯಾರಂಟಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಇಂದು ಹೋಟೆಲ್ ನಲ್ಲಿ ನಮ್ಮ ಶಾಸಕರಿಗೆ ರಾಜ್ಯಸಭೆ ಚುನಾವಣೆ ಮತದಾನದ ತರಬೇತಿ ಹಾಗೂ ಅಣಕು ಮತದಾನ ಮಾಡಿಸುತ್ತೇವೆ. ಇಂದು ಅಣಕು ಮತದಾನ ನಡೆಸಿ, ನಾಳೆ ಹೊಟೇಲ್‌ನಿಂದ ನೇರವಾಗಿ ವಿಧಾನಸೌಧಕ್ಕೆ ತೆರಳಿ ನಮ್ಮ ಶಾಸಕರು ಮತದಾನ ಮಾಡಲಿದ್ದಾರೆ” ಎಂದು ತಿಳಿಸಿದರು.

ನಾಳೆ ಮತದಾನದ ವೇಳೆ ಅಡ್ಡ ಮತದಾನ ನಡೆಯಲಿದೆಯೇ ಎಂದು ಕೇಳಿದಾಗ, “”ನಮ್ಮ ಕಡೆಯಿಂದ ಯಾವುದೇ ಅಡ್ಡ ಮತದಾನ ನಡೆಯುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

clp

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಉ ಆರಂಭದಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ಎರಡು ನಿಮಿಷ ಮೌನಾಚಾರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸಭೆಯ ಸಿಎಂ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಚಿವರಾದ ಎಚ್ ಕೆ ಪಾಟೀಲ್, ಡಾ.ಜಿ. ಪರಮೇಶ್ವರ್, ಕೆ ಜೆ ಜಾರ್ಜ್, ಕೆ ಎಚ್ ಮುನಿಯಪ್ಪ, ದಿನೇಶ್ ಗುಂಡೂರಾವ್, ಆರ್.ವಿ. ದೇಶಪಾಂಡೆ, ಬೋಸರಾಜ್, ರಾಜ್ಯಸಭೆ ಚುನಾವಣೆ ಅಭ್ಯರ್ಥಿ ಅಜಯ್ ಮಾಕನ್, ಶಾಸಕರು, ಎಂಎಲ್‌ಸಿಗಳು, ಸಂಸದರು, ಪದಾಧಿಕಾರಿಗಳು ಇದ್ದರು.

 

ಕುತೂಹಲಕ್ಕೆಡೆ ಮಾಡಿದ ಕುಪೇಂದ್ರ ರೆಡ್ಡಿ ಸ್ಪರ್ಧೆ

ಫೆಬ್ರವರಿ 27ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಕಾಂಗ್ರೆಸ್‌ನ ಹಿರಿಯ ಮುಖಂಡ ಅಜಯ್ ಮಾಕನ್, ಡಾ. ಸೈಯ್ಯದ್ ನಾಸೀರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅಭ್ಯರ್ಥಿಗಳಾಗಿದ್ದಾರೆ.

66 ಶಾಸಕರನ್ನು ಹೊಂದಿರುವ ಬಿಜೆಪಿಯು ತನ್ನ ಏಕೈಕ ಅಭ್ಯರ್ಥಿಯಾಗಿ ಬಾಗಲಕೋಟೆ ಮೂಲದ ಸಂಘಪರಿವಾರದ ಕಟ್ಟಾಳು ನಾರಾಯಣ ಬಾಂಡಗೆ ಟಿಕೆಟ್ ನೀಡಿದೆ. ಅವರು ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿವೆ. ಏಕೆಂದರೆ, ಒಬ್ಬರು ಗೆಲ್ಲಲು 45 ಮತಗಳು ಬೇಕಾಗುತ್ತವೆ ಆದ್ದರಿಂದ, ಅವರ ಗೆಲುವು ನಿಸ್ಸಂಶಯವಾಗಿದೆ.

ಬಿಜೆಪಿ-ಜೆಡಿಎಸ್ ಮೈತ್ರಿ ಪ್ರತಿಷ್ಠೆಯನ್ನು ಪಣಕ್ಕಿಟ್ಟಿದೆ. ರಾಜ್ಯಸಭೆಯ ಮಾಜಿ ಸದಸ್ಯ, ಜೆಡಿಎಸ್‌ನ ಕುಪೇಂದ್ರ ರೆಡ್ಡಿ ಅವರು ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ರಾಜ್ಯದಿಂದ ರಾಜ್ಯಸಭೆಗೆ ನಡೆಯಲಿರುವ ನಾಲ್ಕು ಸ್ಥಾನಗಳ ಚುನಾವಣೆಗೆ ಕುಪೇಂದ್ರ ರೆಡ್ಡಿ 5ನೇ ಅಭ್ಯರ್ಥಿಯಾಗಿದ್ದಾರೆ.

ಇದನ್ನು ಓದಿದ್ದೀರಾ? ರಾಜ್ಯಸಭಾ ಚುನಾವಣೆ: ಬಿಜೆಪಿ-ಜೆಡಿಎಸ್‌ ಅಭ್ಯರ್ಥಿಗೆ 45 ಮತ ಗಳಿಸುವುದೇ ಸವಾಲು

ಬಿಜೆಪಿಯಲ್ಲಿ ಉಳಿಯುವ 19 ಮತಗಳನ್ನು ಕುಪೇಂದ್ರ ರೆಡ್ಡಿ ಅವರಿಗೆ ನೀಡಲಾಗುತ್ತದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಜೆಡಿಎಸ್‌ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ರೆಡ್ಡಿಗೆ ಅಗತ್ಯ ಮತಗಳನ್ನು ಹೊಂದಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಕೆಲವು ಅನಿಶ್ಚಿತತೆಗಳು ಎದುರಾಗಿದ್ದು, ಬಿಜೆಪಿಯ ಎಸ್‌.ಟಿ ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಸೇರಿದಂತೆ ಬಿಜೆಪಿಯೊಳಗಿನ ಕೆಲವು ‘ಅತೃಪ್ತರು’ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಅವರು ಬಿಜೆಪಿಯ ಹೈಕಮಾಂಡ್ ಸೂಚನೆಗೆ ಮಣಿಯುತ್ತಾರೆಯೇ ಮತ್ತು ಕುಪೇಂದ್ರ ರೆಡ್ಡಿ ಅವರನ್ನು ಬೆಂಬಲಿಸುತ್ತಾರೆಯೇ ಎಂಬುದನ್ನು ಕಾದುನೋಡಬೇಕಿದೆ. ಜೆಡಿಎಸ್‌ನ ಕೆಲವು ಮತಗಳು ಕಾಂಗ್ರೆಸ್‌ಗೆ ಬೀಳುವ ಸಾಧ್ಯತೆಗಳಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...