ಕಾಂಗ್ರೆಸ್‌ನ 1.25 ಲಕ್ಷ ಬೇಕೋ ಅಥವಾ ಬಿಜೆಪಿಯ ಖಾಲಿ ಚೊಂಬು ಬೇಕೋ ಯೋಚಿಸಿ: ಸಿಎಂ ಸಿದ್ದರಾಮಯ್ಯ

Date:

ಖಾಲಿ ಚೊಂಬಿಗೆ ಮತ ಹಾಕಿ ಹಾಳು ಮಾಡಿಕೊಳ್ತೀರೋ, ನಿಮ್ಮ ಬದುಕಿಗೆ ಸ್ಪಂದಿಸಿ ನಿಮ್ಮ ಜೇಬಿಗೆ ಶಕ್ತಿ ತುಂಬುವ ಗ್ಯಾರಂಟಿ ಕಾಂಗ್ರೆಸ್ಸಿಗೆ ಮತ ಹಾಕ್ತೀರೋ ನಿರ್ಧರಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಬೃಹತ್ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.

“ರಾಜ್ಯ ಸರ್ಕಾರ ಮಹಿಳೆಯರಿಗೆ ಕೊಡುತ್ತಿರುವ ವಾರ್ಷಿಕ 24 ಸಾವಿರ ರೂಪಾಯಿ ಜತೆಗೆ ರಾಷ್ಟ್ರೀಯ ಕಾಂಗ್ರೆಸ್ ನಿಂದ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಕೊಡುವ ಘೋಷಣೆ ಮಾಡಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸಹಿ ಹಾಕಿದ್ದಾರೆ. ಜತೆಗೆ ಇಡೀ ದೇಶದ ರೈತರ ಸಾಲ ಸಂಪೂರ್ಣ ಮನ್ನಾ, ನಿರುದ್ಯೋಗಿ ಯುವಕರ ಖಾತೆಗೆ ಲಕ್ಷ ರೂಪಾಯಿ ಹಾಕುವ ಗ್ಯಾರಂಟಿ ನಾವು ನೀಡಿದ್ದೇವೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಾಜಪೇಯಿಯವರ ಇಂಡಿಯಾ ಶೈನಿಂಗ್ ಎನ್ನುವ ಸುಳ್ಳು ಪ್ರಚಾರ ಸೋತ ಹಾಗೆಯೇ ಮೋದಿಯವರ ವಿಕಸಿತ ಭಾರತ ಎನ್ನುವ ಸುಳ್ಳಿನ ಪ್ರಚಾರಕ್ಕೂ ಸೋಲಾಗುತ್ತದೆ. ಹತ್ತತ್ತು ವರ್ಷ ಪ್ರಧಾನಿಯಾಗಿ ಮೋದಿಯವರು ಭಾರತೀಯರಿಗೆ ಸರಣಿ ಸುಳ್ಳುಗಳನ್ನು ನಂಬಿಸಿ ವಂಚಿಸಿದರು. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕ್ತೀವಿ ಎಂದು ನಂಬಿಸಿದರು. ಈಗ ನಂಬಿಕೆ ದ್ರೋಹ ಆಗಿದೆ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸ್ತೀವಿ ಎಂದು ದೇಶದ ಯುವಕ/ ಯುವತಿಯರನ್ನು ನಂಬಿಸಿದರು. ವಿದ್ಯಾವಂತರು ಡಬ್ಬಲ್ ಡಿಗ್ರಿ ಪಡೆದು ಉದ್ಯೋಗ ಕೊಡಿ ಎಂದರೆ ಹೋಗಿ ಪಕೋಡ ಮಾರಾಟ ಮಾಡಿ ಎನ್ನುತ್ತಿದ್ದಾರೆ. ಇಂಥಾ ನಂಬಿಕೆ ದ್ರೋಹಗಳು ಪ್ರಧಾನಿ ಕುರ್ಚಿಗೆ ಘನತೆ ತರುತ್ತದೆಯೇ” ಎಂದು ಪ್ರಶ್ನಿಸಿದರು.

“ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ನಂಬಿಸಿ ರೈತರ ಖರ್ಚು ಮೂರು ಪಟ್ಟು ಮಾಡಿದರು. ಇದು ದೇಶದ ಇಡಿ ದೇಶದ ರೈತ ಕುಲಕ್ಕೆ ಬಗೆದ ನಂಬಿಕೆ ದ್ರೋಹ ಅಲ್ಲವೇ? ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ ಬೆಲೆ ಏರಿಕೆ ಸಂಪೂರ್ಣ ತಡೆಯುವುದಾಗಿ ನಂಬಿಸಿದರು. ಈಗ ಎಲ್ಲದರ ಬೆಲೆ ಆಕಾಶ ಮುಟ್ಟಿದೆ. ಇಂಥಾ ನಂಬಿಕೆ ದ್ರೋಹಗಳನ್ನು ಭಾರತೀಯರಿಗೆ ಬಗೆದಿದ್ದಾರಲ್ಲಾ ಇಂಥಾ ವ್ಯಕ್ತಿಯ ಮುಖ ನೋಡಿ ಮತ ಹಾಕಿದರೆ ನಿಮ್ಮ ಮತಕ್ಕೆ ಘನತೆ ಬರುತ್ತದಾ” ಎಂದರು.

ದೇವೇಗೌಡರ ಸುಳ್ಳು ಕೇಳಿ ನನಗೇ ನಾಚಿಕೆ ಆಯ್ತು

“ಮೋದಿಯವರ ಜತೆ ಪೈಪೋಟಿಗೆ ಬಿದ್ದವರಂತೆ ದೇವೇಗೌಡರು ಹೇಳಿದ ಸುಳ್ಳುಗಳನ್ನು ಕೇಳಿ ನನಗೇ ನಾಚಿಕೆ ಆಯ್ತು. ದೇವೇಗೌಡರು ಮೋದಿಯವರ ಮಟ್ಟಕ್ಕೆ ಇಳಿದು ಸುಳ್ಳು ಹೇಳಿದ್ರಲ್ಲಾ ಅಂತ ನನಗೇ ನಾಚಿಕೆ ಆಯ್ತು. ಮೋದಿಯವರು ರಾಜ್ಯದ ಜನತೆಗೆ ಕೊಟ್ಟ ಖಾಲಿ ಚೊಂಬನ್ನು ದೇವೇಗೌಡರು ಅಕ್ಷಯ ಪಾತ್ರೆ ಎಂದು ಸುಳ್ಳು ಹೇಳಿದ್ದಾರೆ. ಚೊಂಬು ಅಕ್ಷಯ ಪಾತ್ರೆ ಆಗಿದ್ದರೆ ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಕೊಡಲು ಏಕೆ ಸಾಧ್ಯವಾಗಲಿಲ್ಲ? ರೈತರ ಸಾಲ ಏಕೆ ಮನ್ನಾ ಮಾಡಲಿಲ್ಲ” ಎಂದು ಪ್ರಶ್ನಿಸಿದರು.

“ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಇಡೀ ದೇಶದ ರೈತರ ಸಾಲ 76 ಸಾವಿರ ಕೋಟಿ ರೂಪಾಯಿಯನ್ನು ಒಂದೇ ಸಾರಿ ಮನ್ನಾ ಮಾಡಿದರು. ಮೋದಿಯವರು 15 ಲಕ್ಷ ಕೋಟಿ ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ ಮಾಡಿದರು. ಹೀಗಾಗಿ ಮೋದಿಯವರು ರಾಜ್ಯದ, ದೇಶದ ಮಧ್ಯಮ ವರ್ಗ ಮತ್ತು ಬಡವರ ಕೈಗೆ ಖಾಲಿ ಚೊಂಬು ಕೊಟ್ಟರು. ಶ್ರೀಮಂತ ಉದ್ಯಮಿಗಳ ಪಾಲಿಗೆ ಅಕ್ಷಯ ಪಾತ್ರೆ ಆದರು. ಈ ಸತ್ಯ ದೇವೇಗೌಡರಿಗೆ ಗೊತ್ತಿದ್ದೂ ಏಕೆ ರಾಜ್ಯದ ಜನರಿಗೆ ಸುಳ್ಳು ಹೇಳಿದರು?” ಎಂದು ಕುಟುಕಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ: ಮುಖ್ಯ ಚುನಾವಣಾ ಆಯುಕ್ತ

ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್...

ಮೈಸೂರು: ಮೇಕೆ ಮೇಯಿಸುತ್ತಿದ್ದ ಮಹಿಳೆ ಹೊತ್ತೊಯ್ದ ಹುಲಿ

ಮೇಕೆಗಳನ್ನು ಮೇಯಿಸುತ್ತಿದ್ದಾಗ ಹುಲಿ ಯೊಂದು ಹಠಾತ್ ದಾಳಿ ನಡೆಸಿ ಮಹಿಳೆಯನ್ನು ಹೊತ್ತೊಯ್ದ...

ಹಾಸನದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ 6 ಜನರ ಸಾವು

ಇಂದು ಮುಂಜಾನೆ ಹಾಸನ ಹೊರವಲಯದ ಕಂಡ್ಲಿ ಈಚನಹಳ್ಳಿ ಗ್ರಾಮ ಬಳಿಯ ಬೆಂಗಳೂರು-ಮಂಗಳೂರು...

ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ...