ರೈತರೊಂದಿಗೆ ಉದ್ದಿಮೆದಾರರಿಂದ ನೇರ ಖರೀದಿ ವ್ಯವಸ್ಥೆಗೆ ಚಿಂತನೆ: ಸಚಿವ ಚಲುವರಾಯಸ್ವಾಮಿ

Date:

ಕೃಷಿ ನವೋದ್ಯಮಗಳ ಪ್ರೋತ್ಸಾಹ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಸದಾ ಸಿದ್ದವಿದೆ. ರೈತರೊಂದಿಗೆ ಉದ್ದಿಮೆದಾರರ ನೇರ ಖರೀದಿ ವ್ಯವಸ್ಥೆ ಮಾಡಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ರಾಜ್ಯದಲ್ಲಿ ಸ್ಥಾಪಿಸಲಾಗಿರುವ ಪುಡ್ ಪಾರ್ಕ್‌ಗಳ ಪುನಶ್ಚೇತನ ಹಾಗೂ ಸಿರಿಧಾನ್ಯಗಳಿಗೆ ಸಂಬಂಧಿತ ಕಾರ್ಯಾಚರಣೆಯಲ್ಲಿರುವ ಸ್ಟಾರ್ಟ್ ಅಪ್ ಉದ್ಯಮಗಳಿಗೆ ಇಲಾಖೆ ಸಹಭಾಗಿತ್ವದಲ್ಲಿ ರೈತರೊಂದಿಗೆ ಸಂಪರ್ಕಿಸುವ ಕುರಿತು ಸಭೆಯಲ್ಲಿ ಅವರು ಮಾತನಾಡಿದರು.

ಸಭೆಯಲ್ಲಿ ಕೃಷಿ ನವೋದ್ಯಮಗಳ ಸ್ಥಿತಿಗತಿ, ಅವುಗಳು ಎದುರಿಸುತ್ತಿರುವ ಸವಾಲುಗಳು, ಸಿರಿಧಾನ್ಯ ಆಧಾರಿತ ಉದ್ಯಮಗಳನ್ನು ಬಲ ಪಡಿಸಲು ಅಗತ್ಯ ಇರುವ ಸರ್ಕಾರದ ನೆರವಿನ ಕುರಿತು ಕೃಷಿ ಸಚಿವರು ಸ್ಟಾರ್ಟಪ್ ಉದ್ಯಮಿಗಳ ಅಭಿಪ್ರಾಯ ಆಲಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸಿರಿ ಧಾನ್ಯ ಬೇಡಿಕೆ ಹೆಚ್ಚಿದ್ದರೂ ಪೂರೈಕೆ ಕೊರತೆ ಇದೆ. ಹಾಗಾಗಿ ಪ್ರೋತ್ಸಾಹ ಧನ ಯೋಜನೆ ಮುಂದುವರೆಸುವ ಜೊತೆಗೆ ಉತ್ಪಾದನೆಯನ್ನು 30 ಸಾವಿರದಿಂದ 50 ಸಾವಿರ ಹೆಕ್ಟೇರ್‌ಗೆ ಏರಿಕೆ ಮಾಡಲು ಸೂಕ್ತ ಯೋಜನೆ ರೂಪಿಸಿ” ಎಂದು ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಸೂಚಿಸಿದರು.

“ರೈತರೊಂದಿಗೆ ಉದ್ದಿಮೆದಾರರ ನೇರ ಖರೀದಿ ವ್ಯವಸ್ಥೆ ಮಾಡಿಸುವ ಬಗ್ಗೆ ಚಿಂತನೆ ನಡೆಸಿ. ರಾಜ್ಯಾದ್ಯಂತ ಇರುವ ಎಫ್ ಪಿ ಓ ಗಳ ಜೊತೆ ಉದ್ದಿಮೆದರರ ಸಂಪರ್ಕ ಕಲ್ಪಿಸಿ. ಪ್ರತಿ ಜಿಲ್ಲೆಯಲ್ಲೂ 2 ದಿನಗಳ ಸಿರಿಧಾನ್ಯ ಮೇಳ ಏರ್ಪಡಿಸುವ ಜೊತೆಗೆ ವಿದೇಶದಲ್ಲಿ ನಡೆಯುವ ಆಹಾರ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಗಳಲ್ಲಿ ರಾಜ್ಯದಿಂದ ಮಳಿಗೆ ಹಾಕಲು ಸಹ ನೆರವು ಒದಗಿಸಲಾಗುವುದು” ಎಂದು ಸಚಿವರು ಭರವಸೆ ನೀಡಿದರು .

“ಪ್ರಸಕ್ತ ಮಿಲೆಟ್ ಪೌಡರ್‌ಗಳಿಗೆ ಜಿ.ಎಸ್.ಟಿ ಯನ್ನು ಶೇ18ರಿಂದ 5ಕ್ಕೆ ಇಳಿಕೆ ಮಾಡಿರುವಂತೆ ಇದನ್ನು ಇತರ ಮೌಲ್ಯವರ್ಧಿತ ಕೃಷಿ ಆಹಾರ ಉತ್ಪನ್ನಗಳಿಗೂ ವಿಸ್ತರಿಸಬೇಕು ಎಂದು ನವೋದ್ಯಮಿಗಳು ಮನವಿ ಮಾಡಿದ್ದು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪೂರಕ ಪ್ರಸ್ತಾವನೆ ಕಳಿಸಲಾಗುವುದು” ಎಂದು ಸಚಿವರು ತಿಳಿಸಿದರು.

“ಮಿಲೆಟ್ ಆಹಾರ ಉತ್ಪಾದಕರಿಗೆ ತಂತ್ರಜ್ಞಾನ ವಿಸ್ತರಣೆ ಜೊತೆಗೆ ಧೀರ್ಘಾವದಿಗೆ ಆಹಾರ ಪದಾರ್ಥ ಸಂಸ್ಕರಣೆಗೆ ಸಿಎಫ್ ಟಿ ಆರ್ ಐ ಮೂಲಕ ನೆರವು ಒದಗಿಸಲು ಸೂಕ್ತ ಕ್ರಮಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ರಾಜ್ಯ ಸರ್ಕಾರದ ಅಭಿವೃದ್ಧಿ ಆಯುಕ್ತರು ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಅನ್ಬುಕುಮಾರ್, ಕೃಷಿ ಆಹಾರ ಸಂಸ್ಕರಣೆ ಮತ್ತು‌ ಕಟಾವು ತಂತ್ರಜ್ಞಾನದ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರ ಬಜೆಟ್‌ | ಕರ್ನಾಟಕಕ್ಕಿಲ್ಲ ವಿಶೇಷ ಯೋಜನೆ; ಆಯವ್ಯಯದ ಮುಖ್ಯಾಂಶಗಳು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ (ಜುಲೈ 23)ರಂದು...

ಸಿಎಂ ಸಿದ್ದರಾಮಯ್ಯ ಮನೆಗೆ ಹೋಗುವ ಕಾಲ ಬಂದಿದೆ: ಛಲವಾದಿ ನಾರಾಯಣಸ್ವಾಮಿ

ಸಿಎಂ ಸಿದ್ದರಾಮಯ್ಯ ಅವರನ್ನು ರಕ್ಷಿಸಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ನಾಯಕರೂ ಏನೂ...

ಕೇಂದ್ರ ಬಜೆಟ್ | ಬಿಹಾರ ರಸ್ತೆಗಳಿಗೆ ₹26,000 ಕೋಟಿ; ಶಿಕ್ಷಣ, ಉದ್ಯೋಗ, ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ

ಮೂರನೇ ಅವಧಿಗೆ ಸರ್ಕಾರ ರಚಿಸಿರುವ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ...

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ವಿಶೇಷ ಕೋರ್ಟ್‌ ಸ್ಥಾಪನೆಯಲ್ಲಿ ವಿಳಂಬ; ಹೈಕೋರ್ಟ್‌ ಅಸಮಾಧಾನ

ಸಂಶೋಧಕ ಎಂ.ಎಂ ಕಲ್ಬುರ್ಗಿ ಮತ್ತು ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ...