ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ

Date:

  • ಬೊಮ್ಮನಹಳ್ಳಿಯಿಂದ ಉಮಾಪತಿ ಶ್ರೀನಿವಾಸ ಗೌಡ
  • ಕೋಲಾರ ಕ್ಷೇತ್ರದಿಂದ ಹಿಂದೆ ಸರಿ ಸಿದ್ದರಾಮಯ್ಯ

ರಾಜ್ಯ ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

- Advertisement -

ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ಈಗಾಗಲೇ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇದೀಗ 43 ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ನಿರೀಕ್ಷೆಯಂತೆಯೇ ಅಥಣಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಾರೆ ಎನ್ನಲಾಗಿದ್ದ ಕೋಲಾರದಿಂದ ಡಿ ಕೆ ಶಿವಕುಮಾರ್ ಅವರ ಆಪ್ತ ಕೊತ್ತೂರು ಮಂಜುನಾಥ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ.

ಜೆಡಿಎಸ್ ತೊರೆದು ‘ಕೈ’ ಹಿಡಿದಿದ್ದ ಶಿವಲಿಂಗೇಗೌಡ ಅವರಿಗೆ ಅರಸೀಕೆರೆ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ರಾಯಭಾಗ ಬೆಳಗಾವಿ ಉತ್ತರ ಕ್ಷೇತ್ರದಿಂದ ಆಸೀಫ್‌ ಸೇಠ್ ಅವರಿಗೆ ಟಿಕೆಟ್ ನೀಡಲಾಗಿದೆ.

ಕಲಬುರಗಿ ಗ್ರಾಮೀಣ ಕ್ಷೇತ್ರದಿಂದ ರೇವು ನಾಯ್ಕ್‌ ಬೆಳಮಗಿ, ಮಾನ್ವಿ ಎಸ್‌ಟಿ ಮೀಸಲು ಕ್ಷೇತ್ರದಿಂದ ಹಂಪಯ್ಯ ನಾಯಕ, ಬೊಮ್ಮನಹಳ್ಳಿಯಿಂದ ಉಮಾಪತಿ ಶ್ರೀನಿವಾಸ ಗೌಡ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.

ತೇರದಾಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವೆ ಉಮಾಶ್ರೀ ಅವರಿಗೆ ಟಿಕೆಟ್ ಕೈ ತಪ್ಪಿದ್ದು, ಸಿದ್ದಪ್ಪ ಕೊನ್ನೂರು ಅವರ ಹೆಸರು ‘ಫೈನಲ್’ ಆಗಿದೆ. ನವಲಗುಂದಾ ಕ್ಷೇತ್ರಕ್ಕೆ ಜೆಡಿಎಸ್ ತೊರೆದು ಕಾಂಗ್ರೆಸ್‌ಗೆ ಬಂದಿದ್ದ ಎನ್‌ ಎಚ್‌ ಕೋನರೆಡ್ಡಿ ಅವರಿಗೆ ನಿರೀಕ್ಷೆಯಂತೆಯೇ ಟಿಕೆಟ್ ಲಭಿಸಿದೆ.

ಶಿಕಾರಿಪುರದಲ್ಲಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ವಿರುದ್ಧ ಜಿ ಬಿ ಮಾಲತೇಶ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.ಕಾಂಗ್ರೆಸ್ ಪಟ್ಟಿ 1

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...