ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ಮುಂಬೈನಲ್ಲಿ ‘ಇಂಡಿಯಾ’ ಮೂರನೇ ಸಭೆ

Date:

ಪ್ರತಿಪಕ್ಷಗಳ ಒಕ್ಕೂಟ ‘ಇಂಡಿಯಾ’ದ ಮೂರನೇ ಸಭೆಯು ಮುಂಬೈನಲ್ಲಿ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ನಡೆಯಲಿದೆ ಎಂದು ಕಾಂಗ್ರೆಸ್  ಮತ್ತು ಶಿವಸೇನಾ ಉದ್ಧವ್ ಠಾಕ್ರೆ ಬಣ ತಿಳಿಸಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನು ಮರುಸ್ಥಾಪಿಸಲು ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದ ಒಂದು ದಿನದ ನಂತರ ಮೂರನೇ ಸಭೆಯ ದಿನಾಂಕ ಘೋಷಿಸಲಾಗಿದೆ. ಈ ಹಿನ್ನೆಲೆ ಸಭೆಯು ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತದೆ ಎಂದು ವಿಪಕ್ಷಗಳ ನಾಯಕರು ತಿಳಿಸಿದ್ದಾರೆ.

ಮುಂಬೈನಲ್ಲಿ ನಡೆದ ಮಹಾ ವಿಕಾಸ್ ಅಘಾಡಿ ಸಭೆಯ ನಂತರ ಮಾತನಾಡಿದ ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್, “ಗ್ರ್ಯಾಂಡ್ ಹಯಾತ್‌ನಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಸಭೆಯಲ್ಲಿ ಕನಿಷ್ಠ ಐವರು ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ರಾಹುಲ್ ಗಾಂಧಿ ಕೂಡ ಉಪಸ್ಥಿತರಿರುತ್ತಾರೆ. ಸಭೆಯು ಆಗಸ್ಟ್ 31 ರಂದು ಪ್ರಾರಂಭವಾಗಲಿದ್ದು,ಉದ್ಧವ್ ಠಾಕ್ರೆ ಆಯೋಜಿಸುತ್ತಾರೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಹಿಂದಿ ರಾಷ್ಟ್ರ ಭಾಷೆ: ಪ್ರಕರಣವೊಂದರಲ್ಲಿ ಹಿಂದಿಯಲ್ಲಿ ಸಾಕ್ಷ್ಯ ನುಡಿಯಲು ಹೇಳಿದ ಸುಪ್ರೀಂ ನ್ಯಾಯಾಧೀಶರು

ಸಭೆಯಲ್ಲಿ ಹಲವು ಪ್ರಮುಖ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದು ಎಂದು ಕಾಂಗ್ರೆಸ್ ಮಹಾರಾಷ್ಟ್ರ ಮುಖ್ಯಸ್ಥ ನಾನಾ ಪಟೋಲೆ ತಿಳಿಸಿದ್ದಾರೆ. ಜೂನ್ 23 ರಂದು ಪಾಟ್ನಾದಲ್ಲಿ 16 ವಿರೋಧ ಪಕ್ಷಗಳ ಮೊದಲ ಸಭೆ ನಡೆಯಿತು. ಅದರ ನಂತರ ಜುಲೈ 17-18 ರಂದು ಬೆಂಗಳೂರಿನಲ್ಲಿ 26 ಪಕ್ಷಗಳ ಸಭೆ ನಡೆಯಿತು. ಇಲ್ಲಿ ಒಕ್ಕೂಟಕ್ಕೆ ‘ಇಂಡಿಯಾ’ ಎಂಬ ಹೆಸರು ನೀಡಲಾಯಿತು.

ಬೆಂಗಳೂರು ಸಭೆಯ ನಂತರ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೈತ್ರಿಗಾಗಿ 11 ಸದಸ್ಯರ ಸಮನ್ವಯ ಸಮಿತಿ ರಚನೆ ಹಾಗೂ ಸಂಚಾಲಕರನ್ನು ಹೆಸರಿಸಲಾಗುವುದು ಎಂದು ಹೇಳಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ: ಸಿದ್ದರಾಮಯ್ಯ

ಬೆಂಗಳೂರಿನ ದಿ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರುವ ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ....

‘ಹಕ್ಕಿ ಗೂಡು ಕಟ್ಟಿದ್ದಂತೆ ಮನೆ ನಿರ್ಮಿಸಿದ್ದೆವು’; ಸಿಲ್ಕ್ಯಾರಾ ‘ಹೀರೋ’ ಹಸನ್‌ ಪತ್ನಿಯ ಅಳಲು

ಸಿಲ್ಕ್ಯಾರಾ ಕಾರ್ಮಿಕರ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರ್‍ಯಾಟ್ ಹೋಲ್ ಮೈನರ್ಸ್...

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ | ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕೇಂದ್ರದ ತಡೆ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಬೇಕಿದ್ದ ದೆಹಲಿ ರೈತ ಹೋರಾಟದ ಕುರಿತ ‘ಕಿಸಾನ್...

ಚೀನಾದ ಒಪ್ಪಂದ ರದ್ದು; ಭಾರತದೊಂದಿಗೆ ಶ್ರೀಲಂಕಾ ಇಂಧನ ಒಪ್ಪಂದ

ಚೀನಾದ ಸಂಸ್ಥೆಯೊಂದು ಪಡೆದ ಟೆಂಡರ್‌ಅನ್ನು ರದ್ದುಗೊಳಿಸಿರುವ ಶ್ರೀಲಂಕಾ, ಮೂರು ಸೌರ ಮತ್ತು...