ಈ ಸರ್ಕಾರ ಇರುವುದೇ ದರೋಡೆಕೋರರನ್ನು ರಕ್ಷಿಸಲು: ಎಚ್ ಡಿ ಕುಮಾರಸ್ವಾಮಿ

Date:

Advertisements

ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಡಿ ಕೆ ಶಿವಕುಮಾರ್ ವಿರುದ್ಧ 2019ರಲ್ಲಿ ಸಿಬಿಐ ತನಿಖೆಗೆ ಬಿಎಸ್ ಯಡಿಯೂರಪ್ಪ ನೇತೃತ್ವದ ಅಂದಿನ ಬಿಜೆಪಿ ಸರ್ಕಾರ ನೀಡಿದ್ದ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಾಪಸ್ ಪಡೆದಿರುವುದಕ್ಕ ವಿಪಕ್ಷಗಳು ಕಿಡಿಕಾರಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​ಡಿ ಕುಮಾರಸ್ವಾಮಿ, ‘ಈ ಸರ್ಕಾರ ಇರುವುದೇ ದರೋಡೆಕೋರರನ್ನು ರಕ್ಷಿಸಲು’ ಎಂದು ತಿಳಿಸಿದ್ದಾರೆ.

‘​ದರೋಡೆಕೋರರನ್ನು ರಕ್ಷಣೆ ಮಾಡಲು ಈ ಸರ್ಕಾರ ಇರುವುದು. ಕೋರ್ಟ್​​ನಲ್ಲಿ ಏನು ನಿರ್ಧಾರ ಆಗುತ್ತೆಂದು ನೋಡಿ ಮಾತಾಡುತ್ತೇನೆ. ಮರ್ಯಾದೆ ಇಲ್ಲದವರಿಗೆ ಕೋರ್ಟ್​​ನಲ್ಲಿ ಇದ್ದರೇನು, ಎಲ್ಲಿದ್ದರೇನು? ಎಲ್ಲವನ್ನೂ ದುಡ್ಡಿನಿಂದ ಕೊಂಡುಕೊಳ್ಳುತ್ತೇವೆ ಅನ್ನೋ ದುರಹಂಕಾರ ಇವರಿಗೆ ಇದೆ. ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ನಾನು ಕೂಡ ಹೆಚ್ಚು ಮಾತನಾಡುವುದಿಲ್ಲ. ಈ ಬಗ್ಗೆ ಎಲ್ಲವನ್ನೂ ಅರಿತುಕೊಂಡ ಬಳಿಕ ಮಾತನಾಡುವೆ’ ಎಂದು ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

Advertisements

ಏನಿದು ಬೆಳವಣಿಗೆ?

ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ವಿರುದ್ಧ 2019ರಲ್ಲಿ ಸಿಬಿಐ ತನಿಖೆಗೆ ಬಿಎಸ್ ಯಡಿಯೂರಪ್ಪ ನೇತೃತ್ವದ ಅಂದಿನ ಬಿಜೆಪಿ ಸರ್ಕಾರ ಅನುಮತಿಯನ್ನು ನೀಡಿತ್ತು. ಆದರೆ ಇದೀಗ ಈ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಾಪಸ್ ಪಡೆದಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X