ಇದೊಂದು ಅಸಮರ್ಥ ಸಂಪುಟ; ಅಭಿವೃದ್ಧಿ ಶೂನ್ಯ ಸರಕಾರ: ಶಾಸಕ ಸುನೀಲ್ ಕುಮಾರ್ ಟೀಕೆ

Date:

ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರದ ಒಂದು ವರ್ಷದ ಅವಧಿಯನ್ನು ಅಸಮರ್ಥ ಸಂಪುಟ, ಅಭಿವೃದ್ಧಿಶೂನ್ಯ ಸರಕಾರ ಎಂದು ವಿಶ್ಲೇಷಿಸಬಹುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್ ಟೀಕಿಸಿದರು.

ಬೆಂಗಳೂರಿನಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ವಿಧಾನಸಭಾ ಚುನಾವಣೆ ಮುಗಿದು ಸರಕಾರ ರಚನೆಯಾಗಿ ಒಂದು ವರ್ಷ ಮುಗಿಯುತ್ತಿದೆ. ಗೊತ್ತುಗುರಿ ಇಲ್ಲದ ಆಡಳಿತವನ್ನು ಕರ್ನಾಟಕದ ಜನತೆ ಕಳೆದ ಒಂದು ವರ್ಷದಲ್ಲಿ ನೋಡಿದ್ದಾರೆ. ಅಭಿವೃದ್ಧಿ ಶೂನ್ಯ ಸರಕಾರ ಇದು” ಎಂದರು.

“ಈ ಒಂದು ವರ್ಷದ ಅವಧಿಯಲ್ಲಿ ಯಾವ ಯೋಜನೆಗೆ ಅನುದಾನ ಕೊಟ್ಟಿದ್ದಾರೆ ಎಂಬ ಮಾಹಿತಿಯನ್ನು ಸರಕಾರ ಬಿಡುಗಡೆ ಮಾಡಬೇಕು. ಸ್ಥಳೀಯ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಯಾವ ಯೋಜನೆಗಳಿಗೆ, ಎಷ್ಟು ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನ ಕೊಟ್ಟಿದ್ದಾರೆ ಎಂದು ಸರಕಾರ ಬಹಿರಂಗಪಡಿಸಿದರೆ ಸಾಕು” ಎಂದು ವ್ಯಂಗ್ಯವಾಗಿ ನುಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಇಂಥ ಅಭಿವೃದ್ಧಿಶೂನ್ಯ ಆಡಳಿತ, ಸರಕಾರವನ್ನು ಕರ್ನಾಟಕದ ಜನತೆ ಯಾವತ್ತೂ ನೋಡಿರಲಿಲ್ಲ. ವಿಧಾನಸಭಾ ಕ್ಷೇತ್ರಗಳು, ಇಲಾಖೆಗಳಿಗೆ ಒಂದು ರೂಪಾಯಿ ಅನುದಾನವನ್ನೂ ಕೊಡದೆ ಒಂದು ವರ್ಷ ಕಾಲವನ್ನು ಈ ಸರಕಾರ ಕಳೆದಿದೆ. ನಾವೆಲ್ಲ ಶಾಸಕರು ಒಂದು ವರ್ಷದಿಂದ ಒಂದು ಗುದ್ದಲಿ ಪೂಜೆ ಮಾಡಲಾಗಿಲ್ಲ. ಒಂದು ಅನುದಾನ ಬಂದಿದೆ ಎಂದು ಜನರ ಹತ್ತಿರ ಹೋಗಲೂ ಆಗಿಲ್ಲ” ಎಂದು ವಿವರಿಸಿದರು.

ಸರಕಾರಿ ನೌಕರರಿಗೆ ಸಂಬಳ ಸಿಗುತ್ತಿಲ್ಲ

“ಜನರು ಕೂಡ ಈ ಸರಕಾರದಿಂದ ಅನುದಾನ ಬರುವುದಿಲ್ಲ ಎಂಬಷ್ಟರ ಮಟ್ಟಿಗೆ ಪಶ್ಚಾತ್ತಾಪ ಪಡುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಸಂಪುಟವನ್ನು ಗಮನಿಸಿದರೆ ಇಡೀ ಸಂಪುಟವೇ ಅಸಮರ್ಥವಾಗಿದೆ. ಸಚಿವರ ಮೇಲೆ ಹಿಡಿತವಿಲ್ಲದೆ ಮುಖ್ಯಮಂತ್ರಿಗಳು ಅಸಮರ್ಥವಾಗಿದ್ದಾರೆ. ಯೋಜನೆ ರೂಪಿಸುವುದರಲ್ಲಿ ಮುಖ್ಯಮಂತ್ರಿಗಳು ಅಸಮರ್ಥವಾಗಿದ್ದಾರೆ. ಸರಕಾರಿ ನೌಕರರಿಗೆ ಸಂಬಳ ಸಿಗುತ್ತಿಲ್ಲ ಅನ್ನುವಷ್ಟರ ಮಟ್ಟಿಗೆ ಅಸಮರ್ಥ ಮುಖ್ಯಮಂತ್ರಿಯ ಆಡಳಿತವನ್ನು ಕರ್ನಾಟಕದಲ್ಲಿ ನೋಡುತ್ತಿದ್ದೇವೆ” ಎಂದು ಆರೋಪಿಸಿದರು.‌

ಈ ಸುದ್ದಿ ಓದಿದ್ದೀರಾ? ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ, ಬಿಜೆಪಿ ಮೇಲೆ ಆರೋಪ: ವಿಪಕ್ಷ ನಾಯಕ ಆರ್. ಅಶೋಕ್

“ಕಾನೂನು, ಸುವ್ಯವಸ್ಥೆ ನಿಭಾಯಿಸುವುದರಲ್ಲಿ ಗೃಹ ಸಚಿವರು ಸಂಪೂರ್ಣವಾಗಿ ವಿಫಲವಾಗಿದ್ದಾರೆ. ಬರ ಪರಿಹಾರದಲ್ಲಿ ಕಂದಾಯ ಸಚಿವರು ಎಷ್ಟು ದೊಡ್ಡ ಪ್ರಮಾಣದಲ್ಲಿ ವೈಫಲ್ಯ ಕಂಡಿದ್ದಾರೆಂದರೆ ಮಂತ್ರಿಮಂಡಲದ ಒಬ್ಬ ಸದಸ್ಯರೂ ಬರ ಪರಿಹಾರದ ಸ್ಥಳಕ್ಕೆ ಭೇಟಿ ಕೊಟ್ಟಿಲ್ಲ ಎಂದು ಅವರು ಆಕ್ಷೇಪಿಸಿದರು. ಹಣ ಬಿಡುಗಡೆ ಮಾಡಿಲ್ಲ. ಕಂದಾಯ ಸಚಿವರಿಂದ ಗ್ರಾಮೀಣಾಭಿವೃದ್ಧಿ ಸಚಿವರವರೆಗೆ ಎಲ್ಲ ಸಂಪುಟವು ಬರ ಪರಿಹಾರದ ನಿರ್ವಹಣೆಯಲ್ಲಿ ಅಸಮರ್ಥವಾಗಿದೆ” ಎಂದು ಹೇಳಿದರು.

“ರೈತರಿಗೆ ಈಗ ಹೊಸ ಸಾಲ ಸಿಗುತ್ತಿಲ್ಲ. ರೈತರ ಸಾಲದ ಬಡ್ಡಿ ಮನ್ನಾ ಮಾಡಿದ್ದಾಗಿ ಘೋಷಣೆ ಮಾಡಿ, 496 ಕೋಟಿ ಅನುದಾನವನ್ನು ಬಿಡುಗಡೆ ಮಾಡದ ಕಾರಣ ಪಿಎಲ್‍ಡಿ ಬ್ಯಾಂಕ್, ಕೃಷಿ ಪತ್ತಿನ ಸಹಕಾರಿ ಸಂಸ್ಥೆಗಳಲ್ಲಿ ರೈತರಿಗೆ ಮರುಸಾಲ ಸಿಗದ ಪರಿಸ್ಥಿತಿ ನಿರ್ಮಾಣವಾಗಿದ್ದರೆ ಅದಕ್ಕೆ ಕೃಷಿ- ಸಹಕಾರಿ ಸಚಿವರು ಇವತ್ತು ಅಸಮರ್ಥವಾಗಿರುವುದೇ ಕಾರಣ” ಎಂದು ವಿಶ್ಲೇಷಿಸಿದರು.

“ಬ್ರ್ಯಾಂಡ್ ಬೆಂಗಳೂರು ಇವತ್ತು ದಿಕ್ಕೆಟ್ಟ ಬೆಂಗಳೂರಾಗಿದೆ. ಬೆಂಗಳೂರಿಗೆ ಯಾವ ರೀತಿಯ ಯೋಜನೆ ರೂಪಿಸುವುದರಲ್ಲಿ ನಗರಾಭಿವೃದ್ಧಿ ಸಚಿವರು ಅಸಮರ್ಥರಾಗಿದ್ದಾರೆ. ಇದೊಂದು ಅಸಮರ್ಥ ಸಂಪುಟ; ಅಭಿವೃದ್ಧಿ ಶೂನ್ಯ ಸರಕಾರ. ಬೆಲೆ ಹೆಚ್ಚಳ ದೊಡ್ಡ ಪ್ರಮಾಣದಲ್ಲಿ ನಡೆದಿದೆ. ಪಿಕ್ ಪಾಕೆಟ್ ಕಾಂಗ್ರೆಸ್ ಎಂದು ನಾವು ಈ ಹಿಂದೆ ಹೇಳಿದ್ದೆವು. ಅದನ್ನು ಸರಕಾರ ಸರಿ ಮಾಡಿಕೊಂಡಿಲ್ಲ.
ವಿಧಾನಸೌಧದ ಆಡಳಿತ ಯಾರದೋ ಮನೆಯ ಕಿಚನ್‍ನಲ್ಲಿ ನಡೆಯುವಂತೆ ಭಾಸವಾಗುತ್ತಿದೆ. ಒಂದು ವರ್ಷದ ಈ ಸರಕಾರದ ಅವ್ಯವಸ್ಥೆ ದಿನದಿಂದ ದಿನಕ್ಕೆ ಬಯಲಾಗುತ್ತಿದೆ. ಈ ಅಸಮರ್ಥ ಸರಕಾರದ ವಿರುದ್ಧ ಬಿಜೆಪಿ ಜನಾಂದೋಲನ ನಡೆಸಲಿದೆ” ಎಂದು ಪ್ರಕಟಿಸಿದರು.

ರಾಜ್ಯ ಮುಖ್ಯ ವಕ್ತಾರ ಅಶ್ವಥನಾರಾಯಣ್, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರಾಜ್ಯ ವಕ್ತಾರರಾದ ಡಾ. ನರೇಂದ್ರ ರಂಗಪ್ಪ, ಪ್ರಕಾಶ್ ಶೇಷರಾಘವಾಚಾರ್, ಮೋಹನ್ ವಿಶ್ವ, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ರಾಜ್ಯ ಮಾಧ್ಯಮ ಸಹ-ಸಂಚಾಲಕ ಪ್ರಶಾಂತ್ ಕೆಡೆಂಜಿ ಅವರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ: ಮುಖ್ಯ ಚುನಾವಣಾ ಆಯುಕ್ತ

ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್...

ಮೈಸೂರು: ಮೇಕೆ ಮೇಯಿಸುತ್ತಿದ್ದ ಮಹಿಳೆ ಹೊತ್ತೊಯ್ದ ಹುಲಿ

ಮೇಕೆಗಳನ್ನು ಮೇಯಿಸುತ್ತಿದ್ದಾಗ ಹುಲಿ ಯೊಂದು ಹಠಾತ್ ದಾಳಿ ನಡೆಸಿ ಮಹಿಳೆಯನ್ನು ಹೊತ್ತೊಯ್ದ...

ಹಾಸನದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ 6 ಜನರ ಸಾವು

ಇಂದು ಮುಂಜಾನೆ ಹಾಸನ ಹೊರವಲಯದ ಕಂಡ್ಲಿ ಈಚನಹಳ್ಳಿ ಗ್ರಾಮ ಬಳಿಯ ಬೆಂಗಳೂರು-ಮಂಗಳೂರು...

ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ...