ಇದು ನನ್ನ ಕೊನೆ ಚುನಾವಣೆ; ಸಕ್ರಿಯ ರಾಜಕಾರಣದಲ್ಲಿದ್ದು ಸೇವೆ ಮಾಡುವೆ: ಸಿಎಂ ಸಿದ್ದರಾಮಯ್ಯ

Date:

  • ವರುಣಾ ಕ್ಷೇತ್ರದ ಕಾರ್ಯಕರ್ತರು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ
  • ರಾಜ್ಯದ ಜನ ಬಿಜೆಪಿಯ ಸುಳ್ಳಿನ ಸಂಸ್ಕಾರ ಸೋಲಿಸಿ ಸತ್ಯದ ಘನತೆ ಗೆಲ್ಲಿಸಿದ್ದಾರೆ

ಇದು ನನ್ನ ಕೊನೆ ಚುನಾವಣೆ. ಆದರೆ ನಾನು ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿದ್ದು ಜನರ ಸೇವೆಯನ್ನು ಮುಂದುವರೆಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವರುಣಾ ವಿಧಾನಸಭಾ ಕ್ಷೇತ್ರದ ಸುತ್ತೂರಿನಲ್ಲಿ ನಡೆದ ಬೃಹತ್ ಕೃತಜ್ಞತಾ ಸಮರ್ಪಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ಷೇತ್ರದ ಜನರಿಗೆ ಧನ್ಯವಾದ ಸಲ್ಲಿಸಿದರು.

2013 ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ನುಡಿದಂತೆ ನಡೆದು ಸಮಾಜದ ಎಲ್ಲಾ ಜಾತಿ, ಧರ್ಮ ಮತ್ತು ಎಲ್ಲಾ ವರ್ಗಗಳ ಪರವಾಗಿ ಕಲ್ಯಾಣ ಕಾರ್ಯಕ್ರಮ ರೂಪಿಸಿದ್ದೆ. ಈ ಬಾರಿ ಇನ್ನಷ್ಟು ಪರಿಣಾಮಕಾರಿಯಾದ ಕಲ್ಯಾಣ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ನಾಡಿಗೆ ನೀಡಲಿದೆ ಎಂದವರು ಹೇಳಿದರು.

ಬಸವಾದಿ ಶರಣರು ನುಡಿದಂತೆ ನಡೆದಿದ್ದರು. ಅದನ್ನೇ ನಾನು ಮಾದರಿಯನ್ನಾಗಿ ಇಟ್ಟುಕೊಂಡು ಮೊದಲ ಬಾರಿ ಬಸವ ಜಯಂತಿ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ನುಡಿದಂತೆ ನಡೆದೆ ಎಂದರು.ಸಿದ್ದರಾಮಯ್ಯ

ಮುಖ್ಯಮಂತ್ರಿ ಕುರ್ಚಿ ಸುಖದ ಸುಪ್ಪತ್ತಿಗೆ ಅಲ್ಲ. ಜನರ ಬದುಕನ್ನು ಸುಧಾರಿಸಲು ಸಿಗುವ ಅವಕಾಶ. ಪ್ರಧಾನಿ ನರೇಂದ್ರ ಮೋದಿಯವರು, ಕಾಂಗ್ರೆಸ್ ಗ್ಯಾರಂಟಿಗಳು ಜಾರಿ ಆಗುವುದಿಲ್ಲ, ರಾಜ್ಯ ದಿವಾಳಿ ಆಗ್ತದೆ ಎಂದಿದ್ದರು. ನಾವು ಈಗ ಐದನ್ನೂ ಜಾರಿ ಮಾಡಿದ್ದೇವೆ.

ಕಾಂಗ್ರೆಸ್ ಘೋಷಿಸಿದ ಬಡವರ-ಮಧ್ಯಮ ವರ್ಗದವರ ಪರವಾದ ಯೋಜನೆ ಘೋಷಿಸಿದಾಗ ಪ್ರಧಾನ ಮಂತ್ರಿ ಮೋದಿಯವರು ಜನರಿಗೆ ಅನುಕೂಲ ಮಾಡುವ ನಮ್ಮ ಯೋಜನೆಗೆ ತಮ್ಮ ಸಹಕಾರ ನೀಡಬೇಕಿತ್ತು. ಆದರೆ ಮೋದಿ ಅವರಿಗೆ ಬಡವರ-ಮಧ್ಯಮ ವರ್ಗದವರ ಪ್ರಗತಿ, ಅಭಿವೃದ್ಧಿ ಬೇಕಾಗಿಲ್ಲ. ಅದಕ್ಕೇ ಬಿಜೆಪಿಯವರು ಜನರಲ್ಲಿ ತಮ್ಮ ಸಂಪ್ರದಾಯದಂತೆ ಸುಳ್ಳುಗಳನ್ನು ಬಿತ್ತುತ್ತ ಗೊಂದಲ ಸೃಷ್ಟಿಸುತ್ತಿದ್ದಾರೆ. ಜನರಿಗೆ ಅನುಕೂಲ ಆಗುವುದು ಅವರಿಗೆ ಬೇಕಾಗಿಲ್ಲ, ಬಿಜೆಪಿ ತನ್ನ ಜಾಯಮಾನದಲ್ಲೇ ಮಾಡದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.ಸಿದ್ದರಾಮಯ್ಯ

2024 ರಲ್ಲೂ ಗೆಲ್ತೀವಿ-ಬೆಲೆ ಇಳಿಸ್ತೀವಿ

“ಗಗನಕ್ಕೆ ಏರಿರುವ ರಸಗೊಬ್ಬರ ಬೆಲೆಯನ್ನು ಕಡಿಮೆ ಮಾಡಿ” ಎಂದು ಸಭೆಯಲ್ಲಿದ್ದ ರೈತರು ಕೂಗಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು, “ರಸಗೊಬ್ಬರ ಬೆಲೆ ಏರಿಸಿರುವುದು ಪ್ರಧಾನಿ ಮೋದಿ ಸರ್ಕಾರ. ಬೆಲೆ ಇಳಿಸಬೇಕಾಗಿರುವುದೂ ಮೋದಿ ಸರ್ಕಾರವೇ, ಆದರೆ ಅವರು ಬೆಲೆ ಇಳಿಸಲ್ಲ. ನಾವು 2024 ರ ಲೋಕಸಭಾ ಚುನಾವಣೆಯಲ್ಲೂ ಗೆಲ್ತೀವಿ. ಕೇಂದ್ರದಲ್ಲೂ ಅಧಿಕಾರಕ್ಕೆ ಬರ್ತೀವಿ. ಆಗ ಪೆಟ್ರೋಲ್, ಡೀಸೆಲ್, ಅಡಿಗೆ ಅನಿಲ್, ರಸಗೊಬ್ಬರ ಬೆಲೆಗಳನ್ನು ಇಳಿಸುತ್ತೇವೆ ಎಂದರು.

ಈ ಸುದ್ದಿ ಓದಿದ್ದೀರಾ?:ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಗೊಂದಲಗಳಿಲ್ಲ: ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ

ಪ್ರಧಾನಿಯಾಗಿ ಎಂದ ಜನ

ಕೃತಜ್ಞತಾ ಸಮಾವೇಶಸಲ್ಲಿ ನೆರೆದಿದ್ದ ಜನರನ್ನುದ್ದೇಶಿಸಿ ಮಾತನಾಡುವ ವೇಳೆ, ಮೋದಿ ಸರ್ಕಾರ ಏರಿಸಿರುವ ಬೆಲೆ ಏರಿಕೆಯನ್ನು ನಾವು ಅಧಿಕಾರಕ್ಕೆ ಬಂದು ಇಳಿಸುತ್ತೇವೆ. ಇಲ್ಲಿನಂತೆಯೇ ಜನರಿಗೆ ಉಪಯೋಗವಾಗುವ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು. ಈ ವೇಳೆ ಜನಸ್ತೋಮದ ನಡುವಿದ್ದ ಹಲವರು “ನೀವು ಪ್ರಧಾನಿ ಆಗಬೇಕು” ಎಂದು ಮುಗಿಲು ಮುಟ್ಟುವಂತೆ ಕೂಗಿದರು.ಸಿದ್ದರಾಮಯ್ಯ

ಚಾನಲ್ ಗಳ ಚರ್ಚೆಗೆ ತಲೆ ಕೆಡಿಸಿಕೊಳ್ಳಬೇಡಿ

ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿರುವ ಗ್ಯಾರಂಟಿ ಗೊಂದಲದ ವಿಚಾರವಾಗಿ ಸಭೆಗೆ ತಿಳಿಸಿದ ಸಿದ್ದರಾಮಯ್ಯ ಚಾನಲ್ ನವರು ಬಡವರ-ಮಧ್ಯಮವರ್ಗದವರ ಸಂಕಷ್ಟ ಕಡಿಮೆ ಮಾಡಲು ನಾವು ಜಾರಿಗೆ ತಂದ ಯೋಜನೆಗಳನ್ನು, “ಅವರಿಗಾ-ಇವರಿಗಾ” ಎನ್ನುವ ಗೊಂದಲ ಸೃಷ್ಟಿಸುತ್ತಾರೆ. ನೀವು ಗೊಂದಲಕ್ಕೆ ಒಳಗಾಗಬೇಡಿ. ಅರ್ಜಿ ಹಾಕಿ ಯೋಜನೆಗಳ ಅನುಕೂಲ ಪಡೆಯಿರಿ ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಜಾತಿ ನಿಂದನೆ; ನಟ ಉಪೇಂದ್ರ ಬಂಧನಕ್ಕೆ ಆಗ್ರಹ

ನಟ ಉಪೇಂದ್ರ ಅವರು, ʼಊರು ಇದ್ದಲ್ಲಿ ಹೊಲಗೇರಿʼ ಎನ್ನುವ ಮಾತನ್ನು ಹೇಳುವುದರ...

ಕಾವೇರಿ ವಿವಾದ | ಬೆಂಗಳೂರು ಬಂದ್‌ಗೆ ಎಫ್‌ಐಟಿಯು ಬೆಂಬಲ: ಅಬ್ದುಲ್ ರಹಿಮಾನ್

ಕಾವೇರಿ ಜಲ ವಿವಾದದ ಹಿನ್ನಲೆಯಲ್ಲಿ ಮಂಗಳವಾರ ನಡೆಯಲಿರುವ ಬೆಂಗಳೂರು ಬಂದ್‌ಗೆ ಫೆಡರೇಶನ್...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲು ಮಸೂದೆಗೆ ತಿದ್ದುಪಡಿ: ಮಲ್ಲಿಕಾರ್ಜುನ ಖರ್ಗೆ

2024ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮಸೂದೆಗೆ ತಿದ್ದುಪಡಿ ತರುವುದಾಗಿ...

ಬೀದರ್‌ | ಪಡಿತರದಲ್ಲಿ ಅಕ್ರಮ; 22 ನ್ಯಾಯಬೆಲೆ ಅಂಗಡಿಗಳ ಅಮಾನತು

ಪಡಿತರ ಮಾರಾಟದಲ್ಲಿ ನಿಗದಿತ ಬೆಲೆಗಿಂತ ಹೆಚ್ಚು ದರ ವಿಧಿಸುವುದು, ಇಲ್ಲವೇ ಬಯೋಮೆಟ್ರಿಕ್‌...