ತಮ್ಮ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಮತ್ತು 14 ಬಾರಿ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಇದೇ ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂತಹ ಪರಿಸ್ಥಿತಿ ಒದಗಿಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಮಂಡಲದ ಅಧಿವೇಶನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದು ಬಿಟ್ಟು, ಹೊರಗೆ ಹೋರಾಟ ಮಾಡುವುದರಿಂದ ಪ್ರಯೋಜನವಿಲ್ಲ ಎಂದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಡೆಯನ್ನು ಟೀಕಿಸಿದರು.
ವಿರೋಧ ಪಕ್ಷದವರು ಚರ್ಚೆಗಳಲ್ಲಿ ಭಾಗವಹಿಸಲಿ ಎಂದು ಮೂರು ವಾರಗಳ ಕಾಲ ಅಧಿವೇಶನ ನಡೆಸಲಾಯಿತು. ಆದರೆ, ವಿಧಾನಸಭೆಗೆ ಆಗಮಿಸದೆ ಗದ್ದಲದಲ್ಲೇ ಸಮಯ ವ್ಯರ್ಥಗೊಳಿಸಿದರು. ಅವರ ನಡವಳಿಕೆ ಸರಿಯಿರದಿದ್ದ ಕಾರಣ, ಸಭಾಧ್ಯಕ್ಷರು ಕ್ರಮ ತೆಗೆದುಕೊಂಡಿದ್ದಾರೆ. ಸಭಾಧ್ಯಕ್ಷರ ಕ್ರಮಕ್ಕೂ, ನಮಗೂ ಯಾವುದೇ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು.
ಈ ಸುದ್ದಿ ಓದಿದ್ದೀರಾ? ಮಣಿಪುರದ ಹಿಂಸಾಚಾರಕ್ಕೆ ಹಿಂದೆ ಆಳಿದ ಪಕ್ಷಗಳೇ ಕಾರಣ: ಶೋಭಾ ಕರಂದ್ಲಾಜೆ ಆರೋಪ
ಕಾಂಗ್ರೆಸ್ ಕೈ ಕಟ್ಟಿಹಾಕಿತ್ತು ಎನ್ನುವುದು ಸುಳ್ಳು
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ನೈಸ್ ಹಗರಣದ ಬಗ್ಗೆ ಪ್ರಸ್ತಾಪಿಸಿರುವ ಬಗ್ಗೆ ಉತ್ತರಿಸಿ, ಕಾಂಗ್ರೆಸ್ ಸರ್ಕಾರದ ನಂತರ ಮೈತ್ರಿ ಸರ್ಕಾರ ಬಂದ ಸಂದರ್ಭದಲ್ಲಿಯೇ ಕ್ರಮ ತೆಗೆದುಕೊಳ್ಳಬಹುದಿತ್ತು. ತನಿಖೆ ನಡೆಸಲು ಕಾಂಗ್ರೆಸ್ ನವರು ಕೈಕಟ್ಟಿದ್ದರು ಎನ್ನುವುದು ಸುಳ್ಳು. ಸಾಲಮನ್ನಾ ಸೇರಿದಂತೆ ಇತರೆ ಕಾರ್ಯಕ್ರಮಗಳಿಗೆ ಕಾಂಗ್ರೆಸ್ ಬೆಂಬಲ ನೀಡಲಿಲ್ಲವೇ, ಕಾಂಗ್ರಸ್ ಕೈಕಟ್ಟಿ ಹಾಕಿತ್ತು ಎಂದು ರಾಜೀನಾಮೆ ನೀಡಿದರೆ? ತಮ್ಮ ಸ್ವಯಂತಪ್ಪಿನಿಂದಲೇ ಅವರು ಸರ್ಕಾರ ಕಳೆದುಕೊಳ್ಳುವಂತಾಯಿತು ಎಂದು ತಿಳಿಸಿದರು.