ಶಂಕಿತರನ್ನು ಈಗಲೇ ಉಗ್ರರು ಎನ್ನಲು ಆಗದು; ಗೃಹ ಸಚಿವ ಡಾ. ಜಿ ಪರಮೇಶ್ವರ್‌

Date:

ಬೆಂಗಳೂರು ನಗರದಲ್ಲಿ ವಿದ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಬಂಧಿತ ಶಂಕಿತ ಐವರು ಉಗ್ರರನ್ನು ಈಗಲೇ ಟೆರರಿಸ್ಟ್ ಎಂದು ಹೇಳಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್​ ಹೇಳಿದರು.

ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಬ್ಬಾಳ ಠಾಣಾ ವ್ಯಾಪ್ತಿಯಲ್ಲಿ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ಮಾಡಿ ಟೆರರಿಸ್ಟ್‌ ಸಂಪರ್ಕ ಇದೆಯಾ ಎಂದು ನೋಡಲಾಗುತ್ತಿದೆ. ಕೇಂದ್ರ ಕಾರಾಗೃಹ ಸಂಪರ್ಕ ಇಟ್ಟುಕೊಂಡಿರುವುದು ತಿಳಿದು ಬಂದಿದೆ ಎಂದರು.

ಕೆಲವು ಕೃತ್ಯ ಎಸಗುವ ಬಗ್ಗೆ ಮಾಹಿತಿ ದೊರೆತಿದೆ. ಪೊಲೀಸರ ತನಿಖೆ ಆಗಲಿ, ಬಳಿಕ ಎನ್‌ಇಎ ತನಿಖೆ ಬಗ್ಗೆ ನೋಡೋಣ. ಸದ್ಯ ಬಂಧಿತರಿಂದ ಏಳು ಕಂಟ್ರಿಮೇಡ್​ ಪಿಸ್ತೂಲ್, ವಾಕಿಟಾಕಿ, ಆಯುಧ ಸಿಕ್ಕಿವೆ ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೆಲವರು ಬೇಲ್ ಮೇಲೆ ಬಿಡುಗಡೆಯಾಗಿ ವಿಚಾರಣೆ ಎದುರಿಸುತ್ತಿದ್ದಾರೆ. ಕೆಲವರು ಕೊಲೆ, ದರೋಡೆ ಸೇರಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಯಾವ ಸಂಘಟನೆ ಜತೆ ಗುರುತಿಸಿಕೊಂಡಿದ್ದರು ಎಂಬ ಬಗ್ಗೆ ತನಿಖೆಯಿಂದ ತಿಳಿಯಬೇಕಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ವಿಶೇಷ ಸಚಿವ ಸಂಪುಟ ಸಭೆ ಒಪ್ಪಿಗೆ

7 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ

ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬುಧವಾರ ಕೋರ್ಟ್​ಗೆ ಹಾಜರುಪಡಿಸಿದ್ದು, 15 ದಿನ ವಶಕ್ಕೆ ನೀಡುವಂತೆ ಕೋರ್ಟ್​ಗೆ ಮನವಿ ಮಾಡಿದರು. ಆದರೆ, ಸರ್ಕಾರಿ ಅಭಿಯೋಜಕರು ಕೋರ್ಟ್​ಗೆ ಹಾಜರಾಗದ ಹಿನ್ನೆಲೆ ಸ್ವಲ್ಪ ಸಮಯದ ನಂತರ ಸರ್ಕಾರಿ ಅಭಿಯೋಜಕರ ​ಜೊತೆ ಹಾಜರುಪಡಿಸಲು ಸಿಸಿಬಿ ಪೊಲೀಸರಿಗೆ ಎನ್​ಐಎ ವಿಶೇಷ ನ್ಯಾಯಾಲಯ ಸೂಚಿಸಿತ್ತು.

ಸದ್ಯ ಐವರು ಶಂಕಿತ ಉಗ್ರರನ್ನು 7 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ನೀಡಿ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಶಂಕಿತ ಉಗ್ರರಾದ ಸಯ್ಯದ್ ಸುಹೇಲ್, ಉಮರ್, ಜುನೈದ್​, ಮುದಾಸಿರ್, ಜಾಹಿದ್​ ಅವರನ್ನು ಏಳು ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ನೀಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡಲಾಗುವುದು: ರಾಹುಲ್ ಗಾಂಧಿ

ಇಂಡಿಯಾ ಒಕ್ಕೂಟವು ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡುತ್ತದೆ ಮತ್ತು...

ಕೇಂದ್ರೀಯ ಸಂಸ್ಥೆ ದುರುಪಯೋಗ ಪ್ರಶ್ನೆ; ಸಿಡಿಮಿಡಿಗೊಂಡ ಮೋದಿ, ಸ್ಕ್ರಿಪ್ಟ್‌ ಮಿಸ್ ಆಯ್ತ ಎಂದ ನೆಟ್ಟಿಗರು

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಎಎನ್‌ಐಗೆ ಸಂದರ್ಶನ ನೀಡಿದ್ದು, ಕೇಂದ್ರೀಯ...

ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್: ವಿದೇಶದಿಂದ ಬಂದ ಕೂಡಲೇ ಬಂಧನ?

ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್...

ಪಶ್ಚಿಮ ಬಂಗಾಳ ಸೇರಿ ಮೂರು ರಾಜ್ಯಗಳಲ್ಲಿ ಸಿಎಎ ಅಡಿಯಲ್ಲಿ ಪೌರತ್ವ ಆರಂಭ: ಗೃಹ ಸಚಿವಾಲಯ

ಕೇಂದ್ರ ಗೃಹ ಸಚಿವಾಲಯವು ಪಶ್ಚಿಮ ಬಂಗಾಳ ಸೇರಿದಂತೆ ಮೂರು ರಾಜ್ಯಗಳಲ್ಲಿ ಪೌರತ್ವ...