ಸಂಸದರನ್ನು ರಕ್ಷಿಸಬೇಕಾದವರು ತಮ್ಮ ಸಾಂವಿಧಾನಿಕ ಕರ್ತವ್ಯ ಮರೆತಿದ್ದಾರೆ: ಖರ್ಗೆ

Date:

ಸಂಸತ್ತಿನ ಉಭಯ ಸದನಗಳಿಂದ ವಿರೋಧ ಪಕ್ಷದ ಸಂಸದರನ್ನು ಅಮಾನತು ಮಾಡಿದ ಕುರಿತು ಲೋಕಸಭೆ ಸ್ಪೀಕರ್ ಮತ್ತು ರಾಜ್ಯಸಭಾ ಅಧ್ಯಕ್ಷರ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಸಂಸದರನ್ನು ರಕ್ಷಿಸುವ ಜವಾಬ್ದಾರಿ ಹೊತ್ತಿರುವವರು ತಮ್ಮ ಸಾಂವಿಧಾನಿಕ ಕರ್ತವ್ಯಗಳನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯುಸಿ) ಸಭೆಯಲ್ಲಿ ಅವರು ಮಾತನಾಡಿದರು. “ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಹಲವಾರು ಪಾಠಗಳನ್ನು ಕಲಿತಿದೆ. ಆ ಪಾಠಗಳ ಜೊತೆಗೆ 2024ರ ಲೋಕಸಭೆ ಚುನಾವಣೆಯತ್ತ ಗಮನ ಹರಿಸಬೇಕು” ಎಂದು ಪಕ್ಷದ ಮುಖಂಡರಿಗೆ ಸೂಚನೆ ನೀಡಿದ್ದಾರೆ.

“ತೆಲಂಗಾಣ ಹೊರತುಪಡಿಸಿ ಐದು ರಾಜ್ಯಗಳ ಚುನಾವಣೆಯ ಫಲಿತಾಂಶಗಳು ನಿರಾಶಾದಾಯಕವಾಗಿವೆ. ಫಲಿತಾಂಶಗಳ ಕುರಿತು ಕಾಂಗ್ರೆಸ್‌ ಪ್ರಾಥಮಿಕ ವಿಶ್ಲೇಷಣೆಯನ್ನು ನಡೆಸಿದೆ. ಪಕ್ಷದ ಕಾರ್ಯಕ್ಷಮತೆಯ ಹಿಂದಿನ ಕಾರಣಗಳನ್ನು ಗುರುತಿಸಿದೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಫಲಿತಾಂಶಗಳ ಹೊರತಾಗಿಯೂ, ಸೋತ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್‌ ಪಡೆದಿರುವ ಮತ ಹಂಚಿಕೆಯು ಕೆಲವು ಸಕಾರಾತ್ಮಕ ಭರವಸೆಗಳನ್ನು ನೀಡಿದೆ. ಇದು ನಮಗೆ ಒಂದು ನಿರ್ದಿಷ್ಟ ಭರವಸೆಯನ್ನು ಹುಟ್ಟುಹಾಕಿದೆ. ಸರಿಯಾಗಿ ಗಮನ ಹರಿಸಿದರೆ ನಾವು ಖಂಡಿತವಾಗಿಯೂ ಯಶಸ್ಸು ಗಳಿಸಬಹುದು” ಎಂದು ಖರ್ಗೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2000 ಕೋಟಿ ರೂ. ಮೊತ್ತದ ಅಂತಾರಾಷ್ಟ್ರೀಯ ಮಟ್ಟದ ಡ್ರಗ್ ಜಾಲ ಪತ್ತೆ: ತಮಿಳು ನಿರ್ಮಾಪಕ ಜಾಲದ ಪ್ರಮುಖ ರೂವಾರಿ

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ (ಎನ್‌ಸಿಬಿ) ಹಾಗೂ ದೆಹಲಿ ವಿಶೇಷ ಪೊಲೀಸ್ ಜಂಟಿ...

ಪೊಲೀಸ್‌ ಕಸ್ಟಡಿಯಲ್ಲೇ ನಡೆದಿವೆ 275 ಅತ್ಯಾಚಾರ ಪ್ರಕರಣಗಳು: ಎನ್‌ಸಿಆರ್‌ಬಿ ಡೇಟಾ

2017 ರಿಂದ 2022ರವರೆಗೆ 275 'ಪೊಲೀಸ್‌ ಕಸ್ಟಡಿಯಲ್ಲಿ ಅತ್ಯಾಚಾರ' ಪ್ರಕರಣಗಳು ದಾಖಲಾಗಿವೆ...

ಮಾನನಷ್ಟ ಪ್ರಕರಣಗಳಲ್ಲಿ ಪಕ್ಷವನ್ನೂ ಆರೋಪಿಯಾಗಿ ಮಾಡಬಹುದು: ಕರ್ನಾಟಕ ಹೈಕೋರ್ಟ್

ಮಾನನಷ್ಟ ಮೊಕದ್ದಮೆಗಳಲ್ಲಿ ಒಬ್ಬ ವ್ಯಕ್ತಿ ಮಾತ್ರವಲ್ಲ, ರಾಜಕೀಯ ಪಕ್ಷಗಳಂತಹ ಸಂಸ್ಥೆಗಳು ಸೇರಿದಂತೆ...

ನನ್ನ ವಿರುದ್ಧ ಪ್ರಾಯೋಜಿತ ಅಪಪ್ರಚಾರ ನಡೆಯುತ್ತಿದೆ: ಸಚಿವೆ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು-ಉಡುಪಿ ಜಿಲ್ಲೆಗಳಲ್ಲಿ ಅಲ್ಲಿನ ಸಂಸದೆ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ...