ವಿಶ್ವವಿದ್ಯಾಲಯ ಹೆಸರಿನಲ್ಲಿ ಪ್ರತಿಭಟನೆ ಮಾಡುತ್ತಿರುವವರು ಕೇಂದ್ರದಿಂದ ಹಣ ಕೊಡಿಸಲಿ: ಡಿ.ಕೆ.ಶಿವಕುಮಾರ್

Date:

Advertisements

ನೂತನ ವಿಶ್ವವಿದ್ಯಾಲಯಕ್ಕಾಗಿ ಹೋರಾಟ ಮಾಡುತ್ತಿರುವವರು, ಆ ವಿವಿಗಾಗಿ ಎಷ್ಟು ಹಣ ಕೊಟ್ಟಿದ್ದಾರೆ ಎಂದು ಹೇಳಬೇಕು. ಈ ವಿವಿಗೆ ಕೇಂದ್ರ ಸರ್ಕಾರದಿಂದ ನೂರಾರು ಕೋಟಿ ಅನುದಾನ ಕೊಡಿಸಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

ಬೆಂಗಳೂರು ವಿವಿ ಆವರಣದಲ್ಲಿ ‘ನೂತನ 9 ವಿವಿಗಳ ಮುಚ್ಚುವ ಬಗ್ಗೆ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ’ ಎಂದು ಮಾಧ್ಯಮಗಳು ಕೇಳಿದಾಗ, “ಯಾವುದೇ ವಿವಿ ಮುಚ್ಚುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಈ ವಿವಿಗಳಿಗಾಗಿ ಬಿಜೆಪಿ ಸರ್ಕಾರ ಕೇವಲ 2 ಕೋಟಿ ಹಣವಿಟ್ಟಿತ್ತು. 2 ಕೋಟಿ ಹಣದಲ್ಲಿ ವಿವಿ ಸ್ಥಾಪನೆ ಮಾಡಲು ಆಗುವುದಿಲ್ಲ. ಇದಕ್ಕೆ ನೂರಾರು ಎಕರೆ ಜಾಗ ಬೇಕು. ಬೆಂಗಳೂರು ವಿವಿ ಮಾಡುವಾಗ ಹೇಗೆ 1,200 ಎಕರೆ ಜಮೀನು ಇಟ್ಟು ಸ್ಥಾಪಿಸಿದ್ದರೋ, ಅದೇ ರೀತಿ ಇದರಲ್ಲಿ ಅರ್ಧದಷ್ಟು ಜಾಗವನ್ನಾದರೂ ಮೀಸಲಿಡಬೇಕು” ಎಂದು ತಿಳಿಸಿದರು.

“ಕೇವಲ ಹೆಸರಿಗಾಗಿ ವಿವಿ ಮಾಡಲು ಆಗುವುದಿಲ್ಲ. 20-30 ಕಾಲೇಜುಗಳಿಗೆ ಒಂದು ವಿವಿ ಮಾಡಲು ಸಾಧ್ಯವಿಲ್ಲ. ವಿಸಿ ಹುದ್ದೆಗಾಗಿ ವಿವಿ ಮಾಡಲು ಆಗುವುದಿಲ್ಲ. ಈ ಹಿಂದೆ ಈ ಪ್ರಯತ್ನ ಮಾಡಲಾಗಿತ್ತು. ಮಂಡ್ಯ, ಕೊಡಗು ಭಾಗದ ಅನೇಕ ವಿದ್ಯಾರ್ಥಿಗಳು ನಮಗೆ ಮೈಸೂರು ವಿವಿಯ ಹೆಸರಿನಲ್ಲೇ ಓದಬೇಕು ಡಾ.ರಾಧಾಕೃಷ್ಣ, ಕುವೆಂಪು ಅವರಿದ್ದ ಮೈಸೂರು ವಿವಿಯಲ್ಲಿ ಓದಿದರೆ ನಮಗೂ ಬಹಳ ಗೌರವವಿರುತ್ತದೆ ಎಂದು ಮನವಿ ಮಾಡಿದ್ದಾರೆ. ಇನ್ನು ಸಿಬ್ಬಂದಿಗಳು ತಮ್ಮ ಹಿರಿತನ ವ್ಯರ್ಥವಾಗುತ್ತದೆ ಎಂದು ನೂತನ ವಿವಿಗೆ ಆಗಮಿಸಲು ಮುಂದಾಗುತ್ತಿಲ್ಲ” ಎಂದು ಹೇಳಿದರು.

Advertisements

“ಈ ಹಿನ್ನೆಲೆಯಲ್ಲಿ ಸಮಿತಿ ರಚಿಸಲಾಗಿತ್ತು. ಈ ಸಮಿತಿ ವರದಿ ನೀಡಿತ್ತು. ಇದಕ್ಕಾಗಿ ಸಚಿವ ಸಂಪುಟ ಉಪ ಸಮಿತಿ ಮಾಡಲಾಗಿತ್ತು. ಈ ಸಮಿತಿಯಲ್ಲಿ ನಾನು ಇದ್ದು ಚರ್ಚೆ ಮಾಡಿದ್ದೇನೆ. ಕೆಲವರು ರಾಜಕೀಯವಾಗಿ ಹೋರಾಟ ಮಾಡಬಹುದು. ನಮಗೆ ಮಕ್ಕಳ ವಿದ್ಯಾಭ್ಯಾಸ ಮುಖ್ಯ. ಇದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಬಗ್ಗೆ ಚರ್ಚೆ ಮಾಡುತ್ತೇವೆ. ಈ ವಿಚಾರವಾಗಿ ಇನ್ನು ಯಾವುದೇ ಅಂತಿಮ ತೀರ್ಮಾನ ಮಾಡಿಲ್ಲ. ಪ್ರತಿಭಟನೆ ಮಾಡುವವರು ಮಾಡುತ್ತಿರುತ್ತಾರೆ” ಎಂದರು.

“ವಿವಿ ಮಾಡಿದ್ದೇವೆ ಎಂದು ಹೇಳುತ್ತಿರುವವರು ಆ ವಿವಿಗೆ ಎಷ್ಟು ಹಣ ನೀಡಿದ್ದರು ಎಂದು ಹೇಳಬೇಕಲ್ಲವೇ? 2 ಕೋಟಿಯಲ್ಲಿ ವಿವಿ ಮಾಡಲು ಸಾಧ್ಯವೇ? ಆ 2 ಕೋಟಿಯೂ ಬಿಡುಗಡೆಯಾಗಿಲ್ಲ. ಪ್ರತಿಭಟನೆ ಮಾಡುತ್ತಿರುವವರು ಕೇಂದ್ರ ಸರ್ಕಾರದಿಂದ ನೂರಾರು ಕೋಟಿ ಅನುದಾನ ತಂದು ಕೊಟ್ಟರೆ ಅಗತ್ಯವಿರುವ ಜಾಗ ಖರೀದಿ ಮಾಡಿ ವಿವಿ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಬಹುದು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X