ಮೇಲಕ್ಕೇರಿದವರು ಕೆಳಗಿಳಿಯಲೇಬೇಕು, ಮೋದಿಗೆ ಆ ಸಮಯ ಬಂದಿದೆ: ಸಿಎಂ ಸಿದ್ದರಾಮಯ್ಯ

Date:

Advertisements

“ಪ್ರಧಾನಿ ಮೋದಿ ಸೋಲುತ್ತೇವೆಂದು ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ. ಅವರ ಭಾವನಾತ್ಮಕ ಆಟ ಜನರಿಗೆ ಗೊತ್ತಾಗಿದೆ. ಅವರು ಸುಳ್ಳು ಹೇಳುವುದು, ಭಾವನಾತ್ಮಕವಾಗಿ ಶೋಷಣೆ ಮಾಡುವುದು ಜನರಿಗೆ ಗೊತ್ತಾಗಿದೆ. ಜನರಿಗೆ ಗೊತ್ತಾದ ಮೇಲೆ ಪುನಃ ಅದೇ ತಪ್ಪನ್ನು ಮಾಡುವುದಿಲ್ಲ. ಮೇಲಕ್ಕೇರಿದವರು ಕೆಳಕ್ಕೆ ಇಳಿಯಲೇಬೇಕು” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿರೋಧಪಕ್ಷಗಳು ನನ್ನನ್ನು ಸಮಾಧಿ ಮಾಡಲು ಹೊರಟಿವೆ. ನೀವು ನನ್ನನ್ನು ಕಾಪಾಡಬೇಕು ಎಂದು ಜನತೆಯಲ್ಲಿ ಮಾಡಿರುವ ಮನವಿಗೆ
ಮೈಸೂರಿನ ತಮ್ಮ ನಿವಾಸದಲ್ಲಿ ಪ್ರತಿಕ್ರಿಯೆ ನೀಡಿ, “ವಿರೋಧ ಪಕ್ಷದವರು ಯಾರನ್ನೂ ಸಮಾಧಿ ಮಾಡುವುದಿಲ್ಲ. ಪ್ರಧಾನಿಗಳನ್ನು ರಾಜಕೀಯವಾಗಿ ವಿರೋಧ ಮಾಡುತ್ತಿದ್ದೇವೆ” ಎಂದರು.

“ನರೇಂದ್ರ ಮೋದಿ ಹತ್ತು ವರ್ಷ ಪ್ರಧಾನಿಗಳಾಗಿ ಬಡವರ ಪರವಾಗಿ ಏನೂ ಮಾಡಿಲ್ಲ ಎನ್ನುವುದು ಹಾಗು ಸುಳ್ಳಿನ ಸರದಾರ ಎನ್ನುವುದು ನಮ್ಮ ಆರೋಪ. ಜನರಿಗೆ ನೀಡಿದ್ದ ಯಾವ ಯಾವ ಭರವಸೆಗಳನ್ನು ಈಡೇರಿಸಿಲ್ಲ. ರಾಜಕೀಯವಾಗಿ ಅವರನ್ನು ಸೋಲಿಸಬೇಕೆನ್ನುವುದು ವಿರೋಧ ಪಕ್ಷಗಳ ಗುರಿ. ಏಕೆಂದರೆ ಈ ದೇಶ ಆರ್ಥಿಕ ಹಾಗೂ ಬಡವರ ಅಭಿವೃದ್ಧಿ ಆಗಿಲ್ಲ” ಎಂದರು.

Advertisements

ನೈತಿಕ ಹಕ್ಕಿಲ್ಲ

“ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದಲ್ಲಿ ಬರಗಾಲ ಇರುವುದರಿಂದ ರೈತರ ಸಾಲ ಮನ್ನಾ ಮಾಡಬೇಕು ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಹಿಂದೆ ಸಾಲ ಮನ್ನಾ ಮಾಡಿ ಎಂದಾಗ ನಮ್ಮ ಬಳಿ ಪ್ರಿಂಟಿಂಗ್ ಮಶೀನ್ ಇಲ್ಲ ಎಂದಿದ್ದರು. ಇವರಿಗೆ ಯಾವ ನೈತಿಕತೆ ಇದೆ” ಎಂದು ಪ್ರಶ್ನಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X